5 ಸಾವಿರ ಕೋಟಿ ರೂ.ಗಳ ನೇರ ಬಂಡವಾಳ ಆಕರ್ಷಣೆಗೆ ಒತ್ತು : ಸಿ.ಟಿ.ರವಿ

Sunday, September 27th, 2020
ct-ravi

ಬೆಂಗಳೂರು: ನೂತನ 2020-25 ರ ಪ್ರವಾಸೋದ್ಯಮ ನೀತಿಯು ಇಂದಿನಿಂದ ಮುಂದಿನ 5 ವರ್ಷಗಳವರೆಗೆ ಜಾರಿಯಲ್ಲಿರುತ್ತದೆ. ಈ ನೀತಿ ಅವಧಿಯಲ್ಲಿ ರೂ. 500 ಕೋಟಿ ಗಳ ಸಹಾಯಧನ, ಪ್ರೋತ್ಸಾಹ ಹಾಗೂ ರಿಯಾಯಿತಿಗಳನ್ನು ನೀಡುವ ಮೂಲಕ ರೂ. 5 ಸಾವಿರ ಕೋಟಿಗಳ ನೇರ ಬಂಡವಾಳ ಆಕರ್ಷಣೆಗೆ ಒತ್ತು ನೀಡಲಾಗುತ್ತದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ, ಯುವ ಸಬಲೀಕರಣ ಮತ್ತು ಕ್ರೀಡೆಗಳ ಸಚಿವ ಸಿ.ಟಿ. ರವಿ ಅವರು ತಿಳಿಸಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಮಾರು 30 ಲಕ್ಷ ಜನ ಉದ್ಯೋಗ ಮಾಡುತ್ತಿದ್ದು, […]

ನೂತನ ಪ್ರವಾಸೋದ್ಯಮ ನೀತಿಯು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 

Sunday, September 27th, 2020
Tourism day

ಬೆಂಗಳೂರು : ನೂತನ ಪ್ರವಾಸೋದ್ಯಮ ನೀತಿಯು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ತಿಳಿಸಿದರು. ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಪ್ರವಾಸೋದ್ಯಮ ನೀತಿ 2020-25 ರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿಯ ಗುರಿ ಸಾಧಿಸಬೇಕಾದರೆ ಸಮರ್ಪಕ ರೂಪುರೇಷೆಗಳು ಹಾಗೂ ಯೋಜನೆಗಳನ್ನು ಒಳಗೊಂಡ ಒಂದು ನೀತಿಯನ್ನು ರೂಪಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಪ್ರವಾಸೋದ್ಯಮದ ಸಮಗ್ರ […]

ಅಗ್ರಿ ಟೂರಿಸಂ ಪ್ರಾರಂಭಿಸಲು ಯೋಜನೆ

Saturday, May 30th, 2020
ct-ravi

ಬೆಂಗಳೂರು : ಕೋವಿಡ್-19 ಕಾರಣದಿಂದ ಅತ್ಯಂತ ಹೆಚ್ಚು ನಷ್ಟಕ್ಕೆ ಒಳಗಾಗಿರುವ ಪ್ರವಾಸೋದ್ಯಮವನ್ನು ಬಲಪಡಿಸುವ ನಿಟ್ಟಿನಲ್ಲಿ ಕೃಷಿ ಹಾಗೂ ಗ್ರಾಮೀಣ ಸಂಸ್ಕøತಿ ಒಳಗೊಂಡ ಅಗ್ರಿ ಟೂರಿಸಂ ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ಅವರು ಇಂದು ನಗರದ ಕುಮಾರಕೃಪ ಅತಿಥಿ ಗೃಹದಲ್ಲಿ ಕೃಷಿ ಸಚಿವರು ಹಾಗೂ ತೋಟಗಾರಿಕೆ ಮತ್ತು ಪೌರಾಡಳಿತ ಇಲಾಖೆಯ ಸಚಿವರುಗಳೊಂದಿಗೆ ಜಂಟಿಯಾಗಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟದಲ್ಲಿ […]

ಪೌರತ್ವ ಪ್ರತಿಭಟನೆಯಿಂದ ಕಳೆಗುಂದಿದ ಪ್ರವಾಸೋದ್ಯಮ

Thursday, December 26th, 2019
aramane

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ರಾಜ್ಯದಲ್ಲಿ ಅತ್ಯಂತ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ನಗರ. ಪ್ರಾಣಿ ಸಂಗ್ರಹಾಲಯ, ಅರಮನೆ ಸೇರಿದಂತೆ ಅನೇಕ ಪ್ರವಾಸಿ ತಾಣಗಳಿದ್ದು, ಇವುಗಳನ್ನೆಲ್ಲ ಕಣ್ತುಂಬಿಕೊಳ್ಳಲು ಡಿಸೆಂಬರ್ ನಲ್ಲಿ ರಾಜ್ಯ ಹೊರರಾಜ್ಯ, ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಈ ಬಾರಿ ಪ್ರವಾಸೋದ್ಯಮ ಕಳೆಗುಂದಿದೆ. ಆರ್ಥಿಕ ಹಿಂಜರಿತದ ನಡುವೆಯೂ ಅಲ್ಪ ಸ್ವಲ್ಪ ಚೇತರಿಕೆ ಕಾಣುತಿದ್ದ ಪ್ರವಾಸೋದ್ಯಮ ಕಳೆದ ಎರಡು ವಾರಗಳಿಂದ ಮಕಾಡೆ ಮಲಗಿದೆ. ದೇಶದಲ್ಲಿ ಎನ್ಆರ್ಸಿ ಹಾಗೂ ಸಿಎಎ ವಿರೋಧಿ ಪ್ರತಿಭಟನೆಗಳು ಆರಂಭವಾದ ಬಳಿಕ ಮೈಸೂರಿಗೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇನ್ನೂ ಅಭಿವೃದ್ಧಿಗೊಳ್ಳಬೇಕಾಗಿದೆ: ಡಾ. ಜಗದೀಶ್

Thursday, December 15th, 2016
Tourism

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಯಬೇಕು ಎಂಬ ಕೂಗು ಕೇಳಿಬರುತ್ತಿದ್ದರೂ ಇನ್ನೂ ಅಭಿವೃದ್ಧಿಗೊಳ್ಳಬೇಕಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ಜಗದೀಶ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಸಂವಾದ, ಸಮಾಲೋಚನಾ ಸಭೆ ನಡೆಯಿತು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದರೂ ಇದರ ಸದುಪಯೋಗವಾಗುತ್ತಿಲ್ಲ. ಆ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತ ಸಂಪರ್ಕ ವ್ಯವಸ್ಥೆ, ಶುಚಿತ್ವಕ್ಕೆ ಗಮನಹರಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಯೋಜನೆ ಅನುಷ್ಠಾನಗೊಳಿಸಲು […]