ಕಾರ್ಕಳದ ಪರಶುರಾಮ್ ಥೀಂ ಪಾರ್ಕ್ ನಲ್ಲಿ ಪರಶುರಾಮ ಪ್ರತಿಮೆಯ ಅರ್ಧ ಭಾಗ ನಾಪತ್ತೆ, ತನಿಖೆಗೆ ಆದೇಶ

Monday, November 20th, 2023
parashurama-Theam-Park

ಉಡುಪಿ : ಕಾರ್ಕಳದ ಪರಶುರಾಮ್ ಥೀಂ ಪಾರ್ಕ್ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಪ್ರವಾಸೋದ್ಯಮ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ ಆದೇಶಿಸಿದ್ದಾರೆ ಎಂದು ಎಂಎಲ್ಸಿ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು ಪರಶುರಾಮ್ ಥೀಮ್ ಪಾರ್ಕ್ ಧಾರ್ಮಿಕ ಸ್ಥಳವೋ ಅಥವಾ ಪ್ರವಾಸೋದ್ಯಮ ಆಕರ್ಷಣೆಯೋ ಎಂಬ ಗೊಂದಲವಿದೆ. ಮಾಜಿ ಸಿಎಂ ಉದ್ಘಾಟಿಸಿದ ಪ್ರತಿಮೆ ದಿಢೀರ್ ಕಣ್ಮರೆಯಾಗಿದೆ. ಈ ವಿಷಯ ಸಿಎಂ ಹಾಗೂ ಡಿಸಿಎಂ ಗಮನಕ್ಕೆ ಬಂದಿದೆ. […]

ಕರ್ನಾಟಕ ಪ್ರವಾಸೋದ್ಯಮದ ಪ್ರಚಾರ ಮತ್ತು ಉತ್ತೇಜನಕ್ಕೆ ಡಿಜಿಟಲ್ ಮಾರ್ಕೆಟಿಂಗ್ ಸೇವೆಗಾಗಿ ಅರ್ಜಿ ಆಹ್ವಾನ

Tuesday, August 3rd, 2021
Karnataka Tourism

ಬೆಂಗಳೂರು : ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ಪ್ರಚಾರ ಮತ್ತು ಉತ್ತೇಜನಕ್ಕೆ ಸಂಬಂಧಿಸಿದಂತೆ ಇಲಾಖೆಗೆ ಡಿಜಿಟಲ್ ಮಾರ್ಕೆಟಿಂಗ್ ಸೇವೆಗಳನ್ನು ಒದಗಿಸುವಲ್ಲಿ ಸಹಕರಿಸಲು ಇದೇ ಮಾದರಿಯ ಅನುಭವವನ್ನು ಹೊಂದಿರುವ ಏಜೆನ್ಸಿ/ಏಜೆನ್ಸಿಗಳಿಂದ ಪ್ರಸ್ತಾವನೆಯ ವಿನಂತಿ (Request for Proposal) ದಾಖಲೆಯನ್ವಯ ಪ್ರಸ್ತಾವನೆಗಳನ್ನು ಆಹ್ವಾನಿಸಲು ಉದ್ದೇಶಿಸಿರುತ್ತದೆ. ಈ ಸಂಬಂಧ ಬಿಡ್ ದಾಖಲೆಗಳನ್ನು ಕರ್ನಾಟಕ ಸರ್ಕಾರದ ಇ-ಸಂಗ್ರಹಣೆ ವೆಬ್ಸೈಟ್ ವಿಳಾಸ http://www.eproc.karnataka.gov.in ದಿಂದ ದಿನಾಂಕ:31-07-2021ರ ನಂತರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಇದೇ ವೇದಿಕೆಯ ಮೂಲಕ ಆಸಕ್ತ ಬಿಡ್ಡುದಾರರು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ. ಈ ಸಂಬಂಧ […]

ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಕೋವಿಡ್‌ನಿಂದ ಸಾವು

Monday, June 7th, 2021
Somashekara

ಉಡುಪಿ : ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ ಬನವಾಸಿ ಮಂಗಳೂರಿನ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಸೋಮವಾರ ನಿಧನರಾಗಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಸೋಮಶೇಖರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಉಡುಪಿ ಸಹಾಯಕ ನಿರ್ದೇಶಕರಾಗಿ 2020ರ ನ. 24 ರಂದು ಅಧಿಕಾರ ಸ್ವೀಕರಿಸಿದ್ದ ಇವರು, ಪಡುಬಿದ್ರೆ ಬೀಚ್ ಗೆ ಬ್ಲೂ ಫ್ಲ್ಯಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ […]

ವೇದವ್ಯಾಸ್ ಕಾಮತ್ ರಿಂದ ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಗಳ ಕಾಮಗಾರಿಯ ಪ್ರಗತಿ ಪರಿಶೀಲನೆ

Thursday, December 12th, 2019
vidhavyas

ಮಂಗಳೂರು :ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ವಿವಿಧ ಇಲಾಖೆಗಳ ಕಾಮಗಾರಿಯ ಕುರಿತು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಲೋಕೋಪಯೋಗಿ ಇಲಾಖೆ,ಪ್ರವಾಸೋದ್ಯಮ ಇಲಾಖೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಮೂಲಭೂತ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತ ಇಲಾಖೆ ಹಾಗೂ ಮತ್ತಿತರ ಅಧಿಕಾರಿಗಳೊಂದಿಗೆ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿ, ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಲಕ್ಷ್ಮಣ ಪೂಜಾರಿ, ರಮೇಶ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಉದಯ್ ಶೆಟ್ಟಿ, ಕರಾವಳಿ […]

ಮಡಿಕೇರಿ ಮಾಂದಾಲ್ಪಟ್ಟಿಗೆ ಹಳದಿ ಫಲಕದ ವಾಹನಗಳಿಗೆ ಮಾತ್ರ ಅವಕಾಶ

Wednesday, November 27th, 2019
mandala-patti

ಮಡಿಕೇರಿ  : ತಾಲ್ಲೂಕಿನ ಪ್ರವಾಸಿ ತಾಣ ಮಾಂದಾಲ್ಪಟ್ಟಿಗೆ ಹಳದಿ ಬಣ್ಣದ ನೋಂದಣಿ ಫಲಕ (ಯಲ್ಲೊ ಬೋರ್ಡ್) ಹೊಂದಿರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಮಾಡಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಂದಲ್ಪಟ್ಟಿಗೆ ತೆರಳುವ ವಾಹನಗಳ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಮಿತಿ ಸದಸ್ಯರಿಂದ ಮಾಹಿತಿ ಪಡೆದು ಮಾತನಾಡಿ ಹಳದಿ ಬಣ್ಣದ […]

ಕರಾವಳಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಹೋಂಸ್ಟೇ ಲೈಸನ್ಸ್

Thursday, August 17th, 2017
Homestay

ಮಂಗಳೂರು : ರಾಜ್ಯದಲ್ಲಿ ಕೈಗಾರಿಕೆ, ಐಟಿ-ಬಿಟಿ ವೇಗಗತಿಯಲ್ಲಿ ಅಭಿವೃದ್ಧಿಯಾಗುತ್ತಿದ್ದಂತೆ ಪ್ರವಾಸೋದ್ಯಮಕ್ಕೂ ವಿಶೇಷ ಒತ್ತು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಹೋಂಸ್ಟೇಗಳನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆಯಿಂದಲೇ ಪರವಾನಗಿ ನೀಡಲು ಸರಕಾರ ನಿರ್ಧರಿಸಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಇನ್ನು ಮುಂದೆ ಹೋಂಸ್ಟೇಗೆ ಪ್ರವಾಸೋದ್ಯಮ ಇಲಾಖೆ ಪರವಾನಗಿ ಪಡೆಯುವುದು ಕಡ್ಡಾಯವಾಗಲಿದೆ. ಇದರಿಂದ ವ್ಯಾಪಾರ ಲೈಸೆನ್ಸ್ ಸೇರಿದಂತೆ ಇತರ ಯಾವುದೇ ಪರವಾನಗಿಯ ಅಗತ್ಯವಿರುವುದಿಲ್ಲ. ಕರ್ನಾಟಕ ಸರ್ಕಾರ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ದಕ್ಷಿಣ ಕನ್ನಡ […]

ಪ್ರವಾಸಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಸಹಿತ ಎಲ್ಲಾ ರೀತಿಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ: ರಮಾನಾಥ ರೈ

Wednesday, September 28th, 2016
world-tourism-day

ಮಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ದ.ಕ. ಜಿಲ್ಲೆಯಲ್ಲಿ ವಿಫುಲ ಅವಕಾಶವಿದೆ. ಪ್ರವಾಸಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಸಹಿತ ಎಲ್ಲಾ ರೀತಿಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವೆಂದು ಸಚಿವ ಬಿ.ರಮಾನಾಥ ರೈ ಹೇಳಿದರು. ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸೋದ್ಯಮದ ಬಗ್ಗೆ ಜನರಲ್ಲಿ ಮಾಹಿತಿಯ ಕೊರತೆಯಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದರು. ಜಿಲ್ಲಾಧಿಕಾರಿ ಡಾ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿದಂತೆ […]

ಮಂಗಳೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

Monday, September 27th, 2010
ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮಂಗಳೂರು: ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಪಣಂಬೂರ್ ಬೀಚ್  ಅಭಿವೃದ್ಧಿ ಯೋಜನಾ ಸಂಸ್ಥೆ ಹಾಗೂ ಮಂಗಳೂರು ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋಧ್ಯಮ ದಿನಾಚರಣೆ 2010ನ್ನು ಇಂದು ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಪ್ರವಾಸೋಧ್ಯಮ ಮತ್ತು ಜೈವಿಕ ವೈವಿಧ್ಯತೆ ಎಂಬ ಸಂದೇಶದೊಂದಿಗೆ ಆಚರಿಸಲ್ಪಟ್ಟ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ತೀರ ಪ್ರದೇಶವನ್ನು ಹೊಂದಿರುವ […]