ಪ್ರವೀಣ್ ನೆಟ್ಟಾರು ಹತ್ಯೆ ಮಾಡಿ ಜನರಲ್ಲಿ ಭಯ ಹುಟ್ಟಿಸುವ ಪ್ಲಾನ್ ಮಾಡಿತ್ತು ಪಿಎಫ್‌ಐ

Monday, November 14th, 2022
praveen Nettaru

ಪುತ್ತೂರು : ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಸಂಚು ರೂಪಿಸಿ ತಲೆ ಮರೆಸಿಕೊಂಡಿರುವ ಸುಳ್ಯ ತಾಲೂಕು ಬೆಳ್ಳಾರೆ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ.ಎಚ್., ಸುಳ್ಯ ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ಧೀಕ್ ಯಾನೆ ಪೈಂಟರ್ ಸಿದ್ಧೀಕ್ ಪತ್ತೆಗೆ ಲುಕೌಟ್ ನೊಟೀಸ್ ಹೊರಡಿಸಿರುವ […]

ಬಿಜೆಪಿ ಕಾರ್ಯಕರ್ತ ನಿಗೆ ಕೊಲೆ ಬೆದರಿಕೆ, ಎಸ್‌ಡಿಪಿಐ ಕಾರ್ಯಕರ್ತನ ಬಂಧನ

Sunday, September 11th, 2022
Safreed

ಸುಳ್ಯ: ಸ್ಥಳೀಯ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ರೈ ಅವರಿಗೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿದ ದೂರಿನ ಮೇರೆಗೆ ಎಸ್‌ಡಿಪಿಐ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಶಫೀಕ್ ಬೆಳ್ಳಾರೆಯ ಸಹೋದರ ಸಫ್ರೀದ್ ನನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ. ಸಫ್ರೀದ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಳ್ಳಾರೆಯ ಸ್ಥಳೀಯ ಬಿಜೆಪಿ ಕಾರ್ಯಕರ್ತ ಹಾಗೂ ಖಾಸಗಿ ಸಂಸ್ಥೆಯ ವ್ಯವಸ್ಥಾಪಕ ಪ್ರಶಾಂತ್ ರೈ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು. […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಬಂಧಿತ ಆರೋಪಿಗಳ ಮನೆ ಮೇಲೆ ಎನ್ಐಎ ಅಧಿಕಾರಿಗಳ ತಂಡ ದಾಳಿ

Tuesday, September 6th, 2022
Praveen-Nettaru

ಸುಳ್ಯ: ಬಿಜೆಪಿ‌ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಆರಂಭಿಸಿದ್ದು ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಮನೆ ಮತ್ತಿತರ ಕಡೆಗಳಲ್ಲಿ ತನಿಖೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿದು ಬಂದಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ತನಿಖೆ ನಡೆಸಿದ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸರಕಾರ ಪ್ರಕರಣವನ್ನು ಎನ್‌ಐಎ ಗೆ ಹಸ್ತಾಂತರ ಮಾಡಿತ್ತು. ಇದೀಗ […]

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಬಹುಮಾನ

Tuesday, August 23rd, 2022
Police-team

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಪ್ರಶಸ್ತಿ ಹಾಗೂ ಬಹುಮಾನ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಜುಲೈ 26 ರಂದು ಘಟನೆ ನಡೆದ ಸ್ಥಳದಲ್ಲಿ ಹಂತಕರು ಯಾವುದೇ ಸುಳಿವು ಬಿಟ್ಟುಕೊಡದ ಕಾರಣ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಾಗೂ ಪಶ್ಚಿಮ ವಲಯದ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು. ಈ ಹಿನ್ನಲೆ ನಗರದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ […]

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ನಿರ್ಮಾಪಕನಿಂದ 11 ಲಕ್ಷ ನೆರವು

Friday, August 5th, 2022
manish-mandra

ಪುತ್ತೂರು : ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ ಅವರು 11 ಲಕ್ಷ ರೂ. ನೆರವು ನೀಡಿರುವುದಾಗಿ ಟ್ವೀಟ್ ಮಾಡಿದ್ದಾರೆ. ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ ಮಾಹಿತಿಯನ್ನು ಇತ್ತೀಚೆಗಷ್ಟೇ ಅವರು ಟ್ವೀಟರ್‌ನಲ್ಲಿ ಕೇಳಿದ್ದರು. ಆ ಬಳಿಕ 11 ಲಕ್ಷ ರೂ.ಗಳನ್ನು ಪ್ರವೀಣ್ ಪತ್ನಿ ನೂತನಾ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದಾಗಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಮನೀಶ್ ಮುಂದ್ರಾ ಅವರು ಅಂಖೋನ್ ದೇಖಿ, ಮಸಾನ್, ಕದ್ವಿ ಹವಾ ಸೇರಿದಂತೆ […]

ಅಮಿತ್ ಷಾರೊಂದಿಗೆ ನಳಿನ್ ಕುಮಾರ್ ಕಟೀಲ್ ಭೇಟಿ

Wednesday, August 3rd, 2022
Nalin Kumar Amith Sha

ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ರವರನ್ನು ಭೇಟಿ ಮಾಡಿ ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಶ್ರೀ ಪ್ರವೀಣ್ ನೆಟ್ಟಾರು ಇವರ ಪ್ರಕರಣವನ್ನು ಎನ್ ಐ ಎ ವಹಿಸಿಕೊಂಡಿರುವುದಕ್ಕೆ ಧನ್ಯವಾದ ಸಮರ್ಪಿಸಿ, ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಮಾನ್ಯ ಗೃಹ […]

ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಐದು ಲಕ್ಷ ರೂಪಾಯಿಗಳ ಚೆಕ್​ ವಿತರಿಸಿದ ಶೋಭಾ ಕರಂದ್ಲಾಜೆ

Sunday, July 31st, 2022
shobha karandlaje

ಮಂಗಳೂರು : ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ ಐದು ಲಕ್ಷ ರೂಪಾಯಿಗಳ ಚೆಕ್​ ಅನ್ನು ಕುಟುಂಬಸ್ಥರಿಗೆ ನೀಡಿ ಸಾಂತ್ವನ ಹೇಳಿದ್ದಾರೆ. ಪ್ರವೀಣ್ ಸಾವು ದುಃಖ ತಂದಿದೆ. ಹಲವರ ಸಮಸ್ಯೆ, ಕಷ್ಟಗಳಿಗೆ ಪ್ರವೀಣ್ ಸ್ಪಂದಿಸುತ್ತಿದ್ದ. ಆದರೆ ಈಗ ಆತ ಇಲ್ಲ ಎನ್ನುವುದು ಕಷ್ಟ. ಪ್ರಕರಣದ ತನಿಖೆ ಎನ್ ಐ ಎ ಗೆ ಒಪ್ಪಿಸಲಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆ ಕೊಡುವ ಭರವಸೆಯಿದೆ ಎಂದರು. ಇನ್ನು ಈ ಘಟನೆಯ ಕುರಿತು ತೀವ್ರ […]

ರಾಷ್ಟ್ರೀಯ ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Friday, July 29th, 2022
NIA on Praveen case

ಬೆಂಗಳೂರು : ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಪ್ರಕಟಿಸಿದರು. ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ […]

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 50 ಲಕ್ಷ ಪರಿಹಾರ ಚೆಕ್ ವಿತರಣೆ

Thursday, July 28th, 2022
cm-bellare

ಮಂಗಳೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆ ಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ಪರಿಹಾರ ಘೋಷಿಸಿದಂತೆ, ಕುಟುಂಬಸ್ಥರಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು […]

ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬಸವರಾಜ ಬೊಮ್ಮಾಯಿ

Thursday, July 28th, 2022
CMBellare

ಮಂಗಳೂರು : ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ ಆಗಮಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳೀನ್ ಕುಮಾರ್ ಕಟೀಲ್, ಸಿ.ಟಿ ರವಿ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ […]