ಕಟ್ಟಡ ನಿರ್ಮಾಣಕ್ಕೆ ಸಮಗ್ರ ದಾಖಲೆಯೊಂದಿಗೆ ಶೀಘ್ರ ಪರವಾನಿಗೆ : ಕ್ರೆಡಾಯ್ ಸ್ವಾಗತ

Tuesday, March 14th, 2023
ಕಟ್ಟಡ ನಿರ್ಮಾಣಕ್ಕೆ ಸಮಗ್ರ ದಾಖಲೆಯೊಂದಿಗೆ ಶೀಘ್ರ ಪರವಾನಿಗೆ : ಕ್ರೆಡಾಯ್ ಸ್ವಾಗತ

ಮಂಗಳೂರು : ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಸಮಗ್ರ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದ 30 ದಿನದೊಳಗೆ ಪರವಾನಗಿ, 8 ದಿನದೊಳಗೆ ಪ್ರವೇಶ ಪತ್ರ, 7 ದಿನದೊಳಗೆ ಸ್ಥಳ ಪರಿಶೀಲನೆ ನಡೆಸಬೇಕು ಎಂಬ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹವಾಗಿದ್ದು, ಈ ಆದೇಶವು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಹಾಗೂ ಸಾರ್ವಜನಿಕರಿಗೆ ಸಹಕಾರಿಯಾಗಲಿದೆ ಎಂದು ಕ್ರೆಡಾಯ್ ಮಂಗಳೂರು ಅಧ್ಯಕ್ಷ ಪುಷ್ಪರಾಜ್ ಜೈನ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ […]

ಎಸ್‌ಎಸ್‌ಎಲ್‌ಸಿ ಪ್ರವೇಶ ಪತ್ರದ ಮಾಹಿತಿಗೆ ಸಹಾಯವಾಣಿ

Sunday, July 18th, 2021
sslc Exam

ಮಂಗಳೂರು : 2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜುಲೈ 19 ಮತ್ತು 22 ರಂದು ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 32,657 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಆಯಾ ಶಾಲಾ ಲಾಗಿನ್‌ನಲ್ಲಿ ಲಭ್ಯವಿದ್ದು ಶಾಲಾ ಮುಖ್ಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರಗಳನ್ನು ವಿತರಿಸಲಾಗಿದೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಪ್ರೌಢಶಾಲೆಗಳು ಪ್ರವೇಶಪತ್ರವನ್ನು ಸಕಾಲದಲ್ಲಿ ವಿತರಿಸದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತ ಉಪನಿರ್ದೇಶಕರ ಮೊ.ಸಂ: 9448999337, […]