ಲೋಕಸಭೆಗೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಖಚಿತ

Thursday, February 29th, 2024
Arun-Puttila

ಪುತ್ತೂರು : ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿಗೆ ಬಂಡಾಯವಾಗಿ ಹಿಂದೂ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ. ಇನ್ನು ಮುಂದಿನ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ಬಂಡಾಯವಾಗಿ ಅರುಣ್ ಪುತ್ತಿಲ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ […]