ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಚತುರ್ವೇದಿ ಅವರ ಪುತ್ರಿಗೆ ಅತ್ಯಾಚಾರದ ಬೆದರಿಕೆ..!
Tuesday, July 3rd, 2018ಮುಂಬೈ: ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಚತುರ್ವೇದಿ ಅವರ ಪುತ್ರಿಗೆ ಟ್ವಿಟ್ಟರ್ ನಲ್ಲಿ ಕಿಡಿಗೇಡಿಯೊಬ್ಬ ಅತ್ಯಾಚಾರದ ಬೆದರಿಕೆ ಒಡ್ಡಿದ್ದು, ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಿಯಾಂಕಾ ಚತುರ್ವೇದಿ ಅವರ 10 ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ @GirishK1605 ಎಂಬ ಖಾತೆಯಿಂದ ಬೆದರಿಕೆ ಬಂದಿದೆ. ‘ನಾವು ರಾಜಕಾರಣಿಗಳು ಪ್ರತಿದಿನ ಟ್ರೋಲ್ ಆಗುತ್ತೇವೆ. ಅದೇನು ಹೊಸತಲ್ಲ. ಆದರೆ ನನ್ನ ಮಗಳ ಬಗ್ಗೆ ಮಾತನಾಡುವುದು ಸರಿಯೇ? ಅದೂ ಇಷ್ಟು ಅವಾಚ್ಯವಾಗಿ? ಅದಕ್ಕೆಂದೇ ನಾನು ಅವರ ವಿರುದ್ಧ ದೂರು ನೀಡಬೇಕೆಂದು ನಿರ್ಧರಿಸಿದ್ದೇನೆ’ […]