ಸಂಗೀತದ ಆಕರ್ಷಣೆಯಿಂದ ಬದಲಾದ ಬದುಕು : ಸಂಗೀತ ನಿರ್ದೇಶಕ ಡಾ.ಗುರುಕಿರಣ್

Friday, September 20th, 2024
Gurukiran

ಮಂಗಳೂರು : ವೈದ್ಯನಾಗಬೇಕೆಂದು ಹೆತ್ತವರು ಪಿಯುಸಿಯಲ್ಲಿ ವಿಜ್ಞಾನ ವಿಭಾಗಕ್ಕೆ ಸೇರಿಸಿದ್ದರು. ವೈದ್ಯಕೀಯ ಕಾಲೇಜು ಆರಂಭಕ್ಕೆ ಸ್ವಲ್ಪ ಸಮಯವಿದೆ ಎಂದು ಸಮಯ ಕಳೆಯಲು ಮಂಗಳೂರಿನ ಸರ್ಕಾರಿ ಕಾಲೇಜಿಗೆ ಸೇರಿದೆ. ಅಲ್ಲಿ ಕಲಾ ಕ್ಷೇತ್ರ ಆಕರ್ಷಿಸಿತು. ಹಾಡುಗಾರನಾದೆ, ನಟನಾದೆ, ಸಂಗೀತ ನಿರ್ದೇಶಕನಾದೆ. ಸಂಗೀತದ ಆಕರ್ಷಣೆಯಿಂದ ಬದುಕೇ ಬದಲಾಯಿತು ಎಂದು ಸಂಗೀತ ನಿರ್ದೇಶಕ, ಬೆಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪುರಸ್ಕೃತರಾದ ಗುರುಕಿರಣ್ ತಮ್ಮ ಸಾಧನೆಯ ಹಾದಿಯನ್ನು ತೆರೆದಿಟ್ಟರು. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ […]

ರಾಜ್ಯದ ಎರಡನೇ ಕೇಂದ್ರ ನಗರವಾಗಿ ಮಂಗಳೂರು ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ : ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

Friday, June 14th, 2024
ರಾಜ್ಯದ ಎರಡನೇ ಕೇಂದ್ರ ನಗರವಾಗಿ ಮಂಗಳೂರು ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ : ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

ಮಂಗಳೂರು : ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ನಗರವನ್ನು ಎರಡನೆ ರಾಜ್ಯದ ಕೇಂದ್ರವಾಗಿ ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ. ಮಂಗಳೂರನ್ನು ಮಿನಿ ದುಬೈಯಂತೆ ಅಭಿವೃದ್ಧಿ ಮಾಡಬಹುದು. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ತಿಳಿಸಿದರು. ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ‘ ಬಂದರು,ವಿಮಾನ ನಿಲ್ದಾಣ, ರೈಲು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಸೌಲಭ್ಯ ಹೊಂದಿರುವ ಮಂಗಳೂರು ಪ್ರವಾಸೋದ್ಯಮ ಅಭಿವೃದ್ಧಿಗೆ […]