ಸಿಐಟಿಯು ನೇತೃತ್ವದಲ್ಲಿ ಭವಿಷ್ಯನಿಧಿ ಕಚೇರಿಗೆ ಕಾರ್ಮಿಕರಿಂದ ಬೃಹತ್ ಮುತ್ತಿಗೆ
Tuesday, March 13th, 2018ಮಂಗಳೂರು: ದಿನಾಂಕ 13-03-2018 ರಂದು ಮಂಗಳೂರು ಕಾರ್ಮಿಕರ ಭವಿಷ್ಯನಿಧಿ ಸಂಸ್ಥೆಗೆ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ಬೃಹತ್ ಮುತ್ತಿಗೆ ಕಾರ್ಯಕ್ರಮವು ನಡೆಯಿತು. ಸಂಸ್ಥೆಯಲ್ಲಿರುವ ಸದಸ್ಯರಿಗೆ ಆಧಾರ ಕಾರ್ಡ್‌ನ್ನು ಯಾವುದೇ ಕಾರಣಕ್ಕೂ ಕಡ್ಡಾಯಗೊಳಿಸಬಾರದು, ಈಗಾಗಲೇ ಪ್ರೊವಿಡೆಂಟ್ ಪಂಡ್ ಕಚೇರಿಯಲ್ಲಿ ದಾಖಲಾಗಿರುವ ಹುಟ್ಟಿದ ದಿನಾಂಕವನ್ನು ಅಧಿಕೃತಗೊಳಿಸಬೇಕು, ಪಿಂಚಣಿದಾರರಿಗೆ ಅವರ ಸೌಲಭ್ಯವನ್ನು ಪಡೆಯುವರೇ ಕ್ರಮ ನಿಯಮವನ್ನು ಸರಳೀಕರಣಗೊಳಿಸಬೇಕು, ಪಿಂಚಣಿದಾರರ ಜೀವಿತ ಪ್ರಮಾಣ ಪತ್ರಕ್ಕಾಗಿ ಪ್ರತಿ ಬ್ಯಾಂಕಿನಲ್ಲಿಯೇ ಹೆಬ್ಬೆಟ್ಟು ಗುರುತು ಪಡೆಯುವ ವ್ಯವಸ್ಥೆ ಮಾಡಬೇಕು, ಎಲ್ಲಾ ಪ್ರೊವಿಟೆಂಟ್ ಪಂಡ್ ಖಾತೆದಾರರ ಹಣ ಅವರಿಗೆ ಲಭ್ಯವಿರುವಂತೆ ವ್ಯವಸ್ಥೆ […]