ಕಲಾತ್ಮಕ ಉಮಾಮಹೇಶ್ವರ ಶಿಲ್ಪ ಪತ್ತೆ

Saturday, September 11th, 2021
Uma Maheshwara

ಉಡುಪಿ : ಜಿಲ್ಲೆಯ  ಬೈಂದೂರು ತಾಲೂಕಿನ ಮಾರಣಕಟ್ಟೆಯ ಸಂನ್ಯಾಸಿಬೆಟ್ಟಿನಲ್ಲಿ ಅತ್ಯಂತ ಕಲಾತ್ಮಕವಾದ ಉಮಾಮಹೇಶ್ವರ ಶಿಲ್ಪ ಪತ್ತೆಯಾಗಿದೆಯೆಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿಯವರು  ತಿಳಿಸಿದ್ದಾರೆ. ಕೇವಲ 9 ಸೆ.ಮೀ ಎತ್ತರ, 9 ಸೆ.ಮೀ. ಉದ್ದ ಮತ್ತು 4 ಸೆ.ಮೀ. ಅಗಲವಾಗಿರುವ ಈ ಕಿರು ಶಿಲ್ಪ , ತನ್ನ ಕಲಾತ್ಮಕತೆಯಿಂದ ನೋಡುಗರ ಕಣ್ಮನ ಸೆಳೆಯುತ್ತದೆ. ಉಮಯಾ ಸಹ ದೇವೇಶ ನಂದಿವಾಹನ ಮೇವಚ ಎಂಬ ಉಕ್ತಿಯಂತೆ, ಉಮೆಯ […]