ಮಂಗಳೂರು ವಿವಿ: ನಾಲ್ಕು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕುಲಪತಿಗಳು
Wednesday, July 14th, 2021ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಶೀಘ್ರ ಅನುಷ್ಠಾನಕ್ಕೆ ತರಲಾಗುವುದು. ಅದರಲ್ಲಿ ಸಂಶೋಧನೆಗೆ ವಿಶೇಷ ಒತ್ತು ನೀಡುವ ಉದ್ದೇಶದಿಂದ ಈಗಾಗಲೇ ಕ್ರಿಯಾಸಮಿತಿಯನ್ನು ರಚಿಸಲಾಗಿದ್ದು ಪ್ರಸಾರಾಂಗದ ಮೂಲಕ ಸಂಶೋಧನಾ ಕೃತಿಗಳ ಪ್ರಕಟಣೆಯನ್ನು ಉತ್ತೇಜಿಸಲಾಗುವುದು, ಎಂದು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಸ್ ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರಸಾರಾಂಗ ಪ್ರಕಟಿಸಿದ ನಾಲ್ಕು ಕೃತಿಗಳನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವೃತ್ತಿಯ ಜೊತೆಗೆ ಪ್ರವೃತ್ತಿ, ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಂಡಾಗ ಮನುಷ್ಯನ ವ್ಯಕ್ತಿತ್ವಕ್ಕೆ ಘನತೆ ಬರುತ್ತದೆ. ಬ್ಯಾರಿ […]