ʼನವಿಲುಗರಿʼ ಕವನ ಸಂಕಲನ ಬಿಡುಗಡೆ

Wednesday, January 19th, 2022
Navilu-Gari

ಮಂಗಳೂರು: ಜೀವನ ಎದುರಿಸಲು ಸೃಜನಶೀಲತೆ ಅಗತ್ಯ. ಕಾವ್ಯವೆಂಬ ಸೃಜನಶೀಲ ಹವ್ಯಾಸ ಕಷ್ಟಗಳಿಂದ ಹೊರಬಂದು ನಮ್ಮನ್ನು ನಾವೇ ಸಾಂತ್ವನಪಡಿಸಿಕೊಳ್ಳಲು ಸಹಾಯ ಮಾಡುತ್ತದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬುಧವಾರ ಡಾ. ಭಾರತಿ ಪಿಲಾರ್ ಅವರ ʼನವಿಲುಗರಿʼ ಕವನ ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಅವರು, ಕವನ ಸಂಕಲನದ 40 ಕವನಗಳು ಓದುಗನನ್ನು ಚಿಂತನೆಗೆ ಹಚ್ಚುತ್ತವೆ. ಭಾವನೆಗಳ ಹೊಯ್ದಾಟ, ಕಟು ವಾಸ್ತವ ನಮ್ಮನ್ನು ನಾವು ಮರೆಯುವಂತೆ […]

ಮಂಗಳೂರು ವಿವಿ ಯುವ ರೆಡ್ ಕ್ರಾಸ್ ಘಟಕಕ್ಕೆ ರಾಜ್ಯ ಪ್ರಶಸ್ತಿ

Tuesday, November 30th, 2021
Red Cross

ಮಂಗಳೂರು: ಯುವ ರೆಡ್ಕ್ರಾಸ್ನ ಚಟುವಟಿಕೆಗಳು ಮತ್ತು ಎಲ್ಲಾ ಹಂತಗಳಲ್ಲಿ ಯುವ ರೆಡ್ ಕ್ರಾಸ್ ನ್ನು ಬಲಪಡಿಸುವಲ್ಲಿ ನೀಡುವ ಬೆಂಬಲವನ್ನು ಗುರುತಿಸಿ ನೀಡಲಾಗುವ ʼಬೆಸ್ಟ್ ಪರ್ಫಾರ್ಮಿಂಗ್ ಯುನಿವರ್ಸಿಟಿʼ ಎಂಬ 2019-20 ನೇ ಸಾಲಿನ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ವಿಭಾಗವು ಭಾಜನವಾಗಿದೆ. ಮಂಗಳವಾರ ಬೆಂಗಳೂರಿನ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ರೆಡ್ ಕ್ರಾಸ್ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ವಿತರಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ […]