ಮಗಳ ಪ್ರಯತ್ನಕ್ಕೆ ಸರ್ಕಾರ ಸ್ಪಂದಿಸಿ ದರೂ, ಕೊರೋನಾ ಆ ಶಿಕ್ಷಕಿಯ ಪ್ರಾಣವನ್ನೇ ಕಸಿದುಕೊಂಡಿತು

Friday, October 16th, 2020
Padamkshi

ಮೂಡಬಿದಿರೆ: ವಿವಿಧ ಸ್ಥಳಗಳಿಗೆ ಭೇಟಿ ನೀಡುವ ರಾಜ್ಯ ಸರ್ಕಾರದ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುತಿದ್ದ  ಪ್ರೌಢಶಾಲೆಯ  ಶಿಕ್ಷಕಿಯೊಬ್ಬರು  ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದ ಪದ್ಮಾಕ್ಷಿ ಎನ್ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ‘ವಿದ್ಯಾಗಮ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು. ಅಂತಹ ಭೇಟಿಗಳ ಸಮಯದಲ್ಲಿ ಶಿಕ್ಷಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು. ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ […]

ಮೊಬೈಲ್ ಬಳಸಬೇಡ ಎಂದು ಅಮ್ಮ ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ

Wednesday, October 14th, 2020
mobile addict

ಮಂಗಳೂರು : ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಅಮ್ಮ ಬುದ್ದಿವಾದ ಹೇಳಿದ್ದಕ್ಕೆ 10 ನೇ ತರಗತಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಳಾಯಿಯಲ್ಲಿ ನಡೆದಿದೆ. ಕುಳಾಯಿಯ ಗೋಕುಲನಗರದ ಸುಜೇತಾ (16 ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ಸುರತ್ಕಲ್ನ ಖಾಸಗಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೊಬೈಲ್ನಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದ ಸಜೇತಾಗೆ, ತಾಯಿ ಬುದ್ದಿವಾದ ಹೇಳಿದ್ದರು ಎನ್ನಲಾಗಿದೆ. ತಾಯಿಯ ಬುದ್ದಿಮಾತಿಗೆ ಬೇಸರಗೊಂಡ ಬಾಲಕಿ, ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಮನೆಯ ಟೆರೆಸ್ […]

ವಿದ್ಯುತ್ ಪ್ರವಹಿಸಿ ಎಸೆಸೆಲ್ಸಿ ವಿದ್ಯಾರ್ಥಿ ಮೃತ್ಯು

Saturday, July 18th, 2020
Goutham

ಉಡುಪಿ : ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಜು.17ರಂದು ರಾತ್ರಿ ವೇಳೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್‌ ನಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮೀನಗರದ ಮಂಜುನಾಥ್ ನಾಯಕ್ ಎಂಬವರ ಮಗ ಗೌತಮ್(15) ಎಂದು ಗುರುತಿಸಲಾಗಿದೆ. ನೆರೆಮನೆಯವರು ತಮ್ಮ ಬಾವಿಯಿಂದ ಪಂಪ್‌ಸೆಟ್ ಮೇಲಕ್ಕೆತ್ತುವಾಗ ಅಲ್ಲೇ ಸಮೀಪದಲ್ಲಿ ಇದ್ದ ಗೌತಮ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾವಂತ ಎಸೆಸೆಲ್ಸಿ ವಿದ್ಯಾರ್ಥಿಯಾಗಿರುವ ಗೌತಮ್, ಇತ್ತೀಚೆಗೆ ನಡೆದ ಎಸೆಸೆಲ್ಸಿ […]