ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ; ಉರ್ದು ಶಿಕ್ಷಕರಿಗೆ ಅನ್ಯಾಯ ಐಟಾ ಆರೋಪ

Sunday, September 5th, 2021
Aiita

ಬೆಂಗಳೂರು: ರಾಜ್ಯ ಸರ್ಕಾರ ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11  ಶಿಕ್ಷಕರನ್ನು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಇದರಲ್ಲಿ ಉರ್ದು ಮಾದ್ಯಮ ಶಿಕ್ಷಕರನ್ನು ಕಡೆಗಣಿಸಲಾಗಿದೆ ಎಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಆರೋಪಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆಗೊಳಿಸಿರುವ ಐಟಾ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಸರ್ಕಾರ ಕನ್ನಡ, ಹಿಂದಿ, ಚಿತ್ರಕಲೆ ಸೇರಿದಂತೆ ಎಲ್ಲ ವಿಭಾಗದಿಂದ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿದೆ. ಆದರೆ ಉರ್ದು ಮಾಧ್ಯಮದ ಶಿಕ್ಷಕಕರನ್ನು ಕಡೆಗಣಿಸಿ ಅನ್ಯಾಯ […]

ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ – ಸಚಿವ ಸುರೇಶ್ ಕುಮಾರ್

Friday, July 9th, 2021
suresh Kumar

ಬೆಂಗಳೂರು: ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ನೊಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ” ಎಂಬ ಧ್ಯೇಯದೊಂದಿಗೆ ರಾಜ್ಯದ […]

ದ್ವಿತೀಯ ಪಿಯುಸಿ ಫಲಿತಾಂಶ ಮಾರ್ಗಸೂಚಿ ಪ್ರಕಟ: ಸುರೇಶ್ ಕುಮಾರ್

Tuesday, July 6th, 2021
Suresh Kumar

ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣದಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಅಧಿಕೃತ ಸರ್ಕಾರದ ಆದೇಶ […]

ಶಿಕ್ಷಕರ ವರ್ಗಾವಣೆಗೆ ಚಾಲನೆ : ಸುರೇಶ್ ಕುಮಾರ್

Friday, July 2nd, 2021
Suresh-Kumar

ಬೆಂಗಳೂರು: ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 2019-20ನೇ ಸಾಲಿನ ಸಾಮಾನ್ಯ ವರ್ಗಾವಣೆಗಳಲ್ಲಿನ ಕಡ್ಡಾಯ ವರ್ಗಾವಣೆ, ವಲಯ ವರ್ಗಾವಣೆಯ ಮೇಲೆ ಅಥವಾ ಸಮರ್ಪಕ ಮರು ಹಂಚಿಕೆಯ ಮೇರೆಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ತಾಲೂಕಿನ ಹೊರಗೆ ಅಥವಾ ಪ್ರೌಢಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ಜಿಲ್ಲೆಯ […]