ಪ್ಲಾಸ್ಟಿಕ್ ನಿರ್ಮೂಲನೆಗೆ ಸಮುದಾಯದ ಸಹಭಾಗಿತ್ವ ಅಗತ್ಯ : ಡಾ. ಆನಂದ .ಕೆ.

Tuesday, October 1st, 2024
plastic-use

ಮಂಗಳೂರು : ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಹೆಚ್ಚು ಬಳಸುವ ಮೂಲಕ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕಬಹುದು. ಪ್ಲಾಸ್ಟಿಕ್ ನಿರ್ಮೂಲನೆಗೆ ಸ್ಥಳೀಯಾಡಳಿತ ಸಂಸ್ಥೆಗಳು ಶ್ರಮಿಸಿಸುತ್ತಿದ್ದು, ಇದರ ಯಶಸ್ವಿಗೆ ಸಮುದಾಯದ ಸಹಭಾಗಿತ್ವ ಅಗತ್ಯ. ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರತಿನಿಧಿಗಳಾಗಿ ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸಬೇಕು ಎಂದು ದ.ಕ.ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ .ಕೆ. ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯಿತಿ ಮತ್ತು ಬಲ್ಮಠದ […]

ರಾಜಾಸೀಟು ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ : ಫೆ.7ರಿಂದ 10ರವರೆಗೆ ಫಲಪುಷ್ಪ ಪ್ರದರ್ಶನ

Wednesday, January 8th, 2020
raja-seat

ಮಡಿಕೇರಿ : ರಾಜಾಸೀಟು ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಿದ್ದು, ಪ್ಲಾಸ್ಟಿಕ್ ಬಳಸುವುದು ಮತ್ತು ಪುಷ್ಪಗಳನ್ನು ಕೀಳುವುದು ಕಂಡು ಬಂದಲ್ಲಿ 100ರೂ. ದಂಡ ವಿಧಿಸಲು ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಾಜಾಸೀಟು ಅಭಿವೃದ್ದಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಫೆ.7 ರಿಂದ 10 ರವರೆಗೆ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡು. ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ […]

ಕೊಡಗು ಅರಣ್ಯದಲ್ಲಿ ಪ್ಲಾಸ್ಟಿಕ್ ತಿನ್ನುವ ಜಿಂಕೆ, ಮಂಗಗಳು

Wednesday, November 27th, 2019
kodagu

ಮಡಿಕೇರಿ : ಮಾನವ ಸಂಕುಲಕ್ಕೆ ಮಾರಕವಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳು ಇದೀಗ ವನ್ಯಜೀವಿಗಳಿಗೂ ವಿಷವಾಗಿ ಪರಿಣಮಿಸಿದೆ. ಹಚ್ಚ ಹಸಿರಿನ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಭಾಗ ಅರಣ್ಯ ಪ್ರದೇಶವೇ ಇದ್ದು, ಪ್ರಾಣಿಗಳಿಗೂ ಕೊರತೆ ಇಲ್ಲ. ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಇದೇ ಕಾರಣದಿಂದ ಪ್ಲಾಸ್ಟಿಕ್ ತ್ಯಾಜ್ಯ ತುಂಬಿ ಹೋಗಿದೆ. ಈ ಪ್ಲಾಸ್ಟಿಕ್‌ಗಳು ರಸ್ತೆ ಬದಿಯ ಅರಣ್ಯ ಪ್ರದೇಶವನ್ನು ವ್ಯಾಪಿಸುತ್ತಿದ್ದು, ಏನೂ ಅರಿಯದ ವನ್ಯಜೀವಿಗಳು ಇವುಗಳನ್ನು ತಿಂದು ಜೀವಕ್ಕೆ ಕುತ್ತು ತಂದುಕೊಳ್ಳುತ್ತಿವೆ. ಮಂಗ, ಜಿಂಕೆ ಮತ್ತಿತರ ಪ್ರಾಣಿಗಳು ಪ್ಲಾಸ್ಟಿಕ್ […]

ಮಂಗಳೂರು : ಅಂಗಡಿಗಳಲ್ಲಿದ್ದ ನಿಷೇಧಿತ ಪ್ಲಾಸ್ಟಿಕ್‌ ವಶ : 22,800 ರೂ. ದಂಡ ವಸೂಲಿ

Wednesday, September 4th, 2019
plastic

ಮಂಗಳೂರು : ಪರಿಸರ ರಕ್ಷಣೆ ನಿಟ್ಟಿನಲ್ಲಿ ಇಲ್ಲಿನ ಮಹಾನಗರ ಪಾಲಿಕೆ ಅಧಿಕಾರಿಗಳು ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಮಂಗಳೂರು ಮಹಾನಗರ ಪಾಲಿಕೆ ಪರಿಸರ ಎಂಜಿನಿಯರ್‌ ಮಧು ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡ ನಗರದ ವಿವಿಧ ಕಡೆಗಳಿಗೆ ದಾಳಿ ನಡೆಸಿ ಸುಮಾರು 113 ಕೆಜಿ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡಿದ್ದು, 22,800 ರೂ. ದಂಡ ವಸೂಲಿ ಮಾಡಿದ್ದಾರೆ. ಪಾಲಿಕೆ ಅರೋಗ್ಯ […]

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು : ಪ್ಲಾಸ್ಟಿಕ್ ಬಳಕೆದಾರರ ಮೇಲೆ ದಂಡ

Tuesday, September 3rd, 2019
banned-plastic

ಮಂಗಳೂರು : ಪ್ಲಾಸ್ಟಿಕ್ ನಿಷೇಧದ ಕುರಿತು ಇತೀಚೆಗೆ ಕಟ್ಟುನಿಟ್ಟಿನ ಕ್ರಮ ಅಳವಡಿಸಲಾಗಿದ್ದು, ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಸದಂತೆ ಈ ಹಿಂದೆ ಅಧಿಕಾರಿಗಳು ಸೂಚಿಸಿದ್ದರು. ಆದರೂ ಎಚ್ಚೆತ್ತುಕೊಳ್ಳದ ನಗರದ ಅಂಗಡಿ ಮುಂಗಟ್ಟುಗಳಿಗೆ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ಭಾರಿ ದಂಡ ವಿಧಿಸಿ ಅವರ ಬಳಿಯಲ್ಲಿದ್ದ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಮಹಾನಗರ ಪಾಲಿಕೆ ಅಧಿಕಾರಿಗಳ ತಂಡ ಸೆಂಟ್ರಲ್ ಮಾರುಕಟ್ಟೆ,ಕದ್ರಿ, ಸುರತ್ಕಲ್, ಬಂದರು ಮತ್ತು ಲಾಲ್ ಬಾಗ್ ಪ್ರದೇಶದಲ್ಲಿ ಕಾರ್ಯಚರಣೆ ಪ್ರಾರಂಭಿಸಿದ್ದು ಕದ್ರಿ ಭಾಗದಲ್ಲಿ ಸುಮಾರು 50 ಕೆ.ಜಿಯಷ್ಟು […]

ಪಾರ್ಸೆಲ್ ನಲ್ಲಿ ಪ್ಲಾಸ್ಟಿಕ್ ಬದಲು ಬಾಳೆ ಎಲೆ ಬಳಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

Thursday, June 20th, 2019
Banana leaf

ಮಂಗಳೂರು : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಪ್ಲಾಸ್ಟಿಕ್ ಬದಲು ಬಾಳೆ ಎಲೆ ಉಪಯೋಗಿಸಿ ಎಂದು ಝೊಮೊಟೋ, ಸ್ವಿಗ್ಗಿ, ಊಬರ್ ಈಟ್ಸ್ ಗೆ ಮನವಿ ಮಾಡಿದ್ದಾರೆ. ಆಹಾರವನ್ನು ಬಾಳೆ ಎಲೆಯಲ್ಲಿ ಕಟ್ಟುವುದು ಕರಾವಳಿಯ ಸಂಪ್ರದಾಯ. ಕರಾವಳಿಯ ಹೆಚ್ಚಿನ ಹೋಟೆಲ್ ಗಳಲ್ಲಿ ತಿಂಡಿ ಅಥವಾ ಊಟವನ್ನು ಬಾಳೆ ಎಲೆಯಲ್ಲೇ ಬಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆಹಾರ ಪೊಟ್ಟಣ ಕಟ್ಟಲು ಬಾಳೆ ಎಲೆ ಬಳಸಿ ಎಂದು ಆಹಾರ ಡೆಲಿವರಿ ಸಂಸ್ಥೆಗಳಿಗೆ ಶಾಸಕರು ಮನವಿ ಮಾಡಿದ್ದಾರೆ. ಝೊಮೊಟೋ, […]

ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಮುಂದಾಗಿರುವ ಸರ್ಕಾರ..!

Saturday, July 14th, 2018
plastic-bottle

ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಮುಂದಾಗಿರುವ ಸರ್ಕಾರ, ತನ್ನಿಂದಲೇ ಮೊದಲ್ಗೊಂಡು ಪ್ಲಾಸ್ಟಿಕ್ ಬಳಸದಿರುವ ನಿರ್ಧಾರ ಕೈಗೊಂಡಿದೆ. ಹೌದು, ಈಗಾಗಲೇ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುತ್ತಲೇ ಬರುತ್ತಿದೆ. ಆದರೆ ಈ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳೇ ಪ್ಲಾಸ್ಟಿಕ್ ಬಳಕೆಯಲ್ಲಿ ಸ್ವನಿಯಂತ್ರಣ ತರುವಲ್ಲಿ ಹಿಂದೇಟು ಹಾಕುತ್ತಿವೆ. ಇದೀಗ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ, ಸರ್ಕಾರಿ ಕಚೇರಿಗಳಲ್ಲಿ ಇದರ ಅನುಷ್ಠಾನಕ್ಕೆ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ […]

ನಗರದ ವುಡ್‌ಲ್ಯಾಂಡ್ಸ್ ನಲ್ಲಿ ಜೂಟ್ ಮೇಳ ಉದ್ಘಾಟನೆ

Thursday, August 1st, 2013
Jute fair

ಮಂಗಳೂರು : ನಗರದ ವುಡ್‌ಲ್ಯಾಂಡ್ಸ್ ನಲ್ಲಿ ಜುಲೈ 31 ರಿಂದ 5 ದಿನಗಳ ಕಾಲ ನಡೆಯಲಿರುವ  ಜೂಟ್ ಮೇಳವನ್ನು  ಜಿಲ್ಲಾಧಿಕಾರಿ ಎನ್.ಪ್ರಕಾಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ಲಾಸ್ಟಿಕ್ ಬಳಕೆಯ ಪರ್ಯಾಯ ಉತ್ಪನ್ನವಾಗಿ ಜೂಟ್‌ನಿಂದ ತಯಾರಾದ ವಸ್ತುಗಳನ್ನು ಬಳಸಬಹುದು. ಜೂಟ್‌ ಪರಿಸರ ಸ್ನೇಹಿ ಉತ್ಪನ್ನವಾಗಿದ್ದು ಪ್ಲಾಸ್ಟಿಕ್ ವಸ್ತುಗಳಿಗೆ ಬದಲಾಗಿ ಅವುಗಳನ್ನು ಬಳಸಬಹುದು ಎಂದು ಹೇಳಿದರು. ಮೇಳದಲ್ಲಿ ಗ್ರಾಹಕರ ಮೆಚ್ಚುಗೆಯ ವಸ್ತುಗಳಾದ ಅಲಂಕಾರಿಕ ಸಾಮಾಗ್ರಿಗಳು, ಮನೆಯ ಸಾಮಾಗ್ರಿಗಳು, ಹಾಗೂ ಇನ್ನಿತ್ತರ ಉತ್ಪನ್ನಗಳನ್ನು ಮಾರಾಟಮಾಡಲಾಗುತ್ತಿದೆ, ಜೂಟ್ ಉತ್ಪನ್ನಗಳು ಪರಿಸರ ನೈರ್ಮಲ್ಯಕ್ಕೆ ಸಹಕಾರಿ ಎಂದು ತಿಳಿಸಿದರು. ನ್ಯಾಷನಲ್ […]

ನಗರ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶ ಬೇಡ: ಜಿಲ್ಲಾಧಿಕಾರಿ

Friday, April 15th, 2011
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು : ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲು ಅದರಲ್ಲೂ ಮುಖ್ಯವಾಗಿ ಯೋಜನೆ ಉಲ್ಲಂಘಿಸಿ ನಿರ್ಮಾಣವಾಗುವ ಕಟ್ಟಡಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸ ಬೇಕೆಂದು ಜಿಲ್ಲಾಧಿಕಾರಿ ಸುಬೋಧ್ ಯಾದವ್ ಅವರು ಹೇಳಿದರು. ಅವರಿಂದು ಕಾರ್ಪೋರೇಷನ್ ಕಚೇರಿಯಲ್ಲಿ ನಡೆದ ಪಾಲಿಕೆ ಅಭಿವೃದ್ಧಿ ಸಭೆಯಲ್ಲಿ ಪ್ರಗತಿಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಕಟ್ಟಡ ನಿರ್ಮಾಣದಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ ಬಹಳಷ್ಟು ದೂರುಗಳು ಬರುತ್ತಿದ್ದು, ನಗರ ಯೋಜನಾಧಿಕಾರಿಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದರು. ಅಕ್ರಮಗಳ ದೂರು ವ್ಯಾಪಕವಾದರೆ ತನ್ನ ಮಧ್ಯಪ್ರವೇಶ ಅನಿವಾರ್ಯವಾದೀತು ಎಂಬ ಎಚ್ಚರಿಕೆಯನ್ನು […]