ಮಂಗಳೂರು ವಿವಿ ಪರೀಕ್ಷಾ ಫಲಿತಾಂಶ- ಸ್ಪಷ್ಟೀಕರಣ

Monday, January 3rd, 2022
MuLinx

ಮಂಗಳೂರು ವಿಶ್ವವಿದ್ಯಾನಿಲಯ ಆಗಸ್ಟ್-ಸೆಪ್ಟೆಂಬರ್ ಹಾಗೂ ಸಪ್ಪೆಂಬರ್-ಅಕ್ಟೋಬರ್ 2021ರಲ್ಲಿ ನಡೆಸಿದ ಪದವಿ ಪರೀಕ್ಷೆಗಳ ಫಲಿತಾಂಶಗಳ ಹಿನ್ನಲೆಯಲ್ಲಿ ಕೆಲವು ಪತ್ರಿಕೆಗಳಲ್ಲಿ ಫಲಿತಾಂಶದ ಕುರಿತಾಗಿ ಏಕಪಕ್ಷೀಯ ಅಭಿಪ್ರಾಯಗಳನ್ನೊಳಗೊಂಡ ವರದಿಗಳು ಪ್ರಕಟವಾಗಿದ್ದು, ಗೊಂದಲಕ್ಕೆ ಕಾರಣವಾಗುತ್ತಿದೆ. ಮಂಗಳೂರು ವಿಶ್ವವಿದ್ಯಾನಿಲಯವು ಸ್ವಂತಿಕೆಯೆಡೆಗೆ ಸಾಗುವ ಉದ್ದೇಶದಿಂದ MuLinx ಎನ್ನುವ Open Source Software ನ್ನು ಬಳಸಿಕೊಂಡು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಸವಾಲುಗಳನ್ನು ಎದುರಿಸಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ಪ್ರಕಟಿಸಿ ಮಾಡಿ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳುವಂತಾಗಲು ಪ್ರಯತ್ನಮಾಡಲಾಗಿದೆ. ಕೋವಿಡ್ ಹಿನ್ನಲೆಯಲ್ಲಿ ಒಂದರ ನಂತರ ಒಂದಾಗಿ ನಿರಂತರವಾಗಿ ಪರೀಕ್ಷೆಗಳನ್ನು ನಡೆಸಿರುವುದರಿಂದ […]

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಇಲ್ಲಿದೆ ನೋಡಿ

Friday, July 30th, 2021
cbse-result

ಬೆಂಗಳೂರು  : ಸರಕಾರ  ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಿದೆ. ಜುಲೈ 30ರಂದು ಮಧ್ಯಾಹ್ನ ಪ್ರಕಟಗೊಂಡಿರುವ CBSE 12ನೇ ತರಗತಿ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ ನೋಡಬಹುದು. ಅಲ್ಲದೇ ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ ತಮ್ಮ ಫಲಿತಾಂಶ ಪಡೆಯಬಹುದು. 2021ರ […]

ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ, ಹುಡುಗಿಯ 77.74%. ಬಾಲಕರು 66.41%

Monday, August 10th, 2020
sslc Result

ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ರಾಜ್ಯಾದ್ಯಂತ 8, 48, 203 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 19, 086 ವಿದ್ಯಾರ್ಥಿಗಳ ಕೊರತೆಯುಂಟಾಗಿತ್ತು. ರಾಜ್ಯಾದ್ಯಂತ 34 ಶೈಕ್ಷಣಿಕ ಜಿಲ್ಲೆಗಳ 22 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿತ್ತು ಎಂದು ಹೇಳಿದರು. ಕೊರೊನಾ ಸೋಂಕಿನ ಭೀತಿಯಿಂದ 18,067 ವಿದ್ಯಾರ್ಥಿಗಳು ಮೊದಲು ಪರೀಕ್ಷೆ […]

ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Tuesday, July 14th, 2020
PU Karnataka

ಬೆಂಗಳೂರು: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದರು ಈ ವರ್ಷ ಒಟ್ಟಾರೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಪ್ರಮಾಣ ಶೇಕಡಾ 61.80 ಆಗಿದೆ. ಕಳೆದ ವರ್ಷಕ್ಕಿಂತ ಶೇಕಡಾ 0.7ರಷ್ಟು ಫಲಿತಾಂಶ ಹೆಚ್ಚಾಗಿದ್ದು ಕಳೆದ ವರ್ಷ ಶೇಕಡಾ 61.73 ಫಲಿತಾಂಶ ಬಂದಿತ್ತು. ಶೇಕಡಾ 68.73ರಷ್ಟು ಫಲಿತಾಂಶ ಗಳಿಸಿ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ತೇರ್ಗಡೆ ಹೊಂದಿದ ಒಟ್ಟಾರೆ ಹುಡುಗರ ಸಂಖ್ಯೆ […]

ದ್ವೇಷ, ವಿಭಜಕ ರಾಜಕಾರಣ ಮಾಡುವವರಿಗೆ ದೆಹಲಿ ಫಲಿತಾಂಶ ತಕ್ಕ ಉತ್ತರ : ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

Tuesday, February 11th, 2020
mamatha

ಕೋಲ್ಕತಾ : ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ದಾಖಲಿಸಿರುವ ಗೆಲುವು ಪ್ರಜಾಪ್ರಭುತ್ವದ ಗೆಲುವು, ದ್ವೇಷದ ಮತ್ತು ವಿಭಜಕ ರಾಜಕಾರಣ ಮೇಲೆ ನಂಬಿಕೆ ಇಟ್ಟಿರುವ ರಾಷ್ಟ್ರೀಯ ನಾಯಕರಿಗೆ ತಕ್ಕ ಉತ್ತರ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು ಆಮ್ ಆದ್ಮಿ ಪಕ್ಷ ಮೂರನೇ ಭಾರಿಗೆ ಭರ್ಜರಿ ಗೆಲುವು ದಾಖಲಿಸಿದೆ. ಅರವಿಂದ ಕೇಜ್ರಿವಾಲ್ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಟ್ವಿಟರ್ನಲ್ಲಿ ಪ್ರಶಂಶೆ ವ್ಯಕ್ತಪಡಿಸಿರುವ […]

ದೆಹಲಿ ಒಂದು ಮಹಾನಗರ ಪಾಲಿಕೆ ಇದ್ದಂತೆ. ಫಲಿತಾಂಶದಿಂದ ಬಿಜೆಪಿಗೆ ಹಿನ್ನಡೆಯಲ್ಲ : ಡಿಸಿಎಂ ಗೋವಿಂದ ಕಾರಜೋಳ

Tuesday, February 11th, 2020
govinda

ಬಾಗಲಕೋಟೆ : ದೆಹಲಿ ಒಂದು ಮಹಾನಗರ ಪಾಲಿಕೆ ಇದ್ದಂತೆ. ದೆಹಲಿ ಒಂದು ಊರಿಗೆ ಸೀಮಿತವಾದ ಆಡಳಿತ ನಡೆಸಿದಂತೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಮಂಗಳವಾರ ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೊಡ್ಡ ಆಡಳಿತ ಮಾಡ್ತಿದ್ದರೆ. ಲೋಕಸಭೆ ಚುನಾವಣೆಯಲ್ಲಿ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಿಲ್ಲ ಯಾಕೆ ಎಂದು ಪ್ರಶ್ನಿಸಿದರು. ದೆಹಲಿ ಫಲಿತಾಂಶದಿಂದ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿಲ್ಲ. ಅದೊಂದು ಮಹಾನಗರ […]

ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಪೋಷಕರು ,ಶಿಕ್ಷಕರು ಸಹಕರಿಸಬೇಕು-ಎ.ಬಿ.ಇಬ್ರಾಹಿಂ

Thursday, February 6th, 2014
dc Ibrahim

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆ ಅತ್ಯಂತ ಹೆಚ್ಚು ಸುಶಿಕ್ಷಿತರನ್ನು ಹೊಂದಿರುವ ಜಿಲ್ಲೆಯಾಗಿದ್ದರೂ ಸಹ 2-3 ವರ್ಷಗಳಿಂದ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಮಾಣ ಅತ್ಯಂತ ಕಳವಳಕಾರಿಯಾಗಿದ್ದು ಫಲಿತಾಂಶ ಪ್ರಮಾಣ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಪೋಷಕರು/ಶಿಕ್ಷಕರು ಸಹಕರಿಸುವಂತೆ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆ ಸಾಕ್ಷರತೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.ನೈರ್ಮಲ್ಯದಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಹಾಗೂ ರಾಷ್ಟ್ರ ಮಟ್ಟದಲ್ಲಿ […]

ಪಿಯುಸಿ ಫಲಿತಾಂಶಃ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

Thursday, May 24th, 2012
PUC Result

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು,ಶೇ. 86.1 ಫಲಿತಾಂಶ ಲಭಿಸಿದೆ. ಉಡುಪಿ ದ್ವಿತೀಯ (ಶೇ.85.32) ಸ್ಥಾನ ಹಾಗೂ ಕೊಡಗು ತೃತೀಯ ಸ್ಥಾನ ಪಡೆದಿದ್ದು, ಯಾದಗಿರಿ ಶೇ.32.21ಫಲಿತಾಂಶ ಪಡೆದು ಕೊನೆಯ ಸ್ಥಾನ ಪಡೆದಿದೆ. ರಾಜ್ಯದಲ್ಲಿ ಈ ಬಾರಿ ಪಿಯುಸಿಯಲ್ಲಿ ಒಟ್ಟು ಶೇ.57.03ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.8.01ರಷ್ಟು ಹೆಚ್ಚಳವಾಗಿದೆ. ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂದರೆ ಎಂ.ದೀಪಾ ಮಲ್ಲೇಶ್ವರದ ಎಂಇಎಸ್ ಕಿಶೋರ ವಿದ್ಯಾಲಯದ ವಿದ್ಯಾರ್ಥಿನಿ 593 […]

ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು

Tuesday, January 4th, 2011
ಜಿಲ್ಲಾ ಮತ್ತು ತಾಲೂಕ ಪಂಚಾಯತ್ ಚುನಾವಣೆ ಫಲಿತಾಂಶ

ಬೆಂಗಳೂರು : ಎರಡು ಹಂತದಲ್ಲಿ ನಡೆದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸುವ ಮೂಲಕ ಆಡಳಿತಾರೂಢ ಬಿಜೆಪಿಯ ಕಡೆ ಮತದಾರ ಒಲವು ತೋರಿಸಿದ್ದಾನೆ ಬಿಜೆಪಿಯ ಭದ್ರಕೋಟೆ  ಬಳ್ಳಾರಿಯಲ್ಲಿ ಮತ್ತು ಉತ್ತರ ಕನ್ನಡದಲ್ಲಿ ಬಿಜೆಪಿ ಬಹುತೇಕ ಹಿಂದೆ ಬಿದ್ದಿದೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಶಿವಮೂಗ್ಗದಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಯಡಿಯೂರಪ್ಪ ಮುಖಭಂಗವನ್ನು ತಪ್ಪಿಸಿಕೊಂಡಿದ್ದಾರೆ. ರಾಮನಗರ, ಹಾಸನ, ತುಮಕೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಜೆಡಿಎಸ್, ಬೆಂಗಳೂರು ಗ್ರಾಮಾಂತರ, ಬೆಂಗಳೂರು […]