ಕೊರೊನಾ ಸೋಂಕಿನಿಂದ ಗುರುವಾರ ಕುಲಶೇಖರದ 80ರ ವೃದ್ಧೆ ಸಾವು

Thursday, May 14th, 2020
Covid death Mangalore

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುರುವಾರ ಕುಲಶೇಖರದ 80ರ ವೃದ್ಧೆ ಮೃತಪಟ್ಟಿದ್ದಾರೆ. ಈ ವೃದ್ಧೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಈಕೆ ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವ ವಾಯು ಸಮಸ್ಯಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆಸ್ಪತ್ರೆಯಲ್ಲಿದ್ದ ತಾಯಿ ಮತ್ತು ಮಗ ಇಬ್ಬರಿಗೂ ಕೋವಿಡ್-19 ಪಾಸಿಟಿವ್ ಆಗಿತ್ತು. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ  ಒಟ್ಟು ಐದು ಮಂದಿ  ಮೃತಪಟ್ಟಿದ್ದಾರೆ. ಬುಧವಾರ ಸೋಂಕಿನಿಂದ ಬಳಲುತ್ತಿದ್ದ ಬೋಳೂರಿನ 58ರ ಮಹಿಳೆ ಸಾವಿಗೀಡಾದ್ದಾರೆ. ಈಗ ಫಸ್ಟ್‌ ನ್ಯೂರೋ ಆಸ್ಪತ್ರೆ ಸಂಪರ್ಕದಿಂದ ಸೋಂಕಿತರಾದವರ ಸಂಖ್ಯೆ 20ಕ್ಕೆ […]

ಕೋವಿಡ್ ಸೋಂಕಿಗೆ ಬೋಳೂರಿನ 58 ವರ್ಷದ ಮಹಿಳೆ ಮೃತ್ಯು

Wednesday, May 13th, 2020
boloor-death

ಮಂಗಳೂರು : ಕೋವಿಡ್ ಸೋಂಕಿಗೆ ತುತ್ತಾಗಿದ್ದ  ಬೋಳೂರಿನ 58 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳು ಸಂಬಂದಿತ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಗೆ ಸೋಂಕು ತಗಳಿತ್ತು ನಂತರ ಗಂಟಲಿನ ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು ಅದರ ವರದಿ ಏಪ್ರಿಲ್ 3೦ರಂದು ಬಂದಿದ್ದು ಅದರಲ್ಲಿ ಕೋವಿಡ್ ದೃಢಪಟ್ಟಿತ್ತು ನಂತರ ಅವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿದ್ದ ಅವಧಿಯಲ್ಲಿ, […]

ದ.ಕ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರು ಸೇರಿ, ಒಟ್ಟು ಮೂವರಿಗೆ ಕೊರೊನಾ ಪಾಸಿಟಿವ್

Wednesday, May 6th, 2020
ದ.ಕ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರು ಸೇರಿ, ಒಟ್ಟು ಮೂವರಿಗೆ ಕೊರೊನಾ ಪಾಸಿಟಿವ್

ಮಂಗಳೂರು : ದ.ಕ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 28 ಪ್ರಕರಣ ಪತ್ತೆಯಾದಂತಾಗಿದೆ. ಸದ್ಯ 13 ಸಕ್ರಿಯಕೊರೊನಾ ಪ್ರಕರಣಗಗಳಿವೆ. ಫಸ್ಟ್ ನ್ಯೂರೋ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ P-536 ಮಹಿಳೆಯಿಂದ ಇಬ್ಬರಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ಬೋಳೂರು ನಿವಾಸಿಗಳಾದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಗೆ ಸೋಂಕು ಇರುವುದು ದೃಢಪಟ್ಟಿದೆ. ಬಂಟ್ವಾಳದ ಪಿ – 360 ರ ಸಂಪರ್ಕದಲ್ಲಿದ್ದ ಮೃತ ಮಹಿಳೆಯ 16 ವರ್ಷದ ಮಗಳಿಗೂ […]

ಮಂಗಳೂರಲ್ಲಿ ಸೋಮವಾರ ಇಬ್ಬರಿಗೆ ಸೋಂಕು ದೃಢ, ಇದೀಗ ಕುಲಶೇಖರ ಸೀಲ್ ಡೌನ್

Monday, April 27th, 2020
Kulashekara covid

ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾದ ಇನ್ನಿಬ್ಬರ ವರದಿ ಬಂದಿದ್ದು 80 ವರ್ಷದ ಮಹಿಳೆ  ಹಾಗೂ ಆಕೆಯ ಆರೈಕೆ ಮಾಡಿದ ಮಗನಲ್ಲೂ ಕೊರೊನಾ ಸೋಂಕು ದೃಢವಾಗಿದೆ. ಕುಲಶೇಖರದ ನಿವಾಸಿಯಾಗಿರುವ 80 ವರ್ಷದ ಮಹಿಳೆ ಹಾಗೂ ಆಕೆಯ 45 ವರ್ಷದ ಪುತ್ರನಲ್ಲಿ ಸೋಂಕು ದೃಢವಾಗಿದ್ದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾ ದೃಢವಾದ ಬಂಟ್ವಾಳದ ಮೃತ ಮಹಿಳೆಯ ಚಿಕಿತ್ಸೆ ಪಡೆಯುತ್ತಿದ್ದ ಪಕ್ಕದ ಕೊಠಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಆಯಾ […]