ಜಾನಪದ- ಶಾಸ್ತ್ರೀಯದ ಸ್ಪಂದನ, ಸಾಹಸ- ಹೆಜ್ಜೆಗಳ ಸಮ್ಮಿಲನ ವಿರಾಸತ್: ರಂಗೇರಿಸಿದ ನೃತ್ಯ, ಕಸರತ್ತಿನ ಗಮ್ಮತ್ತು
Thursday, December 12th, 2024ಮೂಡಬಿದ್ರೆ : ಪಂಡಿತ್ ಎಂ.ವೆಂಕಟೇಶ್ ಕುಮಾರ್ ಅವರ ಭಕ್ತಿ ಗಾನ ಸುಧೆಯಲ್ಲಿ ಮಿಂದ ಪ್ರೇಕ್ಷಕರನ್ನು ನರ್ತನ ಲೋಕಕ್ಕೆ ಕೊಂಡೊಯ್ದದ್ದು, ಗುಜರಾತ್‌ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದ ವೈವಿಧ್ಯಮಯ ಗುಜರಾತಿ ಜಾನಪದ ನೃತ್ಯ ಪ್ರದರ್ಶನ. ಉತ್ತರದ ಹಿಂದೂಸ್ಥಾನಿಗೆ ಶ್ರೋತೃಗಳಾಗಿದ್ದ ವಿರಾಸತ್ ಪ್ರೇಕ್ಷಕರು ಪಶ್ಚಿಮದ ಜಾನಪದಕ್ಕೆ ವೀಕ್ಷಕರಾದರು. ದೇಶದ ಪಶ್ಚಿಮ ತೀರದ ಗುಜರಾತ್‌ನಲ್ಲಿ ನವರಾತ್ರಿಯ ಸಂದರ್ಭದಲ್ಲಿ ದೇವಿ ಆರಾಧನೆ ಮಾಡುತ್ತಾ ನರ್ತಿಸುವ ಜಾನಪದ ನೃತ್ಯವೇ ಗಾರ್ಭ. ಗುಜರಾತ್‌ನ ರಂಗ್ ಮಲಹರ್ ತಂಡ ಸದಸ್ಯರು ಸಾಂಪ್ರದಾಯಿಕ ವಸ್ತ್ರ ತೊಟ್ಟು […]