ಬಂಗಾರಪ್ಪ ಬಗ್ಗೆ ಬರೆದಿದ್ದೆಲ್ಲ ಸತ್ಯ: ಪೂಜಾರಿ ಮತ್ತೆ ತಡವಿಕೊಂಡರು!

Wednesday, February 14th, 2018
bangarappa

ಮಂಗಳೂರು: “ನನ್ನ ಆತ್ಮಚರಿತ್ರೆಯಲ್ಲಿ ಏನು ಬರೆದಿದ್ದೇನೋ ಅವೆಲ್ಲವೂ ಸತ್ಯ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಸತ್ಯವನ್ನೇ ಹೇಳಿರುವುದು” ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಮ್ಮ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಮರುಮುದ್ರಿತ ‘ಸಾಲ ಮೇಳದ ಸಂಗ್ರಾಮ’ ಬಿಡುಗಡೆಗೊಳಿಸಿ ಅವರು ಮಾತನಾಡಿ, ತಮ್ಮ ಆತ್ಮಚರಿತ್ರೆಯಲ್ಲಿ ಬರೆದಿರುವುದೆಲ್ಲ ಸುಳ್ಳು ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರಿಗೆ ವೇದಿಕೆಯಿಂದಲೇ ಉತ್ತರಿಸಿದರು. ಪೂಜಾರಿ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಿ ಎಂದ […]

‘ಇಂದಿರಾ ಗಾಂಧಿಗೆ ಬಂಗಾರಪ್ಪ ಹೊಡೆಯಲು ಹೋಗಿದ್ದರು ಅನ್ನೋದು‌ ಸುಳ್ಳು’

Friday, February 9th, 2018
indira-gandhi

ಮಂಗಳೂರು: ಸಾಲಮೇಳದ ಸಂಗ್ರಾಮ’ದಲ್ಲಿ ಪ್ರಸ್ತಾಪವಾಗಿರುವ ಮಾಜಿ ಮುಖ್ಯಮಂತ್ರಿ, ದಿವಂಗತ ಸಾರೆಕೊಪ್ಪ ಬಂಗಾರಪ್ಪ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಪುತ್ರ ಮಧು ಬಂಗಾರಪ್ಪ ವ್ಯಗ್ರರಾಗಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಇಂದಿರಾಗಾಂಧಿಯವರಿಗೆ ಬಂಗಾರಪ್ಪ ಹೊಡೆಯಲು ಹೋಗಿದ್ದಾರೆ ಅನ್ನುವುದು ಸುಳ್ಳು. ಹೊಡೆಯುವ ಚಾಳಿ ಬಂಗಾರಪ್ಪನರದ್ದಲ್ಲ. ಹೊಡೆಯುವ ಚಾಳಿ ಕರಾವಳಿಯ ಜನರದ್ದು. ಜನಾರ್ದನ ಪೂಜಾರಿಯಂತವರಿಂದ ಕರಾವಳಿಯಲ್ಲಿ ಹೊಡೆಯುವ ಚಾಳಿ ಬಂದಿದೆ,” ಎಂದು ಕಿಡಿಕಾರಿದರು. ಜನಾರ್ದನ ಪೂಜಾರಿ ಆತ್ಮಕಥೆಯಲ್ಲಿನ ಕೆಲವು ಸ್ಫೋಟಕ ಸತ್ಯಗಳು! “ಜನಾರ್ದನ ಪೂಜಾರಿ ಗೆದ್ದಿರೋದಕ್ಕಿಂತ ಸೋತಿರೋದು ಜಾಸ್ತಿ. ಜನಾರ್ದನ […]

ಬಂಗಾರಪ್ಪನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಿರಿ: ಜನಾರ್ದನ ಪೂಜಾರಿ

Tuesday, September 13th, 2016
janardhan-pujary

ಮಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ನಡೆದ ಸರ್ವಪಕ್ಷ ಸಭೆಯ ನಿರ್ಧಾರವನ್ನು ಪಾಲಿಸಲು ಮುಖ್ಯಮಂತ್ರಿಯವರು ಬದ್ಧತೆ ತೋರಿಸಿಲ್ಲ. 24 ಗಂಟೆಯೊಳಗೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ರಾಜ್ಯದ ಜನರಿಗೆ ತಮ್ಮ ನಿರ್ಧಾರ ಸ್ಪಷ್ಟಪಡಿಸಬೇಕು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಿರಿ ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಾಕೀತು ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರೂ ಈವರೆಗೆ ಮಾತಾಡಿಲ್ಲ. ರಾಜ್ಯದ ಜನರ ಭಾವನೆ […]

ಎಸ್‌. ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ವಿಧಿ ವಶ

Tuesday, April 22nd, 2014
shakunthala Bangarappa

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಕುಂತಲಾ ಬಂಗಾರಪ್ಪ ಅವರು ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಮಧ್ಯಾಹ್ನ 3.40ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಪುತ್ರರಾದ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ, ಪುತ್ರಿ ಗೀತಾ ಶಿವರಾಜ್ ಕುಮಾರ್ ಮುಂತಾದ ಕುಟುಂಬ ಸದಸ್ಯರನ್ನು ಶಕುಂತಲಾ ಬಂಗಾರಪ್ಪ ಅಗಲಿದ್ದಾರೆ. ಶಿವಮೊಗ್ಗ ಲೋಕಸಭೆ ಚುನಾವಣೆಗೆ ಜೆಡಿಎಸ್ […]