ಬಂಟ್ವಾಳ ತಾಲೂಕು ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ಕೆ. ನಿಧನ

Saturday, September 19th, 2020
Radhakrishna

ಬಂಟ್ವಾಳ: ಇಲ್ಲಿನ ತಾಲೂಕು ಕಚೇರಿಯ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ಕೆ.(50) ಅವರು ಶನಿವಾರ ಮುಂಜಾನೆ ಹೃದಯಾಘಾತದಿಂದ ಬಿ.ಸಿ.ರೋಡಿನಲ್ಲಿ ನಿಧನ ಹೊಂದಿದರು. ಕಳೆದ ಒಂದೂವರೆ ವರ್ಷಗಳಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಮೂಲತಃ ಶಿರ್ತಾಡಿಯವರಾಗಿದ್ದು,ಕಂದಾಯ ಇಲಾಖೆಯಲ್ಲಿ ಸಕಲೇಶಪುರ, ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್ ಸಿ, ತಹಶೀಲ್ದಾರ್ ರಶ್ಮಿ ಎಸ್.ಆರ್. ಮೊದಲಾದವರು  ಸಂತಾಪ ಸೂಚಿಸಿದ್ದಾರೆ.

ಬಂಟ್ವಾಳ ತಾಲೂಕಿನ ಅಕ್ಕ ಪಕ್ಕದ ಮನೆಯ 16 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

Friday, July 10th, 2020
Bantwal Covid

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿ ಇಂದು ಒಂದೇ ದಿನ 16 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಗ್ರಾಮದ ಒಂದು ಮನೆಯ 12 ಜನರಿಗೆ ಹಾಗೂ ಇನ್ನೊಂದು ಮನೆಯ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಈ ಎರಡೂ ಮನೆಗಳ ಸದಸ್ಯರಿಗೆ ಸೋಂಕು ದೃಢಪಟ್ಟಿತ್ತು. ಇವರ ಸಂಪರ್ಕದ ಕಾರಣದಿಂದ ಸೋಂಕು ದೃಢವಾಗಿದೆ ಎನ್ನಲಾಗಿದೆ. ತಾಲೂಕಿನ ಉಳಿದ ಪ್ರಕರಣಗಳ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ತಾಲೂಕಿನಲ್ಲಿ ಜು. ಎಂಟರಂದು 12, […]