ಬಂಟ್ವಾಳ ಸಿಪಿಐ ಕಚೇರಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು
Thursday, January 3rd, 2019ಬಂಟ್ವಾಳ : ಸಿಪಿಐ ಬಂಟ್ವಾಳ ಸಮಿತಿಯ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಗುರುವಾರ ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿದೆ. ಬಿ.ಸಿ.ರೋಡಿನ ಬೈಪಾಸ್ ನ ನಾಲ್ಕು ಮಾರ್ಗದ ಬಳಿ ಕಾರ್ಯಾಚರಿಸುತ್ತಿರುವ ಕಮ್ಯುನಿಸ್ಟ್ ಬಂಟ್ವಾಳ ಸಮಿತಿಯ ಕಚೇರಿಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಘಟನೆಯಿಂದ ಕಚೇರಿಯೊಳಗಿದ್ದ ಪಕ್ಷಕ್ಕೆ ಸಂಬಂಧಪಟ್ಟ ಕಡತಗಳು ಹಾಗೂ ಮುಖ್ಯವಾದ ಅರ್ಜಿಗಳು, ವಿದ್ಯಾರ್ಥಿ ವೇತನದ ಸಂಬಂಧಿಸಿದ ದಾಖಲೆಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ […]