ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಗೆ ಸಚಿವರ ಸೂಚನೆ ತಪ್ಪಿದ್ದಲ್ಲೀ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

Monday, September 6th, 2021
Angara

ಮಂಗಳೂರು :  ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ತಿಳಿಸಿದರು. ಸೆ. 6ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನಿರ್ಬಂಧಗಳ ಕುರಿತು ಚರ್ಚಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ […]

ಸಮುದ್ರದ ನೀರು, ಸಿಹಿ ನೀರಾಗಿಸುವ ಯಂತ್ರ ಅತ್ಯಂತ ಉಪಯುಕ್ತ: ಎಸ್. ಅಂಗಾರ

Friday, September 3rd, 2021
S Angara

ಮಂಗಳೂರು : ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಬಣ್ಣಿಸಿದರು. ಅವರು ಸೆ.3ರ ಶುಕ್ರವಾರ ಸಮುದ್ರದ ಹಳೆ ಬಂದರು ಮಾರ್ಗದ ಮೂಲಕ ಬೆಂಗರೆಗೆ ತೆರಳುವ ಸಂದರ್ಭದಲ್ಲಿ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾತನಾಡಿದರು. ಆಸ್ಟ್ರೇಲಿಯಾ […]

ರಾಜ್ಯಮಟ್ಟದ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

Saturday, August 31st, 2019
udupi

ಉಡುಪಿ : ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಬಂದರು ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ವಿಳಂಬವಾಗಿದ್ದು, ಈ ಬಗ್ಗೆ ರಾಜ್ಯಮಟ್ಟದ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೊಡೇರಿಯಲ್ಲಿ 33 ಕೋಟಿ ರೂ ವೆಚ್ಚದ ಬ್ರೇಕ್ ವಾಟರ್ ಕಾಮಗಾರಿ ಜನವರಿ […]

ದುರಸ್ತಿಯಾಗದ ರಸ್ತೆ: ಮತದಾನ ಬಹಿಷ್ಕಾರಕ್ಕೆ ಬಂದರು-ಮೊಗ್ರು ಗ್ರಾಮಸ್ಥರ ನಿರ್ಧಾರ

Monday, March 12th, 2018
belthangady

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಲ್ಲಮಾಡ-ಮುಗೇರಡ್ಕ ರಸ್ತೆ ದುರಸ್ತಿ ಮಾಡದ ಹಿನ್ನೆಲೆಯಲ್ಲಿ ಬಂದರು-ಮೊಗ್ರು ಗ್ರಾಮಸ್ಥರು ಮುಂಬರುವ ವಿಧಾನಸಭಾ ಚುನಾವಣೆಯ ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ. ಬೆಳ್ತಂಗಡಿ-ಉಪ್ಪಿನಂಗಡಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಮಾರ್ಗ ಇದಾಗಿದೆ. ಅಲ್ಲದೆ ಬಂದರು-ಮೊಗ್ರು ಗ್ರಾಮದಲ್ಲಿ ಸುಮಾರು 90ಕ್ಕೂ ಅಧಿಕ ಕುಟುಂಬಗಳಿವೆ. ಆದರೆ ರಸ್ತೆಯ ದುರಸ್ತಿ ಆಗದ ಕಾರಣ 90ಕ್ಕೂ ಅಧಿಕ ಕುಟುಂಬದ 500ಕ್ಕೂ ಅಧಿಕ ಜನ ಮತದಾನ ಬಹಿಷ್ಕಾರಕ್ಕೆ ನಿರ್ಧಾರ ಮಾಡಿದ್ದಾರೆ. ರಸ್ತೆ ದುರಸ್ತಿ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ […]

ಬಂದರು ಹಾಗೂ ಒಳನಾಡು ಜಲಸಾರಿಗೆ,ಮೀನುಗಾರಿಕೆ ಇಲಾಖೆಗೆ ರೂ.325.15 ಲಕ್ಷ ಹೆಚ್ಚುವರಿ ಅನುದಾನ

Wednesday, March 30th, 2011
ಶ್ರೀ ಕೃಷ್ಣ ಜೆ.ಪಾಲೇಮಾರ್

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿ ಹಾಗೂ ತಾಲ್ಲೂಕಿನಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರದ 2010-11 ನೇ ಸಾಲಿನಲ್ಲಿ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಗೆ 8 ಕಾಮಗಾರಿಗಳ ಅನುಷ್ಠಾನಕ್ಕಾಗಿ ರೂ.123.45 ಲಕ್ಷ ಹಾಗೂ ಮೀನುಗಾರಿಕಾ ಇಲಾಖೆಗೆ 14 ಕಾಮಗಾರಿಗಳಿಗೆ ರೂ.201.70ಲಕ್ಷ,ಹೆಚ್ಚುವರಿ ಅನುದಾನ ಒದಗಿಸಿದೆಯೆಂದು ರಾಜ್ಯದ ಜೀವಿಶಾಸ್ತ್ರ,ಪರಿಸರ,ಬಂದರು,ವಿಜ್ಞಾನ ಮತ್ತು ತಂತ್ರಜ್ಞಾನ, ಮೀನುಗಾರಿಕೆ ಹಾಗೂ ಜಲಸಾರಿಗೆ  ಸಚಿವರಾದ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೃಷ್ಣ ಜೆ.ಪಾಲೇಮಾರ್  ತಿಳಿಸಿರುತ್ತಾರೆ. ಮಂಗಳೂರು ತಣ್ಣೀರುಬಾವಿ ಬೆಂಗ್ರೆ […]