ನೂತನ ಸಂಪುಟದ ಸಚಿವರ ಪಟ್ಟಿ ಅಂತಿಮ, ಹೊಸ ಸಂಪುಟದ ಮಂತ್ರಿಗಳ ಪಟ್ಟಿ ಇಲ್ಲಿದೆ ನೋಡಿ

Wednesday, August 4th, 2021
Bommai cabinet

ಬೆಂಗಳೂರು : ನೂತನ ಸಂಪುಟದ ಸಚಿವರ ಪಟ್ಟಿ ಅಂತಿಮಗೊಳಿಸಿಕೊಂಡು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ಮರಳಿದ್ದಾರೆ. ಇಂದು ಮಧ್ಯಾಹ್ನ 2:15ಕ್ಕೆ ನೂತನ ಮಂತ್ರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ. ರಾಜಭವನ ದ ಗಾಜಿನಮನೆಯಲ್ಲಿ ಈ ಕಾರ್ಯಕ್ರಮಕ್ಕಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಯಡಿಯೂರಪ್ಪನವರು ಜುಲೈ 26 ರಂದು ರಾಜೀನಾಮೆ ನೀಡುವುದರೊಂದಿಗೆ, ಅವರ ಸಚಿವ ಸಂಪುಟ ಸಹ ಸ್ವಯಂಚಾಲಿತವಾಗಿ ವಿಸರ್ಜನೆಯಾಗುತ್ತದೆ. ಇದರ ಪರಿಣಾಮವಾಗಿ, ಯಡಿಯೂರಪ್ಪನವರ ಅವಧಿಯಲ್ಲಿ ಅವರ ಅಥವಾ ಅವರ ಉಪ ಮುಖ್ಯಮಂತ್ರಿಗಳು ಅಥವಾ ಮಂತ್ರಿಗಳಿಂದ ಯಾವುದೇ ನೇಮಕಾತಿಗಳನ್ನು ಮಾಡಿರುವುದು ಸಹ […]

ವಾರಾಂತ್ಯ ಕರ್ಫ್ಯೂ : ಬ್ಯಾರಿಕೇಡ್​​​ಗಳನ್ನು ಹಾಕಿ ಬಂದೋಬಸ್ತ್

Saturday, June 26th, 2021
commissioner

ಮಂಗಳೂರು : ಶುಕ್ರವಾರ  ರಾತ್ರಿಯಿಂದ ಸೋಮವಾರ ಬೆಳಗ್ಗೆ 7 ರ ವರೆಗೆ ಇರುವ ವಾರಾಂತ್ಯ ಕರ್ಫ್ಯೂಗೆ ಮಂಗಳೂರು ನಗರ ಭಾಗದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ನಗರ ಹೊರ ಭಾಗದಲ್ಲಿ ಜನರ ಓಡಾಟ ನಡೆಸುತ್ತಿದ್ದು, ಆ ಪ್ರದೇಶಗಳಲ್ಲಿಯೂ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂಗೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ‌ ಶುಕ್ರವಾರ  ರಾತ್ರಿಯಿಂದ ಸೋಮವಾರ ಬೆಳಗ್ಗೆ 7 ರ […]

ಕೆಎಸ್ಸಾರ್ಟಿಸಿ ನೌಕರರ ಮುಷ್ಕರ : ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್

Wednesday, April 7th, 2021
Ksrtc Bus

ಮಂಗಳೂರು :  ಕೆಎಸ್ಸಾರ್ಟಿಸಿ ನೌಕರರು ಇಂದಿನಿಂದ ಆರಂಭಿಸಿರುವ ಮುಷ್ಕರಕ್ಕೆ ದ.ಕ. ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನೌಕರರು ಕರ್ತವ್ಯಕ್ಕೆ ಹಾಜರಾಗದ ಕಾರಣ ಬಸ್ ಗಳು ಡಿಪೋದಲ್ಲೇ ಉಳಿದುಕೊಂಡಿವೆ. ವೇತನ ಪರಿಷ್ಕರಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ ನೌಕರರು ರಾಜ್ಯ ವ್ಯಾಪಿ ಮುಷ್ಕರ ಆರಂಭಿಸಿದ್ದಾರೆ. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ 470ಕ್ಕೂ ಅಧಿಕ ಬಸ್ ಗಳು ಬುಧವಾರ ನಿಲ್ದಾಣದಲ್ಲಿಯೇ ತಂಗಿವೆ. ಈ ನಡುವೆ ಸರಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಪ್ರಯಾಣ ಬೆಳೆಸುತ್ತಿರುವುದು ಕಂಡುಬರುತ್ತಿದೆ. ಬಸ್ […]

ಪಿಣರಾಯಿ ವಿಜಯನ್ ಮಂಗಳೂರು ಆಗಮನಕ್ಕೆ ಸೂಕ್ತ ಬಂದೋಬಸ್ತ್

Thursday, February 23rd, 2017
commissioner

ಮಂಗಳೂರು : ಫೆಬ್ರವರಿ 25 ರಂದು ಹಿಂದೂ ಸಂಘಟನೆಗಳು ನೀಡಿರುವ ಕರೆಗೆ  ಸರ್ವೊಚ್ಛ ನ್ಯಾಯಾಲಯದ ನಿರ್ದೇಶನದಂತೆ ಬಂದ್‌‌ ನಡೆಸಲು ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಬಂದ್‌‌ಗೆ ಕರೆ ನೀಡಿರುವ 44 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗೆ ತೊಂದರೆ ಉಂಟು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವ ರೀತಿ ಬಂದ್ ಅಥವಾ ಹರತಾಳ […]

ಬಕ್ರೀದ್‌ ವೇಳೆ ಅಹಿತಕರ ಘಟನೆ ನಡೆಯದಂತೆ ಮುಸ್ಲಿಂ ಸಮುದಾಯದ ಮನವಿ

Friday, September 9th, 2016
Bakrid

ಮಂಗಳೂರು: ಸೆಪ್ಟಂಬರ್ 12 ರಂದು ಬಕ್ರೀದ್ ಆಚರಣೆ ನಡೆಯುತ್ತಿದ್ದು, ಬಳಿಕ ಮೂರು ದಿನಗಳ ಖುರ್ಬಾನಿ ಕೊಡುವುದು ಇಸ್ಲಾಂ ಧರ್ಮದಲ್ಲಿ ನಡೆದುಕೊಂಡ ಬಂದ ವಿಧಿ. ಈ ಸಂದರ್ಭದಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಮಾಡುವಂತೆ ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗವು ಐಜಿಪಿ, ಪೊಲೀಸ್ ಕಮಿಷನರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಿದೆ. ಜೊತೆಗೆ ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮುಸ್ಲಿಮರಿಗೆ ಮನವಿ ಮುಸ್ಲಿಂ ಸೆಂಟ್ರಲ್ ಕಮಿಟಿ […]