ಬಕ್ರೀದ್ ದಿನದಂದು ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಇಲ್ಲ, ಪ್ರಾಣಿ ವಧೆ ಮತ್ತು ಬಲಿದಾನ ಮಾಡುವಂತಿಲ್ಲ

Friday, July 16th, 2021
Bakrid

ಮಂಗಳೂರು : ಕೋವಿಡ್-19 ಹಿನ್ನೆಲೆಯಲ್ಲಿ  ರಾಜ್ಯಾದ್ಯಂತ ಜು.21ರಂದು ನಡೆಯುವ ಬಕ್ರೀದ್ ಹಬ್ಬಕ್ಕೆ ಸಂಬಂಧಿಸಿ ಕೇಂದ್ರ ಸರಕಾರದ ನಿರ್ದೇಶನದಂತೆ ರಾಜ್ಯ ಸರಕಾರವು  ಮಾರ್ಗಸೂಚಿಯನ್ನು ಪ್ರಕಟಿಸಿದೆ. ಬಕ್ರೀದ್ ದಿನದಂದು ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ (ನಮಾಝ್)ಗೆ ನಿರ್ಬಂಧ ಹೇರಲಾಗಿದೆ. ಮಸೀದಿಗಳಲ್ಲಿ 50 ಮಂದಿಗಿಂತ ಹೆಚ್ಚು ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು. ಒಂದು ವೇಳೆ ಅಧಿಕ ಮಂದಿ ಮಸೀದಿಗೆ ಆಗಮಿಸಿದರೆ ಹಂತ ಹಂತವಾಗಿ ನಮಾಝ್ ನಿರ್ವಹಿಸಲು ಅವಕಾಶ ಕಲ್ಪಿಸಬಹುದಾಗಿದೆ. ಮಸೀದಿಗಳಲ್ಲಿ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕು, 65 ವರ್ಷ ಮೇಲ್ಪಟ್ಟವರು ಮತ್ತು 10 […]

ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಿದ ಮುಸ್ಲಿಮರು

Friday, July 31st, 2020
eid

ಮಂಗಳೂರು : ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಅಂತರ ಕಾಪಾಡುವುದರೊಂದಿಗೆ ಜುಲೈ 31 ರಂದು ಮಸೀದಿಗಳಲ್ಲಿ ಸಾಮೂಹಿಕವಾಗಿ ಮುಸ್ಲಿಮರು ನಮಾಝ್ ನಿರ್ವಹಿಸಿದರು. ಈದ್ಗಾದಲ್ಲಿ ಸಾಮೂಹಿಕ ನಮಾಝ್ ಮತ್ತು ಈದ್ ಖುತ್ಬಾಕ್ಕೆ ನಿರ್ಬಂಧ ವಿಧಿಸಲಾದ ಕಾರಣ ಇದೇ ಮೊದಲ ಬಾರಿಗೆ ಮಂಗಳೂರು ಸಹಿತ ಜಿಲ್ಲೆಯ ಯಾವುದೇ ಈದ್ಗಾಗಳಲ್ಲಿ ನಮಾಝ್, ಈದ್ ಖುತ್ಬಾ ನಡೆಯಲಿಲ್ಲ. ಬಹುತೇಕ ಮಸೀದಿಗಳಲ್ಲಿ ತಲಾ 50 ಮಂದಿಯಂತೆ ಸರದಿ ಸಾಲಿನಲ್ಲಿ ನಮಾಝ್ ನಿರ್ವಹಿಸಿದರು. 60 ವರ್ಷಕ್ಕಿಂತ ಮೇಲ್ಪಟ್ಟ ಮತ್ತು […]

ಬಕ್ರೀದ್​​ ಹಬ್ಬದಂದು ಗೋಹತ್ಯೆ ನಿಲ್ಲಿಸುವಂತೆ ಮುತಾಲಿಕ್​ ಮನವಿ

Friday, July 24th, 2020
pramodMuthalik

ಧಾರವಾಡ : ಬಕ್ರೀದ್ ಹಬ್ಬದಂದು ಗೋಹತ್ಯೆ ನಿಲ್ಲಿಸುವಂತೆ ಆಗ್ರಹಿಸಿ ಶ್ರೀರಾಮಸೇನಾ ವತಿಯಿಂದ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಅಕ್ರಮವಾಗಿ ಗೋವುಗಳ ಮಾರಾಟ, ಸಾಗಾಣಿಕೆ ಹಾಗೂ ಅವುಗಳ ಕಳ್ಳತನ ನಡೆಯುತ್ತಿದೆ. ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ಯಥೇಚ್ಛವಾಗಿ ನಡೆಯುತ್ತಿದೆ. ಗೋವುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕಿದೆ, ಸರ್ಕಾರವೂ ಸಹ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳಿಗೆ ಮನವಿ […]

ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Monday, August 12th, 2019
Bakrid

ಮಂಗಳೂರು : ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆ ಮಾಡಿ ಹಬ್ಬದ ಸಂದೇಶ ನೀಡಿದರು. ಮಂಗಳೂರು ನಗರ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬದಲ್ಲಿ ಮುಸ್ಲಿಮರು  ಬಕ್ರೀದ್ ಹಬ್ಬದ  ನಮಾಜ್ ನಲ್ಲಿ ಪಾಲ್ಗೊಂಡು ಪರಸ್ಪರ ಶುಭಾಶಯ ವಿನಿಯೋಗ ಮಾಡಿಕೊಂಡರು. ಪ್ರಮುಖ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ನಮಾಝ್, ಧರ್ಮ ಗುರುಗಳಿಂದ ಈದ್ ಸಂದೇಶ ಸಹಿತ ಪ್ರವಚನ, ನಡೆಯಿತು. ಪ್ರವಾದಿ ಇಬ್ರಾಹೀಮರು ಇಡೀ ಜೀವನವನ್ನೇ ಮುಡುಪಾಗಿರಿಸಿ, ಹಲವಾರು ಸವಾಲು ಸ್ವಪರೀಕ್ಷೆಗಳನ್ನು ಎದುರಿಸಿ, ಹಲವಾರು ತ್ಯಾಗಗಳನ್ನು […]

ಕುಂದಾಪುರ: ಸಮುದ್ರಕ್ಕಿಳಿದ ಮೂವರು ನೀರುಪಾಲು

Saturday, October 27th, 2012
Kodi beach

ಕುಂದಾಪುರ: ಕುಂದಾಪುರದ ಕೋಡಿ ಸಮುದ್ರ ಕಿನಾರೆಯಲ್ಲಿ ಶುಕ್ರವಾರ ಸಂಜೆ ನೀರಿಗಿಳಿದ ಮೂವರು ಸಮುದ್ರಪಾಲಾಗಿದ್ದಾರೆ. ಬಕ್ರೀದ್ ಹಬ್ಬಕ್ಕೆಂದು ಕೋಡಿಯ ಮೂಲಮನೆಗೆ ಬಂದಿದ್ದ ಮಂಗಳೂರಿನಲ್ಲಿ ವಿಶ್ವಾಸ್ ಬಾವಾ ಬಿಲ್ಡರ್ಸ್ ಪಾಲುದಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಸಯ್ಯದ್ ಮಹಮ್ಮದ್, ಮತ್ತು ಅವರ ಸಹೋದರ ಬೆಂಗಳೂರಿನಲ್ಲಿ ರಿಯಲ್ಎಸ್ಟೀಟ್ ಉದ್ಯಮಿಯಾಗಿರುವ ಅಬ್ದುಲ್ ಖಾದರ್ ಹಾಗೂ ಇವರ ಹತ್ತಿರದ ಸಂಬಂಧಿ ಬಾಲಕ ರಿಯಾನ್ ಮೃತಪಟ್ಟವರಾಗಿದ್ದಾರೆ. ಬಕ್ರೀದ್ ಹಬ್ಬದ ಸಂಭ್ರಮದಲ್ಲಿದ್ದ ಇವರು ಸಂಜೆಯ ವೇಳೆ ಸಮುದ್ರ ಕಿನಾರೆಗೆ ತೆರಳಿದ್ದರು, ನೀರಿನಲ್ಲಿ ಆಟವಾಡುತ್ತಿದ್ದ ಬಾಲಕ ರಿಯಾನ್ ಸಮುದ್ರಪಾಲಾಗುತ್ತಿರುವುದನ್ನು ಗಮನಿಸಿದ ಇವರು […]