ಬಜರಂಗದಳ ಕಾರ್ಯಕರ್ತರ ಗಡಿಪಾರು, ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ

Monday, November 20th, 2023
puttur-protest

ಪುತ್ತೂರು : ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ಜಾರಿ ಮಾಡಿರುವುದನ್ನುವಿರೋಧಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಬಿಜೆಪಿ ಹಾಗೂ ಪರಿವಾರ ಸಂಘಟನೆಗಳ ಸಹಕಾರದೊಂದಿಗೆ ಬೃಹತ್ ಪ್ರತಿಭಟನೆಯನ್ನು ಸೋಮವಾರ ಮಿನಿ ವಿಧಾನಸೌಧದ ಎದುರಿನ ಜೈ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಮಾತನಾಡಿ, ಬಹುಸಂಖ್ಯಾತ ಹಿಂದೂಗಳು ಇರುವ ಭಾರತದಲ್ಲಿ ಸ್ವಾಭಿಮಾನದ ಬದುಕಿಗಾಗಿ ನಿರಂತರ ಜಾಗೃತಿ, ಸಂಘಟಿತ ಕೆಲಸಗಳನ್ನು ಮಾಡುತ್ತಿರುವುದು ನಮ್ಮ ಸಂಘಟನೆ. ದೇಶದ ಪರವಾಗಿ ಕೆಲಸ […]

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳ ಬಂಧನ, ಸೆಕ್ಸನ್ 144 ಮುಂದುವರಿಕೆ

Tuesday, February 22nd, 2022
Shimogga-Murder

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ನಿನ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು, ಉಳಿದ ಐವರು  ಆರೋಪಿಗಳನ್ನು ಇಂದು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದುವರೆಗೆ 13 ಎಫ್ಐಆರ್ ದಾಖಲಾಗಿವೆ ಎಂದು ಹೇಳಿದರು. ಅಂತೆಯೇ […]

ಬಜರಂಗದಳ ಕಾರ್ಯಕರ್ತರು ಸುಲಿಗೆ ಮಾಡುವವರು ಎಂದಿದ್ದಕ್ಕೆ ಐವನ್ ಮನೆಗೆ ಮುತ್ತಿಗೆ ಯತ್ನ

Wednesday, October 20th, 2021
Bajrangdal

ಮಂಗಳೂರು : ಬಜರಂಗದಳದವರು ಕೇಸರಿ ಬಟ್ಟೆ ಹಾಕಿ ಅನೈತಿಕ ವರ್ತನೆ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮನೆಗೆ ಬಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಕೇಸರಿ ಬಟ್ಟೆ ಹಾಕಿದ ಬಜರಂಗದಳ ಕಾರ್ಯಕರ್ತರು ಸುಲಿಗೆ ಮಾಡುವವರು, ಸಮಾಜದ್ರೋಹಿಗಳು ಎಂದು ಇತ್ತೀಚೆಗೆ ಐವನ್ ಹೇಳಿಕೆ ನೀಡಿದ್ದರೆನ್ನಲಾಗಿದೆ. ಆ ಹೇಳಿಕೆಯನ್ನು ಖಂಡಿಸಿ ಬಜರಂಗದಳದಿಂದ ಐವನ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಾಂಡೇಶ್ವರ ಪೊಲೀಸರು ತಡೆದರು. ಐವನ್ ಡಿಸೋಜ ಹಾವೇರಿ ಜಿಲ್ಲೆಯ ಹಾನಗಲ್ […]