ಸ್ಫೋಟಕ ತಯಾರಿಸುತ್ತಿದ್ದ ಮೂವರು ಕಾರ್ಮಿಕರು ದುರ್ಮರಣ, ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Monday, January 29th, 2024
venuru-blast

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ತೊಡದ ಮದ್ಯೆ ಸ್ಫೋಟಕ ತಯಾರಿಸುತ್ತಿದ್ದಾಗ ಉಂಟಾದ ಅವಘಡದಲ್ಲಿ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿ, ಆರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬಶೀರ್ ಎಂಬವರ ಜಾಗದಲ್ಲಿ ಘಟನೆ ನಡೆದಿದ್ದು, ಕೇರಳ ನಿವಾಸಿಗಳಾದ ಸ್ವಾಮಿ (55) ಹಾಗೂ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್ (25) ಮೃತಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ದಿನೇಶ್, ಕಿರಣ್, ಕುಮಾರ್, ಕಲ್ಲೇಶ್, […]

ಬಂಟ್ವಾಳ : ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್ ಗಳಿಗೆ ವಂಚನೆ; ಆರೋಪಿ ಬಂಧನ

Friday, December 27th, 2019
hassan-bashir

ಬಂಟ್ವಾಳ : ವಾಹನಗಳ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್ ಗಳಿಗೆ ವಂಚಿಸಿದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪಂಪುವೆಲ್ ನ ಅಪಾರ್ಟ್‌ಮೆಂಟ್ ವೊಂದರ ನಿವಾಸಿ ಬಶೀರ್ ಯಾನ್ ಹಸನ್ ಬಶೀರ್ ಬಂಧಿತ ಆರೋಪಿ. ಈತ ಫರಂಗಿಪೇಟೆಯ ಸಹಕಾರಿ ಬ್ಯಾಂಕ್ ಶಾಖೆಯೊಂದರಿಂದ ವಾಹನದ ನಕಲಿ ದಾಖಲೆಯ ಮೂಲಕ 7 ಲಕ್ಷ ರೂ. ಸಾಲ ಪಡೆದಿದ್ದರು‌. ಆರೋಪಿಯು ಕ್ಯಾರ್ವಾನ್ ಆಟೋಮೊಬೈಲ್ಸ್ ಸಂಸ್ಥೆಯ ಹೆಸರಿನಲ್ಲಿ ನಕಲಿ ವ್ಯವಹಾರ ನಡೆಸಿ, ಮಂಗಳೂರು, ಬಂಟ್ವಾಳ, ವಿಟ್ಲ, […]

ಡಿ.12ರಂದು ಮಂಗಳೂರು ಮೀನು ಸಾಗಾಟ ಲಾರಿಗಳ ಮುಷ್ಕರ

Wednesday, December 4th, 2019
meenu

ಮಂಗಳೂರು : ಮೀನು ಸಾಗಾಟದ ಸಂದರ್ಭ ಲಾರಿಗಳ ತ್ಯಾಜ್ಯ ನೀರನ್ನು ನಿರ್ದಿಷ್ಟ ಪ್ರದೇಶಗಳಲ್ಲಿ ಚೆಲ್ಲಲು ಅವಕಾಶವಿಲ್ಲದೆ ವಿನಾಕಾರಣ ಲಾರಿ ಚಾಲಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಸ್ಥಳಾವಕಾಶಕ್ಕೆ ಒತ್ತಾಯಿಸಿ ಡಿ.12ರಂದು 24 ಗಂಟೆಯ ಲಾರಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಮೋಟಾರ್ ಟ್ರಾನ್ಸ್‌ಪೋರ್ಟ್ ಮತ್ತು ಇಂಜಿನಿಯರಿಂಗ್ ವರ್ಕರ್ಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಲಾರಿ ಚಾಲಕರು ದುಡಿಯುವ ವರ್ಗದವರಾಗಿದ್ದಾರೆ. ಹಿಂದೆ ಮೀನು ಸಾಗಾಟ ಮಾಡುವ ಲಾರಿಗಳಲ್ಲಿ […]

ಬಶೀರ್ ಕೊಲೆ ಪ್ರಕರಣ… ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ

Friday, April 6th, 2018
basheer

ಮಂಗಳೂರು: ಕಾಟಿಪಳ್ಳದಲ್ಲಿ ಹಿಂದೂ ಸಂಘಟನೆಯ ದೀಪಕ್ ರಾವ್ ಹತ್ಯೆ ನಡೆದ ಜ. 3 ರಂದು ರಾತ್ರಿ ನಗರದ ಕೊಟ್ಟಾರ ಚೌಕಿಯಲ್ಲಿ ಹೋಟೆಲ್ ಮಾಲೀಕ ಆಕಾಶಭವನದ ಬಶೀರ್ ಕೊಲೆ ಪ್ರಕರಣ ಕುರಿತಂತೆ 11 ಮಂದಿ ವಿರುದ್ಧ ಪೊಲೀಸರು ಮಂಗಳೂರಿನ 3 ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಎಸಿಪಿ ವೆಲೆಂಟೈನ್ ಡಿಸೋಜ ಅವರು ಆರಂಭದಲ್ಲಿ ಈ ಪ್ರಕರಣದ ತನಿಖಾಧಿಖಾರಿಯಾಗಿದ್ದು ನಂತರ ಎಸಿಪಿ ರಾಜೇಂದ್ರ ಕುಮಾರ್ ಅವರು ತನಿಖೆಯನ್ನು ಪೂರ್ತಿಗೊಳಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ದೀಪಕ್ ರಾವ್ […]

‘ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ’

Friday, March 23rd, 2018
u-t-kader

ಮಂಗಳೂರು: ‘ರಾಜ್ಯದಲ್ಲಿ ಶೇಖರಣೆಯಾದ ಸಂಪತ್ತನ್ನು ಕೆಲವರು ಮಾತ್ರ ಬಳಸಿಕೊಳ್ಳುವುದು ಬೇಡ, ಅದು ಎಲ್ಲ ವರ್ಗದ ಎಲ್ಲರಿಗೂ ಸಿಗಬೇಕು ಎಂಬ ದೆಸೆಯಿಂದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಮೊದಲ ಬಾರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ’ ಎಂದು ಸಚಿವ ಯು.ಟಿ. ಖಾದರ್ ಹೇಳಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿರುವ ಹೋಬಳಿ ಮಟ್ಟದಲ್ಲಿ ರಾಜ್ಯದ ಪ್ರಥಮ, ಉಳ್ಳಾಲ ಪುರಸಭೆ ವ್ಯಾಪ್ತಿಯ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ‘ಇಂದಿರಾ ಕ್ಯಾಂಟಿನ್’ಅನ್ನು ಗುರುವಾರ ಉದ್ಘಾಟಿಸಿ […]

ಯಾತ್ರೆಗೆ ಅಭ್ಯಂತರವಿಲ್ಲ: ಶಾಂತಿ ಕಾಪಾಡಲಿ

Monday, March 5th, 2018
kader-rally

ಮಂಗಳೂರು: ಬಿಜೆಪಿ ಹಮ್ಮಿಕೊಂಡಿರುವ ಜನ ಸುರಕ್ಷಾ ಯಾತ್ರೆಗೆ ಯಾವುದೇ ಅಭ್ಯಂತರವಿಲ್ಲ. ಆದರೆ, ಯಾತ್ರೆಯ ಹೆಸರಿನಲ್ಲಿ ಸಾಮರಸ್ಯ ಕೆಡಿಸುವುದು ಸರಿಯಲ್ಲ ಎಂದು ಆಹಾರ ಸಚಿವ ಯು.ಟಿ. ಖಾದರ್ ಹೇಳಿದರು. ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆಯೇ ಯಾತ್ರೆಗಳು, ಸಮಾರಂಭಗಳು ಹೆಚ್ಚಾಗುತ್ತವೆ. ಇದೊಂದು ರೀತಿಯಲ್ಲಿ ದಸರಾ ಇದ್ದಂತೆ ಎಂದರು. ಬಿಜೆಪಿಯವರಿಗೆ ಹರೀಶ್‌ ಪೂಜಾರಿ, ವಿನಾಯಕ ಬಾಳಿಗ, ಬಶೀರ್‌ ನೆನಪಾಗುವುದಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಇವರು ಜೀವ ಕಳೆದುಕೊಂಡಿಲ್ಲವೇ? ಅದನ್ನು ಬಿಟ್ಟು ಕೇವಲ ಹಿಂದೂಗಳ ಹತ್ಯೆಯಾಗಿದೆ ಎಂದು […]

ಬಶೀರ್ ಕೊಲೆ ಸಮರ್ಥಿಸಿಕೊಂಡ ವಿಎಚ್‌ಪಿ ಮುಖಂಡ

Monday, January 29th, 2018
abdul-bashir

ಮಂಗಳೂರು: ಮಂಗಳೂರಿನ ಕೊಟ್ಟಾರ ಚೌಕಿ ಎಂಬಲ್ಲಿ ನಡೆದಿದ್ದ ಬಷೀರ್ ಹತ್ಯೆ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೇಣವ ಸಮರ್ಥಿಸಿ ವಿವಾದಿದ ಹೇಳಿಕೆ ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ನಡೆದ ಹಡೆದವ್ವನ ಶಾಪ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜಗದೀಶ್ ಶೇಣವ ಈ ಹೇಳಿಕೆ ನೀಡಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಅಮಾಯಕ ದೀಪಕ್ ರಾವ್ ಗೆ ಪ್ರತೀಕಾರವಾಗಿ ಅಬ್ದುಲ್ ಬಷೀರ್ ಹತ್ಯೆಯಾಗಿದೆ. ಬಷೀರ್ ಹತ್ಯೆಯಾಗಿದ್ದಕ್ಕೆ […]

ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾದ ಮಂಗಳೂರು ಪೊಲೀಸ್‌ ಆಯುಕ್ತ

Thursday, January 25th, 2018
madel-police

ಮಂಗಳೂರು: ದಕ್ಷ ಸೇವೆ ಸಲ್ಲಿಸಿದವರಿಗೆ ನೀಡುವ ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಆಯುಕ್ತರಾದ ಟಿ.ಆರ್.ಸುರೇಶ್ ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವ ದಿನದಂದು ಅವರು ಪದಕ ಸ್ವೀಕರಿಸಲಿದ್ದಾರೆ. ಕರ್ನಾಟಕದಿಂದ ಹಲವು ಸಾಧಕ ಪೊಲೀಸರಿಗೆ ಈ ಸನ್ಮಾನ ಲಭಿಸಿದ್ದು, ದಕ್ಷಿಣ ಕನ್ನಡದಿಂದ ಕೆಎಸ್‌ಆರ್‌ಪಿಯ ಹೆಡ್‌‌ ಕಾನ್ಸ್‌ಟೇಬಲ್‌ ಕಮಲಾಕ್ಷ ಅವರಿಗೂ ರಾಷ್ಟ್ರಪತಿ ಪದಕ ದೊರೆಯಲಿದೆ. ಇತ್ತೀಚೆಗೆ ನಡೆದ ದೀಪಕ್ ರಾವ್ ಹಾಗೂ ಬಶೀರ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನ, ಶೂಟೌಟ್ ಪ್ರಕರಣದ ಆರೋಪಿಗಳ ಬಂಧನ, ಗಾಂಜಾ ಮಾಫಿಯಾದ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆ ಸೇರಿದಂತೆ ಕರಾವಳಿಯಲ್ಲಿ ಶಾಂತಿ […]

ದೀಪಕ್‌ ರಾವ್‌ ಮನೆಗೆ ದೇವೇಗೌಡ ಭೇಟಿ… ಆರ್ಥಿಕ ನೆರವಿನ ಭರವಸೆ

Monday, January 22nd, 2018
devegowda

ಮಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಕರಾವಳಿಯಲ್ಲಿ ದುಷ್ಕರ್ಮಿಗಳಿಂದ ಬಲಿಯಾದ ದೀಪಕ್‌ ರಾವ್‌ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕಾಟಿಪಳ್ಳದ ನಿವಾಸದಲ್ಲಿ ದೀಪಕ್ ಕುಟುಂಬವನ್ನು ಭೇಟಿ ಮಾಡಿದ ಅವರು, ಸಂತ್ರಸ್ತ ಕುಟುಂಬದೊಂದಿಗೆ ದುಃಖ ಹಂಚಿಕೊಂಡು, ಆರ್ಥಿಕ ನೆರವಿನ ಭರವಸೆಯನ್ನೂ ನೀಡಿದರು. ಕುಟುಂಬದ ಸದ್ಯದ ಪರಿಸ್ಥಿತಿಯ ಬಗ್ಗೆ ಹಿರಿಯ ನಾಯಕ ಹಾಗೂ ರಾಜ್ಯ ಉಪಾಧ್ಯಕ್ಷ ಬಿ.ಎಂ.ಫಾರೂಕ್ ಅವರು ದೇವೇಗೌಡರಿಗೆ ವಿವರಿಸಿದರು. ದೀಪಕ್ ತಾಯಿ ಪ್ರೇಮಾ ಅವರ ಪರಿಸ್ಥಿತಿಯನ್ನು ಕಂಡು ಮರುಗಿದ ಮಾಜಿ ಪ್ರಧಾನಿ, ತಮ್ಮ ವೈಯಕ್ತಿಕ […]

ಡಿವೈಎಫ್ ಐ ಉಳ್ಳಾಲ: ದೀಪಕ್, ಬಶೀರ್ ಅವರ ಗೌರವಾರ್ಥ ಶ್ರದ್ಧಾಂಜಲಿ ಸಭೆ

Friday, January 12th, 2018
deepak

ಮಂಗಳೂರು: ಕೋಮುವಾದ, ಮತೀಯವಾದದ ಹೆಸರಿನಲ್ಲಿ ದಾಳಿ, ದಬ್ಬಾಳಿಕೆಗಳು ನಿರಂತರವಾಗಿ ನಡೆದು ಜಿಲ್ಲೆಯ ಹೆಸರನ್ನು ಹಾಳು ಮಾಡುತ್ತಿದೆ. ಧರ್ಮಗಳ ನಡುವಿನ ಸಂಬಂಧಗಳಿಗೆ ಹುಳಿ ಹಿಂಡಿ, ಅಧಿಕಾರದ ಖುರ್ಚಿಗೆ ಅಮಾಯಕರ ಕೊಲೆ ನಡೆಸಿ ಸಮಾಜದ ಅಶಾಂತಿಗೆ ಹಲವರು ಕಾರಣ ರಾಗುತ್ತಿದ್ದಾರೆ. ಇದರಿಂದಾಗಿ ಜನರ ನಡುವೆ ಅಪನಂಬಿಕೆ ಸೃಷ್ಟಿ ಮಾಡುವ ತುಳುನಾಡಿನ ಸೌಹಾರ್ದತೆಗೆ ಏಟನ್ನು ನೀಡುವ ಕೆಲಸ ಆಗಿದೆ. ಮತೀಯವಾ ದದ ಹೆಸರಿನಲ್ಲಿ ನಡೆಯುವ ಕೊಲೆಗಳಿಂದಾಗಿ ಭಾವೈಕ್ಯತೆಯನ್ನು ನಾಶ ಮಾಡುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ […]