ಬಿಜೆಪಿ ಪರ ಜನತೆಯ ವಿಶ್ವಾಸ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಸಂತಸ

Thursday, July 8th, 2021
Nalin Kumar

ಮಂಗಳೂರು : ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಸಾಬೀತು ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದ ಮೇಲೆ ವಿಶ್ವಾಸ ಇರಿಸಿದ ಜನತೆ ಬಿಜೆಪಿಗೆ ಅಭೂತಪೂರ್ವ ಗೆಲುವು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಪಾರಮ್ಯ ಮೆರೆದಿತ್ತು. ಈ […]

10 ಸಾವಿರ ರೂಪಾಯಿಗೆ ಕೊರೋನಾ ನಕಲಿ ಇಂಜೆಕ್ಷನ್

Friday, April 16th, 2021
corona Injection

ಬೀದರ್ : ಮಾರುಕಟ್ಟೆಯಲ್ಲಿ ಕೊರೋನಾ ನಕಲಿ ಇಂಜೆಕ್ಷನ್ ಬಂದಿದ್ದು, 10 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ ಎಂಬುದಾಗಿಯೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣ ಕ್ರಮ ಕುರಿತಂತೆ ಚರ್ಚಿಸಲು ಸಿಎಂ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಅಲ್ಲಿ ಏನ್ ಚರ್ಚೆ ಮಾಡ್ತಾರೋ ನೋಡೋಣ. ತಮ್ಮ ತಪ್ಪು ಮರೆ ಮಾಚಲು ಅಷ್ಟೇ ಸರ್ವ ಪಕ್ಷಗಳ ಸಭೆ ಎಂದರು. ರಾಜ್ಯದಲ್ಲಿ ಜನರು ಕೊರೋನಾ ಸೋಂಕಿನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಔಷಧಿ […]

ಕಾಂಗ್ರೆಸ್ ಪಕ್ಷ ‘ಐಸಿಯು’ನಲ್ಲಿದೆ -:ಸದಾನಂದ ಗೌಡ

Tuesday, April 13th, 2021
sadananda Gowda

ಬಸವಕಲ್ಯಾಣ : ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಜಯಸಾದಿಸಲಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಇಂದು ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರಕ್ಕೆ ನಡೆದಿರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶರಣು ಸಲಗಾರ ಅವರ ಪರವಾಗಿ ರಾಜ್ಯ ಬಿಜೆಪಿ ಪ್ರಭಾರಿ ಅರುಣ ಸಿಂಗ್ ಹಾಗೂ ಪಕ್ಷದ ಹಿರಿಯ ಮುಖಂಡರು ಹಾಗೂ ಸಚಿವರೊಂದಿಗೆ ನಗರದಲ್ಲಿ ಮತಯಾಚನೆ […]

ರೌಡಿ ಶೀಟರ್​​ನನ್ನು ಕಲ್ಲುಗಳಿಂದ ಹೊಡೆದು ಕೊಲೆಗೈದ ಗ್ರಾಮಸ್ಥರು

Tuesday, October 15th, 2019
beedar

ಬೀದರ್ : ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ಗ್ರಾಮಸ್ಥರೇ ಕಲ್ಲುಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಸಿರಗೂರ ಗ್ರಾಮದಲ್ಲಿ ನಡೆದಿದೆ. ಬಟಗೇರಾವಾಡಿ ಗ್ರಾಮದ ಬಸವರಾಜ ಹಣಮಂತ ಚಂಡಕಾಳೆ (38) ಕೊಲೆಯಾದ ರೌಡಿ ಶೀಟರ್. ಕೊಲೆಯಾದ ರೌಡಿ ಶೀಟರ್ ಬಸವರಾಜ ಬಿಎಸ್‍ಎಫ್‍ನಲ್ಲಿ ಸುಮಾರು 10 ವರ್ಷಗಳಿಗೂ ಅಧಿಕ ಕಾಲ ಸೇವೆಸಲ್ಲಿಸಿದ್ದ. ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಿರಗೂರ ಗ್ರಾಮದಲ್ಲಿ ಭಾನುವಾರ ರಾತ್ರಿ […]