ಸೈಟ್ ವಾಪಸ್ ಮಾಡುವ ಮೂಲಕ ಸಿಎಂ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

Tuesday, October 1st, 2024
Basavaraja-Bommai

ಹುಬ್ಬಳ್ಳಿ : ಮುಡಾ ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಆಗಲೇ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದು ಹೋಗುತ್ತಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. […]

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಮುಖ್ಯಮಂತ್ರಿಗಳ ಭೇಟಿ

Thursday, August 5th, 2021
Bjp office

ಬೆಂಗಳೂರು :  ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಬಿಜೆಪಿ ಕಚೇರಿಯಲ್ಲಿನ ಭಾರತ ಮಾತೆಯ ಭಾವಚಿತ್ರ ಹಾಗೂ ಶ್ರೀ ಜಗನ್ನಾಥರಾವ್ ಜೋಶಿ ಅವರ ಪುತ್ಥಳಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಸಿಹಿ ತಿನ್ನಿಸಿ ಶುಭ ಕೋರಿದರು.

ಜೂನ್ 26 ಅಂತರಾಷ್ಟ್ರೀಯ ಡ್ರಗ್ ವಿರೋಧಿ ದಿನ, 50 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನಾಶ

Friday, June 25th, 2021
Bommai

ಬೆಂಗಳೂರು : ಕಳೆದ ವರ್ಷ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿರುವ 50 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಪ್ರಕಾರದ ಡ್ರಗ್ಸ್ ನ್ನು ಶನಿವಾರ ನಾಶ ಪಡಿಸಲಾಗುವುದು ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಅಂತರಾಷ್ಟ್ರೀಯ ಡ್ರಗ್ ವಿರೋಧಿ ಮತ್ತು ಅಕ್ರಮ ಕಳ್ಳಸಾಗಣೆ ದಿನದ ಅಂಗವಾಗಿ ನ್ಯಾಯಾಲಯದ ಆದೇಶದ ಮೇರೆಗೆ ಡ್ರಗ್ಸ್ ನಾಶ ಮಾಡಲಾಗುವುದು ಎಂದು ಅವರು ತಿಳಿಸಿದರು. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಗಾಂಜಾ-ಅಫೀಮು, ಬ್ರೌನ್ […]

ಲಾಕ್ಡೌನ್ ಕಟ್ಟು ನಿಟ್ಟಾಗಿ ಜಾರಿಗೆ ಪೊಲೀಸರಿಗೆ ಸೂಚನೆ

Saturday, May 22nd, 2021
Bommai

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯದಲ್ಲಿ ವಿಸ್ತರಣೆ ಯಾಗಿರುವ ಲಾಕ್‍ಡೌನ್‍ನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೋಲಿಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿಗಳು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ 3- 4 ದಿನಗಳ ಕಾಲ ನಿರಂತರವಾಗಿ ಲಾಕ್ಡೌನ್ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ […]

ರಿಯಾಲಿಟಿ ಚೆಕ್ ಮಾಡಿ ಖಾಸಗಿ ಆಸ್ಪತ್ರೆಗಳಿಂದ ಹಾಸಿಗೆ ವಶಪಡಿಸಿಕೊಳ್ಳಿ

Wednesday, May 12th, 2021
Bommai

ಬೆಂಗಳೂರು :   ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳು ಸರ್ಕಾರಕ್ಕೆ ನಿಗದಿತ ಹಾಸಿಗೆಗಳನ್ನ ನೀಡದೆ ವಂಚಿಸುತ್ತಿರುವ ಕುರಿತಂತೆ ಕಂದಾಯ ಸಚಿವರಾದ ಆರ್ ಅಶೋಕ್, ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವರ್ಚುವಲ್ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಇನ್ನೂ ಕೂಡಾ ಸರ್ಕಾರಕ್ಕೆ ನಿಗದಿತ ಬೆಡ್ ಗಳನ್ನ ನೀಡದೆ ತಪ್ಪು ಮಾಹಿತಿ ನೀಡುತ್ತಿರುವ ಕುರಿತಂತೆ ಪ್ರಮುಖವಾಗಿ ಚರ್ಚಿಸಲಾಯಿತು. ಈ ನಿಟ್ಟಿನಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರು […]