ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸಿದ ನೆಹರು- ಬಸವರಾಜ ಬೊಮ್ಮಾಯಿ

Sunday, August 8th, 2021
Bommai

ಬೆಂಗಳೂರು :  ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ತಿಳಿಸಿದರು. ಇಂದು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿ ಮಾತನಾಡುತ್ತಿದ್ದರು. ರಾಷ್ಟ್ರದ ಆಡಳಿತದ ಚುಕ್ಕಾಣಿಯನ್ನು ಬ್ರಿಟಿಷರಿಂದ ಭಾರತಕ್ಕೆ ತೆಗೆದುಕೊಂಡು ಮುಂದಿನ ಆಡಳಿತವನ್ನು ನಡೆಸುವಲ್ಲಿ ಮಹತ್ವದ ಪಾತ್ರ […]

ಮುಖ್ಯಮಂತ್ರಿ ಭೇಟಿ ಮಾಡಿದ ಬ್ರಿಟಿಷ್ ಹೈ ಕಮಿಷನರ್- ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಕುರಿತು ಚರ್ಚೆ

Thursday, August 5th, 2021
British

ಬೆಂಗಳೂರು :  ಭಾರತದ ಬ್ರಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಲಪಡಿಸುವ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಹೂಡಿಕೆದಾರ ಸ್ನೇಹಿ ವಾತಾವರಣದ ಸದುಪಯೋಗ ಪಡೆಯುವಂತೆ ಮುಖ್ಯಮಂತ್ರಿಗಳು ಬ್ರಿಟಿಷ್ ಹೈ ಕಮಿಷನರ್ ಅವರಿಗೆ ಸಲಹೆ ಮಾಡಿದರು. ಕರ್ನಾಟಕ ಅತ್ಯಂತ ಪ್ರಗತಿ ಪರ ರಾಜ್ಯವಾಗಿದ್ದು, ಹೂಡಿಕೆಗೆ ಅತ್ಯುತ್ತಮ ಪೂರಕ ವಾತಾವರಣ ಹೊಂದಿದೆ. ಕೈಗಾರಿಕೋದ್ಯಮಗಳ ಸ್ಥಾಪನೆಗೆ ತ್ವರಿತ ಅನುಮೋದನೆ ನೀಡುವ ವ್ಯವಸ್ಥೆ ಜಾರಿಯಲ್ಲಿದೆ.ತಂತ್ರಜ್ಞಾನ, ಶಿಕ್ಷಣದಲ್ಲಿ […]

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

Saturday, July 31st, 2021
Bommai-Meets-Nirmala-Seetharaman

ನವದೆಹಲಿ :  ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ […]

ಮುಖ್ಯಮಂತ್ರಿ ದೆಹಲಿ ಪ್ರವಾಸ: ಪ್ರಧಾನಿ, ಕೇಂದ್ರ ಸಚಿವರ ಭೇಟಿ

Friday, July 30th, 2021
Bommai Sha

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಹಾಗೂ ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿಯವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ […]

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಪ್ರಧಾನಿಗೆ ಮನವಿ

Friday, July 30th, 2021
Bommai-Modi-Meet

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿಯವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ […]

ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಭೇಟಿ

Thursday, July 29th, 2021
Bommai

ಅಂಕೋಲಾ : ಮುಖ್ಯಮಂತ್ರಿ ಬಸವರಾಜ.ಎಸ್. ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಿದರು. ಜುಲೈ 23 ರಂದು ಜಿಲ್ಲೆಯಲ್ಲಿ ಧಾರಕಾರ ಮಳೆಯಾದ ಪರಿಣಾಮ ಪ್ರವಾಹ ಪರಿಸ್ಥಿತಿ ಎದುರಾಗಿತ್ತು ಕಾಳಿ, ಗಂಗಾವಳಿ, ಅಘನಾಶಿನಿ ಸೇರಿದಂತೆ ನದಿಗಳು ಉಕ್ಕಿ ಹರಿದ ಪರಿಣಾಮ ಹಲವಾರು ಮನೆಗಳು .ಹಾನಿಗೊಳಗಾಗಿರುವುದಲ್ಲದೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ತಾಲ್ಲೂಕು ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು, ನೆರೆ ಪರಿಹಾರ ವೀಕ್ಷಣೆಗೆ ತೆರಳಿ ಮೊದಲಿಗೆ ಗುಡ್ಡ ಕುಸಿತದಿಂದ ಹಾನಿಗೊಳಗಾದ ಕಳಚೆ ಗ್ರಾಮವನ್ನು ಪರಿಶೀಲಿಸಿದರು. […]

ವಿಶ್ವಾಸಾರ್ಹ, ದಕ್ಷ, ಪಾರದರ್ಶಕ ಆಡಳಿತ: ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಲಹೆ

Wednesday, July 28th, 2021
Bommai

ಬೆಂಗಳೂರು : ವಿಶ್ವಾಸಾರ್ಹ, ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಆಡಳಿತ ಒಂದು ನಿರಂತರ ಪ್ರಕ್ರಿಯೆ. ಅದು ಎಂತಹ ಪರಿಸ್ಥಿತಿಯಲ್ಲೂ ಅನಿರ್ಬಂಧಿತವಾಗಿ ಕಾರ್ಯನಿರ್ವಹಿಸಬೇಕು. ರಾಜ್ಯದ ಜನತೆಗೆ ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತ ಕೊಡುವ ದಿಟ್ಟ ತೀರ್ಮಾನ ಕೈಗೊಂಡಿದ್ದೇನೆ. ಇದನ್ನು ಅನುಷ್ಠಾನ ಮಾಡುವುದು […]