ಸಂಸದರ ಸಭೆ : ರಾಜ್ಯ ಸರ್ಕಾರದ ನಡೆಗೆ ಬಸವರಾಜ ಬೊಮ್ಮಾಯಿ ಅಭಿನಂದನೆ

Friday, June 28th, 2024
Bommai

ಹೊಸದಿಲ್ಲಿ : ಕರ್ನಾಟಕದ ಸಂಸದರ ಸಭೆಯನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಂದೊಳ್ಳೆ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇದಕ್ಕಾಗಿ, ರಾಜ್ಯ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಒಳ್ಳೆಯ ಪರಂಪರೆ, ರಾಜ್ಯ ಸರ್ಕಾರದ ಸಚಿವರು ಮತ್ತು ಸಂಸದರು ಮುಕ್ತವಾಗಿ ಚರ್ಚೆಯನ್ನು ಮಾಡಿದ್ದೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ಯೋಜನೆ ಅಥವಾ ಕಾರ್ಯಕ್ರಮಗಳು ಯಶಸ್ವಿ ಆಗಬೇಕಾದರೆ, […]

ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಬಸವಣ್ಣ ಪ್ರೇರಣೆ : ಬಸವರಾಜ ಬೊಮ್ಮಾಯಿ

Thursday, November 16th, 2023
Bommai

ಬೆಂಗಳೂರು: ಮನುಷ್ಯನ ಎಲ್ಲ ಪ್ರಶ್ನೆಗಳಿಗೂ ವಚನದಲ್ಲಿ ಉತ್ತರ ಇದೆ. ಕಳಬೇಡ ಕೊಲಬೇಡ ಎನ್ನುವುದು ನಮ್ಮ ಧ್ಯೇಯವಾಗಬೇಕು. ಅದನ್ನು ಪಾಲಿಸಿದರೆ ಮನುಷ್ಯ ಸಂತೋಷ ಮತ್ತು ಸಮಾಧಾನದಿಂದ ಸರಳ ಜೀವನ ನಡೆಸಬಹುದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಹಾಗೂ ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

Monday, October 2nd, 2023
ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾವೆರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, . ಡಿ ಕೆ ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ. ಯಾಕೆ ಇಷ್ಟೊಂದು ಹಗುರವಾಗಿ ಮಾತನಾಡುತ್ತಿದ್ದಾರೆ […]

ರೈತರ ಬೆಳೆಗೆ ಬೆಲೆ ಮೊದಲೇ ನಿಗದಿಯಾಗುವ ಕಾನೂನು ಬರಬೇಕು: ಬಸವರಾಜ ಬೊಮ್ಮಾಯಿ

Sunday, September 24th, 2023
ರೈತರ ಬೆಳೆಗೆ ಬೆಲೆ ಮೊದಲೇ ನಿಗದಿಯಾಗುವ ಕಾನೂನು ಬರಬೇಕು: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ರೈತರ ಬೆಳೆಗೆ ಬೆಲೆಯು ಮೊದಲೇ ನಿಗದಿಯಾಗುವ ಕಾನೂನು ಜಾರಿಯಾಗಬೇಕು. ರೈತನನ್ನು ಗಟ್ಟಿ ಮಾಡಿದರೆ ಕೃಷಿ ಗಟ್ಟಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಸಿರಿಗೆರೆಯಲ್ಲಿ ಭಾನುವಾರ ಜರುಗಿದ ಲಿಂ.ಶಿವಕುಮಾರ ಸ್ವಾಮೀಜಿಯವರ 31ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳಿಗೆ ಮುಂದಿನ ಚುನಾವಣೆ ಮೇಲೆ ಕಣ್ಣಿದ್ದರೆ, ಪ್ರಸ್ತುತ ನಮ್ಮ ಪೂಜ್ಯರಿಗೆ ಮುಂದಿನ ಜನಾಂಗದ ಮೇಲೆ ಕಣ್ಣಿರುತ್ತದೆ. ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳು ರೈತರ ನೀರಾವರಿ ಯೋಜನೆಗಳಿಗೆ ಒತ್ತು ನೀಡಿ ಯಶಸ್ವಿಯಾಗಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ […]

ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಸಿಎಂ ಬಸವರಾಜ ಬೊಮ್ಮಾಯಿ

Tuesday, March 15th, 2022
CM Hijab

ಬೆಂಗಳೂರು : ಉಚ್ಛ ನ್ಯಾಯಾಲಯವು ವಸ್ತ್ರಸಂಹಿತೆಯ ಕುರಿತ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಿದೆ. ಸಮವಸ್ತ್ರವನ್ನು ಎತ್ತಿ ಹಿಡಿದಿದೆ ಮತ್ತು ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎನ್ನುವುದನ್ನು ಹೇಳಿದೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಈ ವಿಷಯ ತಿಳಿಸಿದರು. “ಇದು ನಮ್ಮ ಮಕ್ಕಳ ಭವಿಷ್ಯ ಹಾಗೂ ಶಿಕ್ಷಣದ ಪ್ರಶ್ನೆ. ಮಕ್ಕಳಿಗೆ ವಿದ್ಯೆಗಿಂತ ಮುಖ್ಯವಾದುದ್ದು ಬೇರೊಂದಿಲ್ಲ. ಹೀಗಾಗಿ ಉಚ್ಚ ನ್ಯಾಯಾಲಯದ ತ್ರಿ […]

ಬಡತನದ ನಿರ್ಮೂಲನೆಗೆ ನರೇಗಾ ಅಸ್ತ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Monday, March 14th, 2022
narega festival

ಬೆಂಗಳೂರು : ಬಡತನದ ನಿರ್ಮೂಲನೆಯಲ್ಲಿ ನರೇಗಾ ಎನ್ನುವ ಅಸ್ತ್ರ ಬಹಳ ದೊಡ್ಡ ಪಾತ್ರವ್ನನು ನಿರ್ವಹಿಸಲಿದೆ. ನರೇಗಾದಡಿ ಹಲವಾರು ಯೋಜನೆಗಳನ್ನು ಸೇರ್ಪಡೆಗೊಳಿಸಬೇಕು. ಒಂದು ವರ್ಷದ ದುಡಿಮೆಯನ್ನು ಸಂಭ್ರಮಿಸಲು ಆಚರಿಸುವ ನರೇಗಾ ಹಬ್ಬ ರಾಜ್ಯದ ಹಬ್ಬ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ನರೇಗಾ ಹಬ್ಬ 2022 ನ್ನು ಉದ್ಘಾಟಿಸಿ ಮಾತನಾಡಿದರು. ಅಧಿಕಾರ ವಿಕೇಂದ್ರೀಕರಣ ಜೇನುತುಪ್ಪದಂತಿರಬೇಕು: ಮಹಾತ್ಮಾ ಗಾಂಧಿಯವರಿಂದ ಗ್ರಾಮ ಸ್ವರಾಜ್ಯದ ಪರಿಕಲ್ಪನೆ […]

ಸವ೯ಸ್ಪಶಿ೯ ಸವ೯ವ್ಯಾಪಿ ಅಭಿವೃದ್ಧಿಪರ ಬಜೆಟ್ – ಕೆ ಪ್ರತಾಪಸಿಂಹ ನಾಯಕ್

Friday, March 4th, 2022
prathapa-simha

ಮಂಗಳೂರು : ಕನಾ೯ಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಯವರು ಸಮಗ್ರ ಕನಾ೯ಟಕ ಮತ್ತು ಸಮಾಜದ ಎಲ್ಲಾ ವಗ೯ಗಳನ್ನು ಗಮನದಲ್ಲಿ ಇಟ್ಟುಕೊಂಡು ಒಳ್ಳೆಯ ಪ್ರಗತಿಪರ ಬಜೆಟ್ ಮಂಡಿಸಿದ್ದಾರೆ. ತಮ್ಮ ಚೊಚ್ಚಲ ಬಜೆಟ್ನಲ್ಲಿ ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೆ ಒತ್ತು ನೀಡಿದ್ದಾರೆ. ಕೋರೊನಾ ಸಂಕಷ್ಟದಿಂದ ಹೊರಬರಲು ಪ್ರಯತ್ನಿಸುತ್ತಿರುವ ಆಥಿ೯ಕತೆಯ ಇತಿಮಿತಿಯಲ್ಲಿ ಇದು ಅತ್ಯುತ್ತಮ ಬಜೆಟ್. ಕರಾವಳಿಯ ಅಭಿವೃದ್ಧಿಯ ದೃಷ್ಟಿಯಿಂದ ದೀರ್ಘಕಾಲಿಕ ಮತ್ತು ಜನೋಪಯೋಗಿ ಯೋಜನೆ ಒಳಗೊಂಡಿದೆ ಎಂದು ವಿಧಾನ […]

ಚೊಚ್ಚಲ ಆಯವ್ಯಯ ಮಂಡಿಸುವ ಮುನ್ನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮಾಯಿ

Friday, March 4th, 2022
cm-temple

  ಬೆಂಗಳೂರು: ತಮ್ಮ ಚೊಚ್ಚಲ ಆಯವ್ಯಯ ಮಂಡಿಸುವ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದ ಸಮೀಪದ ಶ್ರೀಕಂಠೇಶ್ವರ ದೇವಾಲಯ ದಲ್ಲಿ ಪೂಜೆ ಸಲ್ಲಿಸಿದರು. ದೇವಾಲಯದ ಹೊರಗೆ ಮುಖ್ಯಮಂತ್ರಿ ಯವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದ್ದ ಪೌರ ಕಾರ್ಮಿಕ ಮಹಿಳೆಯರ ಬೇಡಿಕೆಯನ್ನು ಮನ್ನಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡರು. ನಂತರ ಅವರ ಕಷ್ಟ ಸುಖ ಆಲಿಸಿದರು. ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಜೊತೆಗಿದ್ದರು.

ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿದ ಸರಕಾರ

Friday, January 21st, 2022
weekend-curfew

ಬೆಂಗಳೂರು  : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ನಡೆಸಿದ ಪರಿಶೀಲನಾ ಸಭೆಯಯಲ್ಲಿ  ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿ, ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ ಮುಂದುವರಿಸುವುದಾಗಿ ತೀರ್ಮಾನಿಸಲಾಗಿದೆ. ಮುಖ್ಯಾಂಶಗಳು: 1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ 2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ […]

ರಾಜ್ಯದ ಎಲ್ಲಾ ಶಾಲೆ ಕಾಲೇಜುಗಳಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ 

Tuesday, January 18th, 2022
CM Bommai

ಬೆಂಗಳೂರು: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆ. ಹೀಗಾಗಿ ಸುಭಾಷ ಚಂದ್ರ ಬೋಸ್ ಅವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಬೆಂಗಳೂರಿನಲ್ಲಿ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ( ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ […]