ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ
Monday, September 6th, 2021ಬೆಂಗಳೂರು : ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ವಿಜಯನಗರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ದುರಸ್ತಿ, ನವೀಕರಣ ಮತ್ತು ಕಛೇರಿ ಮೂಲಸೌಕರ್ಯಕ್ಕೆ 53 ಕೋಟಿ ರೂ. ಅನುದಾನ ಒದಗಿಸಲು ಮಂಜೂರಾತಿ ನೀಡಲಾಗಿದೆ. ಎರಡು ಹಂತಗಳಲ್ಲಿ ಹುದ್ದೆಗಳ ಸೃಜನೆ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ ಸಾರ್ವಜನಿಕರು […]