Blog Archive

ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, July 29th, 2021
Bommai

ಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು. ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ ,ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ […]

ವೆಚ್ಚ ಕಡಿತ, ಕಡತ ವಿಲೇವಾರಿ ಅಭಿಯಾನಕ್ಕೆ ಮುಖ್ಯಮಂತ್ರಿಗಳ ಸೂಚನೆ

Thursday, July 29th, 2021
Basavaraja-Bommai

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದರು. ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ಅವರ ಮಾರ್ಗದರ್ಶನದಲ್ಲಿ, ಶಾಸಕಾಂಗ ಪಕ್ಷ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೆಲ್ಲರೂ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಪೂರ್ಣಪ್ರಮಾಣದ ಸಚಿವ ಸಂಪುಟವನ್ನು ಶೀಘ್ರದಲ್ಲಿಯೇ ರಚಿಸಲಾಗುವುದು ಎಂದ ಅವರು ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗಬಾರದು ಎಂಬ ದೃಷ್ಟಿಯಿಂದ ಇಂದು ಸಚಿವ ಸಂಪುಟ ಸಭೆ ಹಾಗೂ […]

ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ ಬಸವರಾಜ ಬೊಮ್ಮಾಯಿ ಕರ್ನಾಟಕ ಮುಖ್ಯಮತ್ರಿಯಾಗಿ ನೇಮಕ

Tuesday, July 27th, 2021
Basavaraja-Bommai

ಬೆಂಗಳೂರು : ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಸಭೆಯ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದನ್ನು ಬಿಜೆಪಿ ನಾಯಕರು ಘೋಷಿಸಿದ್ದಾರೆ. 2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಎಸ್ಆರ್ ಬೊಮ್ಮಾಯಿ-ಚೆನ್ನಮ್ಮ ಅವರ ಪುತ್ರ. 1960 ರ ಜ.28 ರಂದು ಜನಿಸಿದ […]

ವಕೀಲರಿಗೆ ಆರೋಗ್ಯ ವಿಮೆ, ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಭರವಸೆ

Tuesday, July 20th, 2021
Bommai

ಬೆಂಗಳೂರು: ಕಾನೂನು ಸೇವೆಯಲ್ಲಿ ತೊಡಗಿರುವ ವಕೀಲರಿಗೆ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಸರ್ಕಾರದ ವತಿಯಿಂದ ಆರೋಗ್ಯ ವಿಮೆ ಸೌಲಭ್ಯ ಒದಗಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬೆಂಗಳೂರು ವಕೀಲರ ಸಂಘ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ನ್ಯಾಯವಾದಿಗಳಿಗೆ ಏರ್ಪಡಿಸಿದ್ದ ನುಡಿನಮನ ಮತ್ತು ಸಾಂತ್ವನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಲವಾರು ವರ್ಷಗಳ ಹಿಂದೆ ಪ್ಲೇಗ್ ಬಂದು ಜನ ಸತ್ತಿರುವುದನ್ನು ನಾವು ಕೇಳಿದ್ದೇವೆ. ಆದರೆ ನಮ್ಮ ಜೀವಮಾನದ ಅವಧಿಯಲ್ಲಿ […]

ಅಪರಾಧ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಸಿ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಲಹೆ

Tuesday, July 13th, 2021
Vidhana Soudha

ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಎಸಗಲಾಗುತ್ತಿರುವ ಆರ್ಥಿಕ ಅಪರಾಧ ಹಾಗೂ ಸೈಬರ್ ಕ್ರೈಮ್ ನಿಯಂತ್ರಣ ಮಾಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು. ಮಂಗಳವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಗ್ನಿಶಾಮಕ, ಗೃಹ, ಪೌರ ರಕ್ಷಕ ದಳ ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿಗೆ ಅಪರಾಧಗಳ ಸ್ವರೂಪ ಬದಲಾಗುತ್ತಿದೆ. ತಂತ್ರಜ್ಞಾನ ಬದಲಾದಂತೆ ಅದನ್ನು ದುರುಪಯೋಗ […]

ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ, ಪೊಲೀಸ್ ಇಲಾಖೆಗೆ ತಿರುವು ನೀಡುವ ದಿನ : ಗೃಹ ಸಚಿವ ಬಸವರಾಜ ಬೊಮ್ಮಾಯಿ

Tuesday, July 13th, 2021
Bommai

ಬೆಂಗಳೂರು: ಕರ್ನಾಟಕ ಪೊಲೀಸ್ ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ ಆರಂಭವಾಗಲಿದೆ. ಇದುವರೆಗೆ ಅಪರಾಧ ತಡೆ ಮತ್ತು ನಿಯಂತ್ರಣದಲ್ಲಿ ಮಾಡಿದ್ದೇವೆ. ಇನ್ನು ಮುಂದೆ ಅಪರಾಧ ಶೋಧ ಕಾರ್ಯದಲ್ಲಿ ಯಶಸ್ವಿಯಾಗುತ್ತೇವೆ. ಇವು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರ ಆತ್ಮವಿಶ್ವಾಸದ ನುಡಿಗಳು. ಮಂಗಳವಾರ ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಪೊಲೀಸ್ ಇಲಾಖೆಯ ಸಬಲೀಕರಣಕ್ಕೆ ಹೊಸ ಯೋಜನೆಗಳ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಈ ವಿಶ್ವಾಸದ ನುಡಿಗಳನ್ನು ಆಡಿದರು. ಪೊಲೀಸ್ […]

ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕೋವಿಡ್ ತಪಾಸಣೆ : ಬಸವರಾಜ ಬೊಮ್ಮಾಯಿ

Tuesday, July 13th, 2021
Home Minister

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದ ಗಡಿಭಾಗಗಳಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಅನುಸರಿಸುವಂತೆ ಗಡಿಭಾಗದ ಎಲ್ಲ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬೆಂಗಳೂರಿನಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಗಡಿಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು ಈ ಸೂಚನೆ ನೀಡಿದರು. ಮಹಾರಾಷ್ಟ್ರ, ಕೇರಳ ರಾಜ್ಯಗಳ ಮೂಲಕ ಕರ್ನಾಟಕ ಪ್ರವೇಶ ಮಾಡುವ […]

ತಮಿಳುನಾಡು ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ರಾಜಕೀಯ ಸಾಹಸ ಪ್ರದರ್ಶನ ಮಾಡುತ್ತಿದೆ : ಕಾನೂನು ಸಚಿವ ಬಸವರಾಜ ಬೊಮ್ಮಾಯಿ

Sunday, July 4th, 2021
Basavaraja Bommai

ಬೆಂಗಳೂರು : ತಮಿಳುನಾಡು ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರ ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ರಾಜಕೀಯ ಸಾಹಸ ಪ್ರದರ್ಶನ ಮಾಡುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಿಳುನಾಡು ನೀರಿನ ವಿಷಯವಾಗಿ ಯಾವಾಗಲೂ ಕರ್ನಾಟಕದೊಂದಿಗೆ ತಕರಾರು ಮಾಡುತ್ತಲೇ ಬಂದಿದೆ ಎಂದರು. ಅದು ಕಾವೇರಿ ನದಿನೀರು ಹಂಚಿಕೆ ಇರಬಹುದು, ಕಾವೇರಿ ಕಣಿವೆಯಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಗಳೇ ಆಗಿರಬಹುದು. ಅವುಗಳ ಬಗ್ಗೆ ತಮಿಳುನಾಡು […]

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವು ನೀಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ

Friday, July 2nd, 2021
Basavaraja Bommai

ಬೆಂಗಳೂರು : ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆಂದು ಬೊಮ್ಮಾಯಿ ತಿಳಿಸಿದರು. ರಾಜ್ಯದಲ್ಲಿನ ಆರ್ಥಿಕ ಪರಿಸ್ಥಿತಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ನಿರ್ಮಲಾ […]

ಜಿ ಎಸ್ ಟಿ ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ

Friday, July 2nd, 2021
GST Pay

ಹುಬ್ಬಳ್ಳಿ: ಸರಕು ಮತ್ತು ಸೇವಾ ತೆರಿಗೆ ( GST )ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿಎಸ್ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ ಆಯೋಜಿಸಿದ್ದ ನಾಲ್ಕನೇ ವರ್ಷದ ಜಿಎಸ್ಟಿ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ವರ್ಚುವಲ್ ಮೂಲಕ ಅವರು ಮಾತನಾಡಿದರು. ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಬಗ್ಗೆ […]