Blog Archive

ಮಾದಕ ವಸ್ತುಗಳನ್ನು ನಿಯಂತ್ರಿಸುವಲ್ಲಿ ಬೆಂಗಳೂರು ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ : ಗೃಹ ಸಚಿವ

Saturday, June 26th, 2021
bommai

ಬೆಂಗಳೂರು : ಮಾದಕ ವಸ್ತುಗಳ ಸಾಗಾಟ, ಮಾರಾಟ ನಿಯಂತ್ರಿಸುವಲ್ಲಿ ಬೆಂಗಳೂರು ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಾದಕ ವಿರೋಧಿ ದಿನಾಚರಣೆ ಪ್ರಯುಕ್ತ ಮಾತನಾಡಿದ ಅವರು, ಪೊಲೀಸರು ವಶಪಡಿಸಿಕೊಂಡಿದ್ದ ಶೇ.60ರಷ್ಟು ಮಾದಕ ವಸ್ತುವನ್ನು ನಾಶಪಡಿಸಿದ್ದೇವೆ. ಇನ್ನು, 40ರಷ್ಟು ಎಫ್‌ಎಸ್ಎಸ್ ಪರೀಕ್ಷಾ ಹಂತದಲ್ಲಿದೆ ಎಂದರು. ಅಂತಾರಾಷ್ಟ್ರೀಯ ಮಾದಕ ವಿರೋಧಿ ದಿನಾಚರಣೆ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಈ ವರ್ಷ ಜಪ್ತಿಯಾದ ಮಾದಕ ವಸ್ತುಗಳ ವಿಲೇವಾರಿ ನಡೆಯಿತು. ಈ ಕಾರ್ಯಕ್ರಮದಲ್ಲಿ […]

ಮಹಿಳೆಯರ ಸುರಕ್ಷತೆಗಾಗಿ 751 ದ್ವಿಚಕ್ರ ವಾಹನಗಳ ಹಸ್ತಾಂತರ

Wednesday, November 11th, 2020
bicycle

ಬೆಂಗಳೂರು : ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಹಾಗೂ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ನಿರ್ಭಯ ಯೋಜನೆಯಡಿ 751 ದ್ವಿಚಕ್ರ  ವಾಹನಗಳನ್ನು ರಾಜ್ಯ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಿರ್ಭಯ ಯೋಜನೆಯಡಿ ರಾಜ್ಯ ಪೊಲೀಸ್ ಇಲಾಖೆಗೆ 751 ದ್ವಿ-ಚಕ್ರ ವಾಹನಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು ಪೊಲೀಸ್ ಇಲಾಖೆಗೆ ಇದರಿಂದ ಮತ್ತಷ್ಟು ವೇಗವನ್ನು ನೀಡಿದಂತಾಗುತ್ತದೆ. ಬೆಂಗಳೂರಿನಂತ ಬೃಹತ್ […]

ಸಚಿವ ಈಶ್ವರಪ್ಪನವರಿಗೆ ಬೆದರಿಕೆ ಕರೆ, ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ : ಬಸವರಾಜ ಬೊಮ್ಮಾಯಿ

Saturday, January 4th, 2020
Basavaraj-Bommai

ಹಾವೇರಿ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯೋರ್ವ ಕರೆ ಮಾಡಿ ಬೆದರಿಕೆ ಹಾಕಿದ್ದ. ಇನ್ನು 48 ತಾಸುಗಳಲ್ಲಿ ಹತ್ಯೆ ಮಾಡುವುದಾಗಿ ಹೇಳಿದ್ದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಅಪರಿಚಿತ ನಂಬರ್ನಿಂದ ಕರೆ ಬಂದಿದ್ದು ತಮಿಳುನಾಡಿನಿಂದ ಎಂಬುದು ಗೊತ್ತಾಗಿದೆ. ಆ ನಂಬರ್ನ್ನು ಪರಿಶೀಲನೆ ಮಾಡಲಾಗಿದೆ ಎಂದಿದ್ದಾರೆ. ಬೆದರಿಕೆ ಕರೆ ಬಗ್ಗೆ ಎಲ್ಲ ರೀತಿಯ ತನಿಖೆ, ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅವರಿಗೆ […]

ನೀರಾವರಿ ಖಾತೆಯೇ ಬೇಕೆಂದು ಕೇಳಿಲ್ಲ : ದೆಹಲಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Wednesday, December 18th, 2019
basavaraj

ನವದೆಹಲಿ : ನೀರಾವರಿ ಖಾತೆ ಪಡೆಯಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸ್ಪರ್ಧೆ ಇದೆ ಎನ್ನುವ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು, ನಾನು ನೀರಾವರಿ ಖಾತೆಯೇ ಬೇಕೆಂದು ಕೇಳಿಲ್ಲ ಎಂದಿದ್ದಾರೆ. ಗೃಹ ಖಾತೆ ಬೇಡ, ಬೇರೆ ಯಾವುದಾದರೂ ಖಾತೆ ನೀಡಿ ಎಂದು ಬಿಎಸ್ವೈ ಎದುರು ಬೊಮ್ಮಾಯಿ ಬೇಡಿಕೆ ಇಟ್ಟಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ನಂತರ ಬೊಮ್ಮಾಯಿ ನೀರಾವರಿ ಖಾತೆ ಕೇಳಿದ್ದಾರೆ ಎನ್ನಲಾಗಿತ್ತು. ಈಗ […]

ಕರಾವಳಿ ಕಾವಲು ಪೊಲೀಸ್ ಬಲವರ್ಧನೆಗೆ ಸರ್ಕಾರದ ಕ್ರಮ : ಬಸವರಾಜ ಬೊಮ್ಮಾಯಿ ಹೇಳಿಕೆ

Friday, October 25th, 2019
basavaraj

ಬಂಟ್ವಾಳ : ಕರಾವಳಿ ಕಾವಲು ಪೊಲೀಸ್ ಪಡೆ ಬಲವರ್ಧನೆಗೊಳಿಸಿ, ತೀರ ಪ್ರದೇಶ ಸುರಕ್ಷತೆಗೆ ಗರಿಷ್ಠ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದಕ್ಕಾಗಿ ಭದ್ರತಾ ಪಡೆಗೆ ಅಗತ್ಯ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಗೃಹಸಚಿವರು ಗುರುವಾರ ಬೆಳಗ್ಗೆ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಸಿದರು. ಪಶ್ಚಿಮ ವಲಯದ ಐಜಿಪಿ ಅರುಣ್ ಚಕ್ರವರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]

ಅ. 24ರಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವ

Wednesday, October 23rd, 2019
veerendra-hegde

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‍ಸೆಟ್ ಮತ್ತಿತರ ಹಲವಾರು ಯೋಜನೆಗಳ ಮೂಲಕ ಜನೋಪಯೋಗಿ ಕಾರ್ಯಗಳನ್ನು ಕಳೆದ ಐದು ದಶಕಗಳಿಂದ ಮಾಡುತ್ತಾ ಬಂದಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವವು ಕ್ಷೇತ್ರದಲ್ಲಿ ಅ. 24ರಂದು ನಡೆಯಲಿರುವುದು. ಈ ಸಂದರ್ಭ ಮಹೋತ್ಸವ ಸಭಾಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಹಿಸಲಿದ್ದಾರೆ. ಶಾಸಕ ಹರೀಶ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ […]

ಎರಡು ವರ್ಷದೊಳಗೆ 16000 ಪೊಲೀಸ್ ಪೇದೆಗಳ ಭರ್ತಿ : ಗೃಹ ಸಚಿವ ಬಸವರಾಜ ಬೊಮ್ಮಾಯಿ

Monday, September 23rd, 2019
police-pede

ಕಲಬುರಗಿ : ಮುಂದಿನ ಎರಡು ವರ್ಷದೊಳಗೆ 16000 ಪೊಲೀಸ್ ಪೇದೆಗಳ ಹಾಗೂ 630 ಪಿಎಸ್ಐಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಈಗಾಗಲೇ 6000 ಪೇದೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಕುರಿತು ಹೈಕೋರ್ಟ್ ಗೂ ಮಾಹಿತಿ ಸಲ್ಲಿಸಲಾಗಿದೆಯಲ್ಲದೇ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದು ವಿವರಣೆ ನೀಡಿದರು. ಪೊಲೀಸ್ ಇಲಾಖೆ ಸುಧಾರಣೆಗೆ ದೃಢ ಹೆಜ್ಜೆ ಇಡಬೇಕಾಗಿದೆ. ಹೀಗಾಗಿ ಬರುವ ಬಜೆಟ್‌ದಲ್ಲಿ ಹೆಚ್ಚಿನ ಅನುದಾನ ಇಡಲಾಗುವುದು. ಪ್ರಮುಖವಾಗಿ ಸೈಬರ್ ಕ್ರೈಂ […]