ಸಮಾಜಘಾತುಕ ಶಕ್ತಿಗಳ ಬಲ ಹೆಚ್ಚಾಗಲು ಹಿಂದಿನ ಸರ್ಕಾರ ಕಾರಣ : ಡಿಸಿಎಂ ಅಶ್ವಥ್ ನಾರಾಯಣ್ ಆರೋಪ
Thursday, January 23rd, 2020ಮೈಸೂರು : ರಾಜ್ಯದಲ್ಲಿ ಬಾಂಬ್ ಪತ್ತೆಯಂತಹ ಪ್ರಕರಣಗಳಿಗೆ ಹಿಂದಿನ ಸರ್ಕಾರಗಳೇ ಕಾರಣ. ಸಮಾಜಘಾತುಕ ಶಕ್ತಿಗೆ ಕಡಿವಾಣ ಹಾಕೋದು ಬಿಟ್ಟು ಪ್ರೋತ್ಸಾಹ ಕೊಟ್ಟ ಪರಿಣಾಮ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಡಿಸಿಎಂ, ಹಿಂದಿನ ಸರ್ಕಾರ ಸಮಾಜಘಾತುಕ ಕೆಲಸ ಮಾಡುತ್ತಿದ್ದವರ ಮೇಲಿನ ಕೇಸ್ಗಳನ್ನ ವಾಪಸ್ ತೆಗೆದುಕೊಂಡಿದ್ದಾರೆ. ಅದಕ್ಕೆ ಅವರೆಲ್ಲಾ ಕಾನೂನು ಮೀರಿ ದೊಡ್ಡ ಶಕ್ತಿಯಾಗಿ ನಿಂತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಇಂದು ಈ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದರು. ನಮ್ಮ ಸರ್ಕಾರ ಎಲ್ಲವನ್ನು ನಿಯಂತ್ರಣ […]