ಕಬಿನಿ ಭರ್ತಿ: ಸಂತಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Tuesday, November 2nd, 2021
Kabini

ಮೈಸೂರು : ಮೈಸೂರು ಜಿಲ್ಲೆ ಕಬಿನಿ ಜಲಾಶಯ ಭರ್ತಿಯಾಗಿರುವುದು ಸಂತಸ ತಂದಿದೆ. ಇದರಿಂದ ನಾಡಿನ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಮಂಗಳವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಕಬಿನಿಗೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ನವೆಂಬರ್ ತಿಂಗಳಲ್ಲಿ ಬಾಗಿನ ಅರ್ಪಿಸುವುದು ವಿಶೇಷ. ಅಂತಾರಾಜ್ಯ ನೀರಿನ ವಿಚಾರ‌ ಇದೆ. ನೀರು ತುಂಬಿರುವುದರಿಂದ ತಮಿಳುನಾಡಿಗೂ ನೀರು ಕೊಡಬಹುದು, ನಾಲೆಗಳಿಗೂ ನೀರು ಹರಿಸಬಹುದು ಎಂದರು. ಕಳೆದ ವರ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ನಾನು […]

ಮಹಿಳಾ ಕಾರ್ಯಕರ್ತರಿಗೆ ಬಾಗಿನ ನೀಡಿ, ಪರಿಸರ ಸ್ನೇಹಿ ಗಣೇಶ ಮೂರ್ತಿ ವಿತರಿಸಿದ : ಕಂದಾಯ ಸಚಿವ ಆರ್ ಅಶೋಕ

Thursday, September 9th, 2021
R Ashoka Ganesha

ಬೆಂಗಳೂರು  : “ಜೀವ, ಜೀವನ ಬಹಳ ಮುಖ್ಯ. ನಾವು ಬದುಕಿದರೆ ಮಾತ್ರ ಮುಂದೆ ಏನಾದರು ಸಾಧನೆ ಮಾಡಬಹುದು” ಎಂದು ಆರ್ ಅಶೋಕ ಹೇಳಿದರು. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಚಿವರು ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸಿದರು. ಪದ್ಮನಾಭನಗರ ಕ್ಷೇತ್ರದ ವಿವಿಧ ಸ್ಥಳಗಳಲ್ಲಿ ಗೌರಿ ಹಬ್ಬದ ಶುಭದಿನದಂದು ಮಹಿಳೆಯರಿಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ನಾವು ಗಣೇಶ ಹಬ್ಬವನ್ನು ಆಯೋಜಿಸಲು ಅನುಮತಿ ನೀಡಿದ್ದೇವೆ. ಗೌರಿ ಮತ್ತು ಗಣೇಶ ಹಬ್ಬವು ಸಹೋದರತ್ವವನ್ನು ಸಂಕೇತಿಸುತ್ತದೆ. […]

ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಚಿವ ಕೆ.ಎಸ್.ಈಶ್ವರಪ್ಪ

Wednesday, June 23rd, 2021
Tunga Dam

ಶಿವಮೊಗ್ಗ: ತುಂಗಾ ನದಿಯು ಶಾಂತ ರೀತಿಯಲ್ಲಿ ಹರಿಯಲು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗಾಜನೂರಿನ ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದಾರೆ. ಈ ಬಾರಿ ಉತ್ತಮ ಮಳೆಯಾದ್ದರಿಂದ ತುಂಗಾ ಜಲಾಶಯ ಕಳೆದ ತಿಂಗಳೇ ಭರ್ತಿಯಾಗಿತ್ತು. ಈ ಜಲಾಶಯ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಆಧಾರವಾಗಿದೆ. ಜಲಾಶಯ ಭರ್ತಿಯಾದ ಹಿನ್ನೆಲೆ ಸಚಿವ ಈಶ್ವರಪ್ಪ ಬಾಗಿನ ಸಮರ್ಪಿಸಿ, ಜಲಾಶಯದ ಬಳಿ ತುಂಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವರಿಗೆ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ […]

ಉಣಕಲ್ಲ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ

Thursday, August 6th, 2020
bagina

ಹುಬ್ಬಳ್ಳಿ  : ಉಣಕಲ್ಲ ಗ್ರಾಮದ ಕೆರೆ ತುಂಬಿ ಕೋಡಿ ಹರಿಯುತ್ತಿರುವುದರಿಂದ ಇಂದು ಉಣಕಲ್ಲ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀ ರಾಜಣ್ಣ ಕೊರವಿ , ಶ್ರೀ ಉಮೇಶಗೌಡ ಕೌಜಗೇರಿ ಗಂಗಾಧರ ದೊಡ್ಡವಾಡ ಗುರುರಾಜ್ ಸೂರ್ಯವಂಶಿ ಅಧ್ಯಕ್ಷರು ಸಹಕಾರಿ ಸಂಘ ಶಿವಾನಂದ ಶಿರಗುಪ್ಪಿ ವಿಠ್ಠಲ ಸಿಂಗ್ ಹಜೇರಿ ಅಡಿವಪ್ಪ ಮೆಣಸಿಕಾಯಿ ವಿರೂಪಾಕ್ಷಿ ಕಳ್ಳಿಮನಿ ರಂಗನಗೌಡ ಚಿಕ್ಕನಗೌಡ್ರ ಶಂಕರ್ ಧಾರವಾಡ ಶಿವಾನಂದ ರೆಡ್ಡಿ ಹಾಗೂ ಗ್ರಾಮದ ಉಪಸ್ಥಿತರಿದ್ದರು. ವರದಿ : ಶಂಭು ಮೆಗಾಮೀಡಿಯಾ […]