ಮಾನಸಿಕ ಮಾಲಿನ್ಯ ದೂರವಾದಾಗ ವಿಶ್ವಶಾಂತಿ, ಲೋಕಕಲ್ಯಾಣ : ಭಟ್ಟಾರಕ ಸ್ವಾಮೀಜಿ
Saturday, March 9th, 2019ಧರ್ಮಸ್ಥಳ : ಬಾಹುಬಲಿ ತನ್ನ ಜೀವನದಲ್ಲಿ ಸಾಧಿಸಿ ತೋರಿಸಿದ ಅಹಿಂಸೆ, ತ್ಯಾಗ, ವೈರಾಗ್ಯ ಮೊದಲಾದ ಮೌಲ್ಯಗಳಿಂದ ಶಾಂತಿ, ಸಾಮರಸ್ಯ ಸಾಧ್ಯವಾಗುತ್ತದೆ. ಮಾನಸಿಕ ಮಾಲಿನ್ಯ, ವಿಕಾರಗಳು ದೂರವಾದಾಗ ವಿಶ್ವಶಾಂತಿಯೊಂದಿಗೆ ಲೋಕ ಕಲ್ಯಾಣವಾಗುತ್ತದೆ ಎಂದು ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಶನಿವಾರ ಮೈಸೂರು ಮತ್ತು ಚಾಮರಾಜನಗರ ಜೈನ ಸಮಾಜದ ವತಿಯಿಂದ ನಡೆದ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಅವರು ಮಾತನಾಡಿದರು. ತ್ಯಾಗದ ಸಂಕೇತವಾಗಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಸಲಾಗುತ್ತದೆ. ದೇವರು, ಗುರುಗಳು, […]