ರಾಜ್ಯದ 16 ಜಿಲ್ಲೆಗಳಲ್ಲಿ ಜೂನ್ 21 ರಿಂದ ಲಾಕ್ ಡೌನ್ ಸಡಿಲಿಕೆ, 13 ಜಿಲ್ಲೆಗಳಲ್ಲಿ ಮದ್ಯಾಹ್ನ 2 ರ ವರೆಗೆ ಸಡಿಲಿಕೆ

Saturday, June 19th, 2021
yedyurappa

ಬೆಂಗಳೂರು : ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇಕಡಾ 5ಕ್ಕಿಂತಲೂ ಕಡಿಮೆ ಇರುವುದರಿಂದ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್, ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ಇಲ್ಲಿಸೋಮವಾರದಿಂದ ಹೋಟೆಲ್ ಆರಂಭಿಸಲು, ಅಂಗಡಿ ಮುಂಗಟ್ಟುಗಳನ್ನು ಸಂಜೆ 5 ಗಂಟೆಯವರೆಗೂ […]

ನಾಳೆ (ಏಪ್ರಿಲ್ 27) ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್

Monday, April 26th, 2021
yedyurappa

ಬೆಂಗಳೂರು: ಕೊರೊನಾ 2 ನೇ ಅಲೆ ವ್ಯಾಪಿಸುತ್ತಿದ್ದಂತೆ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರ ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಮತ್ತಷ್ಟು ಬಿಗಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಏಪ್ರಿಲ್ 27 ರಿಂದ 14 ದಿನ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಇರಲಿದೆ,   15 ದಿನದ ಬಳಿಕವೂ ಪರಿಸ್ಥಿತಿ ಮತ್ತೆ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. […]

ನೈಟ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಭಾನುವಾರ ನಿರ್ಧಾರ, ಏಪ್ರಿಲ್ 20ರ ವರೆಗೆ ಯಥಾಸ್ಥಿತಿ

Friday, April 16th, 2021
yedyurappa

ಬೆಂಗಳೂರು :  ರಾಜ್ಯ ರಾಜಧಾನಿಯಲ್ಲಿ ಆತಂಕಕಾರಿ ಮಟ್ಟದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಪರಿಸ್ಥಿತಿ ಕೈಮೀರಿ ಹೋಗುವ ಸೂಚನೆ ಇದೆ.  ನಗರದಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇನ್ನೂ ಹೆಚ್ಚಿನ ಬಿಗಿಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯಗಳು ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿ ಚರ್ಚಿಸಿದ್ದಾರೆ. ಆದರೆ, ಏಪ್ರಿಲ್ 20, ಮಂಗಳವಾರದವರೆಗೂ ಈಗಿರುವ ಕ್ರಮಗಳನ್ನ ಮುಂದುವರಿಸಲು ಅವರು ನಿರ್ಧರಿಸಿದ್ದಾರೆ. ಜನತಾ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೊದಲಾದ ಕ್ರಮಗಳ ಬಗ್ಗೆ ಭಾನುವಾರ ನೋಡೋಣ. […]

ರಾಸಲೀಲೆ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ

Wednesday, March 3rd, 2021
jarakiholi

ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ. ಸೆಕ್ಸ್ ಸಿಡಿ ಬಯಲಿಗೆ ಬಂದ ಬೆನ್ನಲ್ಲೇ ಅಜ್ಞಾತ ಸ್ಖಳಕ್ಕೆ ಹೋಗಿರುವ ರಮೇಶ್ ಜಾರಕಿಹೊಳಿ ಅವರು, ಇಂದು ಸಾಕಷ್ಟು ಚರ್ಚೆಗಳು ರಾಜಕೀಯ ಪ್ರಹಸನದ ಬಳಿಕ ರಾಜಿನಾಮೆ ನೀಡಿದ್ದರು. ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜಿನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ. ಈ […]

ಹುಣಸೋಡು ಕಲ್ಲು ಕ್ವಾರಿ ದುರಂತದಲ್ಲಿ 8 ಕ್ಕೂ ಹೆಚ್ಚು ಮಂದಿ ಸಾವು

Friday, January 22nd, 2021
quari Exxplosion

ಬೆಂಗಳೂರು : ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ನಿನ್ನೆ ರಾತ್ರಿ ಭಾರೀ ಜಿಲೆಟಿನ್ ಸ್ಫೋಟವಾದ ದುರ್ಘಟನೆ ಸಂಭವಿಸಿದೆ. ಕಲ್ಲು ಕ್ವಾರಿಯೊಂದರ ಬಳಿ ರಾತ್ರಿ 10:30ಕ್ಕೆ ಸಂಭವಿಸಿದೆ ಈ ಅವಘಡದಲ್ಲಿ 8 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಸ್ಫೋಟಗೊಂಡ ಜಿಲೆಟಿನ್ಗಳನ್ನ ಹೊತ್ತು ಸಾಗುತ್ತಿದ್ದ ಲಾರಿ ಸಂಪೂರ್ಣ ನಾಶವಾಗಿದೆ. ಕೆಲವರ ಪ್ರಕಾರ, ಲಾರಿಯಲ್ಲಿದ್ದ 50 ಬಾಕ್ಸ್ಗಳ ಡೈನಮೈಟ್ಗಳು ಒಂದಾದ ಒಂದರಂತೆ ಸ್ಫೋಟಗೊಂಡಿವೆ ಎನ್ನಲಾಗಿದೆ. ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ, ಇನ್ನಷ್ಟು ಜಿಲೆಟಿನ್ […]

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಸಚಿವ ಸಿ.ಟಿ.ರವಿ ರಾಜೀನಾಮೆ

Sunday, October 4th, 2020
ctRavi

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಒಬ್ಬ ವ್ಯಕ್ತಿಗೆ ಒಂದು ಸ್ಥಾನ ಹಿನ್ನೆಲೆಯಲ್ಲಿ ಸಿ.ಟಿ ರವಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಆದರೆ ಸಿ.ಟಿ ರವಿ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇನ್ನು ಮುಂದೆ ಹೆಚ್ಚಿನ ಸಮಯವನ್ನು ನೀಡಬೇಕಾಗಿರುವುದರಿಂದ ಸಚಿವ […]

ಬಿಎಸ್​ ಯಡಿಯೂರಪ್ಪ ಮೂರು ವರ್ಷ ಅಧಿಕಾರ ನಡೆಸಲಿ : ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾರೈಕೆ

Wednesday, February 19th, 2020
devengowda

ಬೆಂಗಳೂರು : ಯಡಿಯೂರಪ್ಪ ಮೂರು ವರ್ಷಗಳು ಅಧಿಕಾರ ನಡೆಸಲಿ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾರೈಸಿದ್ದಾರೆ. ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ರಚನೆಯಾಗಿರುವ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಮೂರು ವರ್ಷಗಳ ಪೂರ್ಣಾವಧಿ ಅಧಿಕಾರ ನಡೆಸಲಿ ಎಂಬುದು ನಮ್ಮ ಹಾರೈಕೆ. ಇದರಿಂದ ನಮಗೆ ಪಕ್ಷ ಕಟ್ಟಲು ಅವಕಾಶ ಸಿಗುತ್ತದೆ ಎಂದು ಹೇಳಿದರು. ಮೈತ್ರಿ ಸರ್ಕಾರ ಪತನದ ಬಳಿಕ ಜಿಟಿಡಿ ಅವರು ಯಡಿಯೂರಪ್ಪ ಮನೆಗೆ ಹೋಗಿದ್ದಾರೆ. ಕ್ಷೇತ್ರದ ಕೆಲಸ ಮಾಡಲು ಉಪಮುಖ್ಯಮಂತ್ರಿಗಳ ನೆರವು ಬೇಕೆಂದಿದ್ದಾರೆ. ಅವರು ಕಾಂಗ್ರೆಸ್ಗೆ ಹೋಗುತ್ತಾರೋ, […]

ಅಜ್ಜರಕಾಡು ಮೈದಾನದಲ್ಲಿ ಶ್ರೀಗಳಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

Sunday, December 29th, 2019
pejawar-seer

ಉಡುಪಿ: ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ ತೀರ್ಥ ಸ್ವಾಮೀಜಿಯ (88ವರ್ಷ) ಪಾರ್ಥಿವ ಶರೀರವನ್ನು ಉಡುಪಿ ಶ್ರೀಕೃಷ್ಣ ಮಠದಿಂದ ತೆರೆದ ವಾಹನದಲ್ಲಿ ಅಜ್ಜರಕಾಡು ಮೈದಾನಕ್ಕೆ ತರಲಾಯಿತು. ಅಜ್ಜರಕಾಡು ಮೈದಾನದಲ್ಲಿ  ಕುಶಾಲತೋಪು ಹಾರಿಸಿ, ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಸಕಲ ಸರ್ಕಾರಿ ಗೌರವವನ್ನು ಅರ್ಪಿಸಲಾಯಿತು. ನಂತರ ಸಾರ್ವಜನಿಕರಿಗೆ ಪೇಜಾವರಶ್ರೀಗಳ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಶ್ರೀಗಳ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತ್ರಿವರ್ಣ ಧ್ವಜ ಹೊದಿಸಿ ಗೌರವ ಅರ್ಪಿಸಿದರು. ಈ ಸಂದರ್ಭದಲ್ಲಿ ಶಾಸಕ ರಘಪತಿ ಭಟ್, […]

‘ಇದು ನಾಚಿಕೆಗೇಡಿನ ರಾಜಕೀಯ’ ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

Friday, September 20th, 2019
Kumaraswami

ಬೆಂಗಳೂರು : ಆಪರೇಷನ್ ಕಮಲ ಕುಖ್ಯಾತಿಯ ಬಿಜೆಪಿ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ ಪಕ್ಷಪಾತಿ ನಿಲುವನ್ನು ಪ್ರತಿಪಾದಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಹೆಚ್.ಡಿ.ಕುಮಾರಸ್ವಾಮಿ, ‘ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ […]

ಚಳಿಗಾಲ ಅಧಿವೇಶ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸುವುದಿಲ್ಲ : ಬಿಎಸ್ ಯಡಿಯೂರಪ್ಪ

Tuesday, September 17th, 2019
BS-yadiyurappa

ಕಲಬುರಗಿ : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಇಲ್ಲಿನ ಪರಿಸ್ಥಿತಿಯಲ್ಲಿ ಅಧಿವೇಶನ ನಡೆಸುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಬೆಂಗಳೂರಿನಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲಾಗುವುದು ಎಂದು ಹೇಳಿದರು. ವಿಧಾನಸಭೆ ಅಧಿವೇಶನ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ. ವಾಡಿಕೆಯಂತೆ ಪ್ರತಿ ಚಳಿಗಾಲದ ಅಧಿವೇಶನವು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಬೇಕಿತ್ತು. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಹಿರಿಯ ಸಚಿವರ […]