Blog Archive

2020 ರೊಳಗೆ ನಮ್ಮ ಮೆಟ್ರೋ ಮಾರ್ಗಗಳ ಕಾಮಗಾರಿ ಪೂರ್ಣ : ಬಿಎಸ್ ಯಡಿಯೂರಪ್ಪ

Saturday, August 31st, 2019
BS-yadiyurappa

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಿ. ಎಂ. ಆರ್. ಸಿ. ಎಲ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕಾಮಗಾರಿ ನಡೆಯುತ್ತಿರುವ ಬಹುತೇಕ ಮಾರ್ಗಗಳು 2020 ರೊಳಗೆ ಸಂಚಾರಕ್ಕೆ ಮುಕ್ತವಾಗಲಿವೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವ ಯಡಿಯೂರಪ್ಪ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ‘ನಮ್ಮ ಮೆಟ್ರೋ’ ಪ್ರಗತಿ ಪರಿಶೀಲನೆ ನಡೆಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ಬ್ರವಿಕುಮಾರ್, ಮುಖ್ಯ ಮಂತ್ರಿಗಳ ಸಲಹೆಗಾರ […]

ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಎಸ್ ಯಡಿಯೂರಪ್ಪ ಆಯ್ಕೆ?

Thursday, May 24th, 2018
yedeyurappa-bjp

ಬೆಂಗಳೂರು: ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಯ್ಕೆಯಾಗುವ ಸಾಧ್ಯತೆಯಿದೆ. ಈಗಾಗಲೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಬಿಎಸ್‌ವೈ ವಿಪಕ್ಷ ನಾಯಕನಾಗಿ ಆಯ್ಕೆಯಾಗಲಿದ್ದಾರೆ. ವಿಪಕ್ಷ ನಾಯಕನ ಜೊತೆಗೆ ರಾಜ್ಯಾಧ್ಯಕ್ಷ ಹುದ್ದೆಯಲ್ಲೂ ಬಿಎಸ್‌ವೈ ಮುಂದುವರಿಯಲಿದ್ದಾರೆ. ಈ ಕುರಿತು ಇಂದು ನಡೆಯುವ ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಅಂತಿಮ ನಿರ್ಧಾರವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸಮ್ಮಿಶ್ರ ಸರಕಾರವನ್ನು ಸಮರ್ಥವಾಗಿ ಎದುರಿಸಲು ಬಿಎಸ್‌ವೈ ಉತ್ತಮ ಆಯ್ಕೆ ಎಂದು ತೀರ್ಮಾನಕ್ಕೆ ಬರಲಾಗಿದೆ. ಈ ಹಿಂದೆ ವಿಧಾನಸಭೆಯ ವಿಪಕ್ಷ […]

ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೋಗಬೇಡಿ; BJP ಹೈಕಮಾಂಡ್

Tuesday, May 22nd, 2018
amit-shah

ಬೆಂಗಳೂರು: ಬುಧವಾರ ಸಂಜೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಶಾಸಕರು ಹೋಗಬಾರದು ಎಂದು ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ. ನಾಳೆ ಸಂಜೆ 4.30ಕ್ಕೆ ಶಕ್ತಿ ಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಸಿದ್ಧಪಡಿಸಿದ ಬೃಹತ್ ವೇದಿಕೆಯಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಏತನ್ಮಧ್ಯೆ ಹೈಕಮಾಂಡ್ ರವಾನಿಸಿರುವ ಸಂದೇಶವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ಶಾಸಕರಿಗೆ ಮುಟ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಎಚ್ ಡಿಕೆ ಪ್ರಮಾಣವಚನ ಸಮಾರಂಭಕ್ಕೆ […]

ವಿಶ್ವಾಸಮತಯಾಚಿಸದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟ ಬಿಎಸ್ ಯಡಿಯೂರಪ್ಪ

Saturday, May 19th, 2018
politics

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸಮತಯಾಚಿಸದೇ ಸದನದಲ್ಲಿ ವಿದಾಯ ಭಾಷಣ ಮಾಡಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ರಾಜಿನಾಮೆ ನೀಡಿ ಹೊರ ನಡೆದಿದ್ದಾರೆ. ಯಡಿಯೂರಪ್ಪನವರಿಗೆ ಮೂರೇ ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂಥ ಮತ್ತು ಬಿಜೆಪಿಗೆ ಬಹುಮತ ಬರದಿರುವಂಥ ಪರಿಸ್ಥಿತಿ ಬರಲು ಕಾರಣಗಳೇನು? ಇದಕ್ಕೆ ಯಡಿಯೂರಪ್ಪನವರೇ ಸ್ವತಃ ಕಾರಣರಾದರೆ. ಸದನದಲ್ಲಿ ಸುದೀರ್ಘ ಭಾಷಣ ಮಾಡಿದ ಯಡಿಯೂರಪ್ಪ, ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ನಮಗೆ ನೀರಾವರಿ ಯೋಜನೆ ಪೂರ್ಣ ಮಾಡಲು ಆಗಲಿಲ್ಲ. ಕುಡಿಯುವ ನೀರು ಕೊಡಲು ಆಗಲಿಲ್ಲ. […]

ಕಾಂಗ್ರೆಸ್ ಮುಕ್ತ ಭಾರತ ಮಾಡುವ ಗುರಿ ನಮ್ಮದು, ನಿಮ್ಮ ಯಾವ ಮಾತಿಗೂ ಉತ್ತರಿಸಬೇಕಿಲ್ಲ: ಬಿಎಸ್ ಯಡಿಯೂರಪ್ಪ

Thursday, May 17th, 2018
bsy-bjp

ಬೆಂಗಳೂರು: ಕಾಂಗ್ರೆಸ್ ಮುಕ್ತ ಭಾರತ ಮಾಡುವ ಗುರಿ ನಮ್ಮದು. ಹೀಗಾಗಿ ನಿಮ್ಮ ಯಾವ ಮಾತಿಗೂ ಉತ್ತರಿಸಬೇಕಿಲ್ಲ. ಎಲ್ಲದಕ್ಕೂ ಮತದಾರರು ಸಮರ್ಪಕ ಉತ್ತರ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಗುರುವಾರ ಸಂಜೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನೇಕ ಹಿರಿಯರ ಆಶೀರ್ವಾದ ನನಗೆ ಸಿಕ್ಕಿದೆ. ಸರ್ಕಾರ ನಿಮ್ಮ ಜೊತೆಗಿದೆ, ನಿಮ್ಮನ್ನು ಕಾಪಾಡುತ್ತದೆ ಎಂದರು. ಈ ಸಂದರ್ಭದಲ್ಲಿ ರಾಜ್ಯದ ಜನತೆಗೆ, ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಬಿಜೆಪಿ ಅಧಿಕಾರಕ್ಕೆ ಬರುತ್ತಾ ಇದೆ, […]

ಆಪರೇಷನ್ ಕಮಲಕ್ಕೆ ಚಾಲನೆ – ನಿರೀಕ್ಷೆಗೂ ಮೀರಿದ ಬಹುಮತ

Thursday, May 17th, 2018
Prathap gowda Anand singh

ಬೆಂಗಳೂರು : ಬಿಜೆಪಿಯ ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ಬಿಜೆಪಿ ನಿರೀಕ್ಷೆಗೂ ಮೀರಿದ ಬಹುಮತ ಪಡೆಯಲಿದೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಹೇಳಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಬಿ ಶ್ರೀರಾಮುಲು ಅವರು, ಪಕ್ಷೇತರ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅಂತೆಯೇ ಇನ್ನೂ ಹತ್ತಾರು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದು ವಿಶ್ವಾಸ ಮತ ಯಾಚನೆ ವೇಳೆ ಬಿಜೆಪಿ ಪಕ್ಷ ನಿರೀಕ್ಷೆಗೂ ಮೀರಿದ ಬಹುಮತ ಪಡೆಯಲಿದೆ ಎಂದು ಶ್ರೀರಾಮುಲು […]

ಸರಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡಿದ ರಾಜ್ಯಪಾಲರು!

Wednesday, May 16th, 2018
parivarthan

ಬೆಂಗಳೂರು: ಮತದಾರ ಮಹಾಪ್ರಭು ನೀಡಿದ ಜನಾದೇಶ ನಮ್ಮ ಬಳಿ ಇದೆ. ನಾವೇ ಸರ್ಕಾರ ರಚಿಸಲು ಅರ್ಹರು ಎಂದು ಹೇಳುತ್ತಿರುವ ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಿ, ವಜುಭಾಯಿ ವಾಲರನ್ನು ಭೇಟಿ ಮಾಡಿದ್ದಾರೆ. 104 ಶಾಸಕರ ಬೆಂಬಲವಿರುವ ಎರಡು ಪತ್ರಗಳನ್ನು ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಯಡಿಯೂರಪ್ಪ ಅವರು ಸರ್ಕಾರ ರಚನೆಗೆ ಮೊದಲು ಅವಕಾಶ ನೀಡಬೇಕು. ಗುರುವಾರ(ಮೇ 17) ದಂದು ಪ್ರಮಾಣ ವಚನ ಸ್ವೀಕರಿಸಿ, ಒಂದು ವಾರದೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಕೋರಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲ ಮುಂದಿರುವ ನಾಲ್ಕು ಆಯ್ಕೆಗಳು […]

ರಾಜ್ಯ ಬಜೆಟ್ : ಗ್ರಾಮೀಣ ಅಭಿವೃದ್ಧಿಯ ಜೊತೆಗೆ ನಗರ ಅಭಿವೃದ್ಧಿಗೆ ವಿಶೇಷ ಆದ್ಯತೆ

Thursday, February 24th, 2011
ರಾಜ್ಯ ಬಜೆಟ್

ಬೆಂಗಳೂರು : ರಾಜ್ಯ ಸರಕಾರದ ಆಡಳಿತಾವದಿಯ ಎರಡೂವರೆ ವರ್ಷದ ಅವದಿಯಲ್ಲಿ ಸತತವಾಗಿ ಆರನೇ ಬಾರಿಗೆ  ಬಜೆಟ್ ಮಂಡಿಸಿದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅನ್ನದಾತನ ಹೊಲದಲ್ಲಿ ಚಿನ್ನದ ಹೊಳೆಯನ್ನೇ ಹರಿಸಿದ್ದಾರೆ. ದಕ್ಷಿಣ ಭಾರತದ ಏಕೈಕ ಬಿಜೆಪಿ ಸರ್ಕಾರ ಎಂದಿಗೂ ಅನ್ನದಾತರ ಪರ ಎಂದ ಸಿಎಂ, ರೈತರ ನಾಡಗೀತೆ ‘ನೇಗಿಲ ಹಿಡಿದು.. ಉಳುವ ಯೋಗಿಯ..’ ಸಾಲುಗಳನ್ನು ಹೇಳಿದರು. ನಂತರ ಕೋಟಿ ವಿದ್ಯೆಗಳಿಗಿಂತ ಮೇಟಿ ವಿದ್ಯೆಯೆ ಮೇಲು ಎನ್ನುತ್ತಾ ಆಯವ್ಯಯ ಪತ್ರವನ್ನು ಸದನದಲ್ಲಿ ಮಂಡಿಸಿದರು. ಕೃಷಿ ಬಜೆಟ್ ಮಂಡಿಸಿದ ಬಳಿಕ  […]