“ಬಿಜೆಪಿಗರು ಕೋಟ, ಬೊಮ್ಮಾಯಿ, ಸುಧಾಕರ್ ಮನೆಗೆ ಪಾದಯಾತ್ರೆ ಮಾಡಲಿ!“ಐವನ್ ಡಿಸೋಜ ಗುಡುಗು

Saturday, August 3rd, 2024
Ivan-D-Souza

ಮಂಗಳೂರು: ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ಇಲಾಖೆಯಲ್ಲಿ ಹಗರಣ ಆಗಿದೆ ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಧಾಕರ್ ಮನೆಗೆ ಮಾಡಿ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪತ್ರಿಕಾಗೋಷ್ಟಿಯಲ್ಲಿ ಗುಡುಗಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತಾಡಿದ ಅವರು, ಸುಧಾಕರ್ ಕೊರೋನ ಹೆಸರಲ್ಲಿ ನೂರಾರು ಕೋಟಿ ರೂಪಾಯಿ […]

ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದ ಬಿಜೆಪಿ

Tuesday, June 4th, 2024
suresh-gopi

ತಿರುವನಂತಪುರಂ: ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಕೊನೆಗೂ ಕೇರಳದಲ್ಲಿ ಬಿಜೆಪಿ ಖಾತೆ ತೆರೆದಿದೆ. ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದ್ದು, ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಜಯ ಗಳಿಸಿದ್ದಾರೆ. ಸುರೇಶ್ ಗೋಪಿ ಕಾಂಗ್ರೆಸ್‌ನ ಕೆ. ಮುರಳೀಧರನ್‌ ಮತ್ತು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸುರೇಶ್ ಗೋಪಿ ಬರೊಬ್ಬರಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು, ಇದು […]

ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ  ಮರಳಿ  ಬಿಜೆಪಿಗೆ ಅಧಿಕೃತ ಸೇರ್ಪಡೆ

Thursday, March 14th, 2024
ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ  ಮರಳಿ  ಬಿಜೆಪಿಗೆ ಅಧಿಕೃತ ಸೇರ್ಪಡೆ

ಬೆಂಗಳೂರು : ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಈ ಬಾರಿಯ ಲೋಕಸಭಾ ಅಭ್ಯರ್ಥಿ ಸ್ಥಾನ ಬದಲಾವಣೆಯಾದ ಹಿನ್ನಲೆಯಲ್ಲಿ ಕೊಟ್ಟ ಮಾತಿನಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂಧರ್ಭ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲಾಧ್ಯಕ್ಷ ರಾಧಾಕೃಷ್ಣ ಆಳ್ವ, ಪಿಜಿ ಜನನ್ನಿವಾಸ ರಾವ್, ಪುತ್ತಿಲ ಪರಿವಾರದ ಮುಖ್ಯಸ್ಥ ಪ್ರಸನ್ನ ಮರ್ತಾ ಮೊದಲಾದವರು […]

ಲೋಕಸಭೆಗೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಖಚಿತ

Thursday, February 29th, 2024
Arun-Puttila

ಪುತ್ತೂರು : ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿಗೆ ಬಂಡಾಯವಾಗಿ ಹಿಂದೂ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ. ಇನ್ನು ಮುಂದಿನ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ಬಂಡಾಯವಾಗಿ ಅರುಣ್ ಪುತ್ತಿಲ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ […]

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಸತೀಶ್ ಕುಂಪಲ ಪದಗ್ರಹಣ

Tuesday, January 30th, 2024
sathish Kumpala

ಮಂಗಳೂರು: ರಾಜ್ಯದ ಯಾವುದೇ ಮೂಲೆಗೆ ಹೋದರು ಮತದಾರರು ಉತ್ಸುಕರಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನುಡಿದಿದ್ದಾರೆ. ಅಡ್ಯಾರ್ ಗಾರ್ಡನ್ ನಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿ ಎಂಟು ತಿಂಗಳ ಹಿಂದೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಕಾಂಗ್ರೆಸ್‌ಗೆ ದೇಶದಲ್ಲಿ ಅಧಿಕಾರಕ್ಕೆ ಬರ್ತೇವೆ ಎಂಬ ಭ್ರಮೆ ಹುಟ್ಟಿಕೊಂಡಿದೆ. ಆದರೆ ದೇಶದಲ್ಲಿ ಮತ್ತು ಕರ್ನಾಟಕ ರಾಜ್ಯದಲ್ಲಿ […]

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯುವ ನಾಯಕ ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ

Wednesday, November 15th, 2023
BY Vijayendra

ಬೆಂಗಳೂರು : ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಯುವ ನಾಯಕ ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಭುಧವಾರ ಅಧಿಕಾರ ಸ್ವೀಕರಿಸಿಕೊಂಡರು. ರಾಜ್ಯ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಮುಂದೆ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ಇದಕ್ಕೂ ಮುನ್ನ […]

ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಅದರಲ್ಲಿ ತಪ್ಪೆನು ? : ಪ್ರಮೋದ್ ಮಧ್ವರಾಜ್

Tuesday, October 10th, 2023
ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಅದರಲ್ಲಿ ತಪ್ಪೆನು ? : ಪ್ರಮೋದ್ ಮಧ್ವರಾಜ್

ಉಡುಪಿ : ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇತ್ತು, ಈ ಬಾರಿ ಬಿಜೆಪಿ – ಜೆಡಿಎಸ್ ಮೈತ್ರಿ ಇದೆ ಹೀಗಾಗಿ ನನಗೆ ಸಂತೋಷ ಇದೆ ಯಾಕೆಂದರೆ ನಾನು ಹೋದಲೆಲ್ಲಾ ಜೆಡಿಎಸ್ ನನ್ನ ಹಿಂದೇಯೇ ಬರುತ್ತಿದೆ . ನನಗೆ ಶಾಲು ಹಾಕಿ ಅಭ್ಯಾಸ ಇದೆ ಎಂದು ಮಾಜಿ ಸಚಿವ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಪತ್ರಿಕಾಭವನದಲ್ಲಿ ಪತ್ರಕರ್ತರೊಂದಿಗೆ ನಡೆದ ಸಂವಾದ ದಲ್ಲಿ ಮಾತನಾಡಿದ ಅವರು , […]

ಟಿಕೆಟ್ ಗಾಗಿ ಹಣ ಪ್ರಕರಣ : ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ: ಬಸವರಾಜ ಬೊಮ್ಮಾಯಿ

Thursday, September 14th, 2023
bommai

ಮಂಗಳೂರು : ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರರಿಂದ ವಂಚನೆಯಾಗಿರುವ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು ಎಂದು ಆಗ್ರಹಿಸಿದ್ದಾರೆ. ಟಿಕೆಟ್ ಕೊಡಿಸುತ್ತೇವೆ ಎಂದು ಹಣ […]

ಕೋಟೆಕಾರು ಪಟ್ಟಣ ಪಂಚಾಯತ್‍ನ 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ

Thursday, December 30th, 2021
Kotekar panchayath

  ಉಳ್ಳಾಲ :  ಡಿ.27ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ಮಂಗಳೂರು ತಾಲೂಕು ಪಂಚಾ ಯತ್ ಸಭಾಂಗಣದಲ್ಲಿ ನಡೆಯಿತು. ಕೋಟೆಕಾರು ಪಟ್ಟಣ ಪಂಚಾಯತ್‍ನ 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಮತ್ತೆ ಅಧಿಕಾರ ಪಡೆದಿದೆ. ಬಿಜೆಪಿ ಈ ಬಾರಿ 11 ಸ್ಥಾನಗಳನ್ನು ಪಡೆದರೆ ಕಳೆದ ಬಾರಿ 4 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 4 ಸ್ಥಾನಗಳನ್ನು ಉಳಿಸಿದೆ, ಒಂದು ಸ್ಥಾನ ಪಡೆದಿದ್ದ ಎಸ್‍ಡಿಪಿಐ ಒಂದೇ ಸ್ಥಾನವನ್ನು ಉಳಿಸಿಕೊಂಡಿದೆ. ಪ […]

ಸೋಲುವ ಭೀತಿಯಿಂದ ಕಾಂಗ್ರೆಸ್ ಒಳಒಪ್ಪಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕೆ

Friday, December 10th, 2021
Nalinkumar-Kateel

ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15ಕ್ಕಿಂತಲೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ. ಯಾವುದೇ ಪಕ್ಷದ ಜತೆ ಒಳ ಒಪ್ಪಂದ ಅಗತ್ಯ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿದೆ. ಹಾಗಾಗಿ ಒಳ ಒಪ್ಪಂದದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು. ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು `ಬಿಜೆಪಿ ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಘಟನಾತ್ಮಕವಾಗಿ ಎದುರಿಸಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆ ಸಹಿತ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ […]