ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರುಗೆ ಜಯ

Thursday, October 24th, 2024
Kishor-Putturu

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಅಕ್ಟೋಬರ್ 24 ರಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ. ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ […]

ವಿಧಾನ ಪರಿಷತ್‌ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Wednesday, October 2nd, 2024
kishor-kumar

ಮಂಗಳೂರು : ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಸ್ಪರ್ಧಿಸಲಿದ್ದಾರೆ. ಬಿಜೆಪಿ ಹೈ ಕಮಾಂಡ್ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಿದೆ. ಪುತ್ತೂರಿನ ಸರ್ವೆಯ ಬೊಟ್ಯಾಡಿಯ ನಿವಾಸಿಯಾದ ಕಿಶೋರ್ ಕುಮಾರ್ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ […]

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಸೋಲು

Tuesday, June 4th, 2024
Eshwarappa

ಶಿವಮೊಗ್ಗ: ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಜಯ ಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಎರಡನೇ ಸ್ಥಾನ ಪಡೆದು ಬಿಜೆಪಿ ವಿರುದ್ದ ಬಂಡಾಯ ನಿಂತಿದ್ದ ಕೆ.ಎಸ್‌.ಈಶ್ವರಪ್ಪ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಡಮ್ಮಿ ಕ್ಯಾಂಡಿಡೇಟ್ ಎನ್ನುತ್ತಿದ್ದ ಈಶ್ವರಪ್ಪನವರ ಮಾತು ಹುಸಿಯಾಗಿದೆ. ಖುದ್ದು, ಈಶ್ವರಪ್ಪ ಊಹಿಸಲೂ ಅಸಾಧ್ಯವಾದಂತಹ ಸೋಲು ಕಂಡಿದ್ದಾರೆ. ಮತಎಣಿಕೆಯ ಒಂದು ದಿನದ ಮುನ್ನವೂ ಈಶ್ವರಪ್ಪ ಗೆಲುವಿನ ಮಾತನ್ನು ಆಡಿದ್ದರು. […]

ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ

Tuesday, June 4th, 2024
ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಎಂಟನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4,02,107 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 30,50,93 ಮತ ಗಳಿಸಿದ್ದಾರೆ. ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ 97,014 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ನೋಟಾ ಪರವಾಗಿ 12,734 ಮತಗಳು ಬಿದ್ದಿವೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ […]

ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯ ಮಾತು

Tuesday, March 12th, 2024
Nalin-Kateel

ಮಂಗಳೂರು : ದಕ್ಷಿಣಕನ್ನಡ ಲೋಕಸಭಾ ಚುನಾವಣಾ ಅಭ್ಯರ್ಥಿ ಆಯ್ಕೆಯಲ್ಲಿ ಬದಲಾವಣೆಯ ಮಾತು ಕೇಳಿ ಬಂದಿದೆ. ಬಿಜೆಪಿಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಸತತ ಮೂರು ಬಾರಿ ಸ್ಪರ್ಧಿಸಿರುವುದರಿಂದ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿಯ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಇಆ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಬೇಕು ಎನ್ನುವುದು ನಮ್ಮ ಪಾರ್ಟಿಯ ವಿಶೇಷತೆ. ಪಾರ್ಟಿಯ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಇದನ್ನು ನಾನು […]

ದ.ಕ. ಮತ್ತು ಉಡುಪಿ ಜಿಲ್ಲೆ ವಿಧಾನ ಪರಿಷತ್‌ನ ಚುನಾವಣೆ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಜುನಾಥ ಭಂಡಾರಿಗೆ ಜಯ

Tuesday, December 14th, 2021
Manjunatha Bhandary SrinivasaPoojary

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಇಬ್ಬರೂ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯ ಗಳಿಸಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆ ಸಚಿವರಾಗಿರುವ ಕೋಟ ಶ್ರೀನಿವಾಸ 3,672 ಮತಗಳನ್ನು ಗಳಿಸಿ ಮತ್ತೊಮ್ಮೆ ರಾಜ್ಯ ಶಾಸಕಾಂಗದ ‘ಮೇಲ್ಮನೆ’ ಪ್ರವೇಶಿಸಿದ್ದಾರೆ. ಮಂಜುನಾಥ ಭಂಡಾರಿ 2,079 ಮತಗಳನ್ನು ಗಳಿಸಿ ಮೊದಲ ಬಾರಿ […]

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತದಾನ

Thursday, April 18th, 2019
Nalin Kumar

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ  ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಬೆಳಗ್ಗೆ 11ರ ವೇಳೆಗೆ 32.5 % ಮತದಾನವಾಗಿದೆ . ಉರ್ವ ಲೇಡಿಹಿಲ್ ಸಮೀಪದ  ಸಂತ ಅಲೋಶಿಯಸ್ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದ್ದಾರೆ. ಮತದಾರರು ಮತಗಟ್ಟೆಯಲ್ಲಿ ಬೆಳಿಗ್ಗೆಯೇ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದು, ಚುರುಕಿನಿಂದ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ […]

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ನಟಿ ತಾರಾ ಮತಯಾಚನೆ

Thursday, April 4th, 2019
Tara

ಮಂಗಳೂರು : ದ.ಕ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ನಟಿ ತಾರಾ ಮತಯಾಚನೆ ಮಾಡಿದರು ನಗರದ ಕೇಂದ್ರ ಮಾರುಕಟ್ಟೆ ಸುತ್ತಮುತ್ತ ಮತಯಾಚನೆ ಮಾಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ಪ್ರತಿ ಕ್ಷೇತ್ರದಲ್ಲೂ ಬಿಜೆಪಿಯಿಂದ ಅವರೇ ನಿಂತಿದ್ದಾರೆ ಎನ್ನುವ ನಂಬಿಕೆ ನಮ್ಮದು. ಕಾಂಗ್ರೆಸ್ ಪಕ್ಷ ಇಷ್ಟು ವರ್ಷ ಕಳೆದರೂ ಇಂದಿರಾ ಗಾಂಧಿ ಹೆಸರಿನಲ್ಲಿ ಮತ ಯಾಚಿಸುತ್ತದೆ. ಹೀಗಿರುವಾಗ ನಮ್ಮ ನಾಯಕ, ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ನಾವ್ಯಾಕೆ ಮತ ಯಾಚನೆ ಮಾಡಬಾರದು ? ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿಯ […]

ದಕ್ಷಿಣ ಕನ್ನಡ ಲೋಕಸಭೆಗೆ ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು ?

Saturday, March 2nd, 2019
Satyajith

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಸಮಾಧಾನ ಗೊಂಡ ಇನ್ನೊಂದು ಬಣ ಆರ್ ಎಸ್ ಎಸ್ ನ ಕಟ್ಟಾಳು ಸತ್ಯಜಿತ್ ಸುರತ್ಕಲ್ ಅವರನ್ನು ಈ ಬಾರಿಯ ಲೋಕ ಸಭಾ ಅಭ್ಯಥಿಯನ್ನಾಗಿಸಲು ಸತ ಪ್ರಯತ್ನ ಮಾಡುತ್ತಿದೆ ಅದಕ್ಕಾಗಿ ಅಲ್ಲಲ್ಲಿ ಸತ್ಯಜಿತ್ ಸುರತ್ಕಲ್ ಅವರ ಫ್ಲೆಕ್ಸ್ ಹಾಕಿದ್ದಾರೆ. ಅಭಿಮಾನಿಗಳು ಜಿಲ್ಲೆಯಾದ್ಯಂತ ಹಾಕಿದ ಫ್ಲೆಕ್ಸ್ ಗಳು ಬಿಜೆಪಿ ಮುಂಖಡರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಲ್ಲೂ ಸತ್ಯಜಿತ್ ಅಭಿಮಾನಿಗಳ ಹೆಸರಿನಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸತ್ಯಜಿತ್‌ ನಮ್ಮ ಆಯ್ಕೆ ಎಂಬ […]

ಮಂಗಳೂರಿನ ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Saturday, April 21st, 2018
bjp candidates

ಮಂಗಳೂರು:  ಮಂಗಳೂರಿನ ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳನ್ನು ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದ್ದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ.ವೇದವ್ಯಾಸ್ ಕಾಮತ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಂಗಳೂರು ಉತ್ತರ ಬಿಜೆಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ, ದಂತವೈದ್ಯ ಡಾ. ವೈ ಭರತ್ ಶೆಟ್ಟಿಯವರಿಗೆ ಟಿಕೆಟ್ ಲಭಿಸಿದೆ. ಮಂಗಳೂರು ಕ್ಷೇತ್ರದಿಂದ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಪು […]