ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

Friday, November 10th, 2023
BY-Vijayendra

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ ಬಿವೈ ವಿಜಯೇಂದ್ರ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ […]

ಸೋಷಿಯಲ್‌ ಮೀಡಿಯಾದಲ್ಲಿ ರಾಜ್ಯಾಧ್ಯಕ್ಷರ ವಿರುದ್ದ ಅತೃಪ್ತ ಆತ್ಮ ಹಾಗೂ ಕಾಣದ ಕೈಗಳು ಕೆಲಸ ಮಾಡುತ್ತಿವೆ : ಸುದರ್ಶನ್‌ ಮೂಡುಬಿದಿರೆ

Thursday, December 16th, 2021
Social Media

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಬರೆಯುವವರು ಪೇಮೆಂಟ್‌ ಕೊಡುತ್ತಾರೆ ಎಂದು ಬರೆಯುವವರು.  ಸೋಷಿಯಲ್‌ ಮೀಡಿಯಾದಲ್ಲಿ ಬರೆದ ಮಾತ್ರಕ್ಕೆ ರಾಜೀನಾಮೆ ಕೊಡಲು ಅದು ಭಿಕ್ಷೆ ಅಲ್ಲ,  ಸಂಘಟನೆ ಒಡೆಯುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಹೇಳಿದ್ದಾರೆ. ನಗರದ  ಖಾಸಗಿ ಹೋಟೆಲಿನಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಸೋಷಿಯಲ್‌ ಮೀಡಿಯಾದಲ್ಲಿ ದುರ್ಬಲ ರಾಜಾಧ್ಯಕ್ಷ ಎಂದು ಹೇಳಿಕೆ ಕೊಟ್ಟ ಕೂಡಲೇ ಅವರು ದುರ್ಬಲವಾಗುವುದಿಲ್ಲ. […]

ನಳಿನ್ ಕುಮಾರ್ ಕಟೀಲ್ ಮೊದಲು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು, ಅವರು ಮತ್ತೆ ಮರಳಿ ಕಾಂಗ್ರೆಸ್​ ಪಕ್ಷಕ್ಕೆ ಬರಲಿ

Tuesday, December 7th, 2021
Khader

ಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲು‌ ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. ಮತ್ತೆ ಅವರು ಕಾಂಗ್ರೆಸ್ಗೆ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ಅಹ್ವಾನ ನೀಡಿದ್ದಾರೆ ಖಾದರ್ ಮತ್ತು ರಮಾನಾಥ ರೈ ಹೊರತುಪಡಿಸಿ ಉಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮೊದಲು ಕಾಂಗ್ರೆಸ್ […]

ಕಲ್ಲೇಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ

Monday, December 6th, 2021
BJP-MLC

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಇಲ್ಲಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಜರುಗಿತು. ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, “ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿದವರು. ಧಾರ್ಮಿಕ ದತ್ತಿ ಇಲಾಖೆಗೆ ಕೋಟ ಮಂತ್ರಿಯಾದಾಗ ಹಳ್ಳಿ ಹಳ್ಳಿಯ ಸಣ್ಣಪುಟ್ಟ ದೇವಸ್ಥಾನಗಳಿಗೂ ಅನುದಾನ ನೀಡಿದರು. ಸಾಮೂಹಿಕ ವಿವಾಹ […]

ಬಿಟ್ ಕಾಯಿನ್ ಹಗರಣದ ಆರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಕೂಡ ಇದೆ : ರಮಾನಾಥ ರೈ

Saturday, November 20th, 2021
Ramanatha Rai

ಮಂಗಳೂರು : ಸಚಿನ್ ಮಾಮನಿ  ಬಿಟ್ ಕಾಯಿನ್ ಹಗರಣದ  ಬಗ್ಗೆ ಪ್ರಧಾನಮಂತ್ರಿಗೆ ಪತ್ರ ಬರೆದಿರುವ ಆರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಕೂಡ ಇದೆ ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದು ಆಗ್ರಹಿಸಿದ್ದಾರೆ. ಹೆಸರನ್ನು ಉಲ್ಲೇಖಿಸದೆ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಮತ್ತು ಪ್ರಸಿದ್ಧ ಶೆಟ್ಟಿ ಮೊದಲಾದವರ ಹೆಸರನ್ನು ಸಹ ಸಚಿನ್ ಮಾಮನಿ ಅವರು ಪ್ರಧಾನಮಂತ್ರಿಗೆ ಬರೆದಿರುವ ಆರೋಪ […]

ಕರಾವಳಿಗೆ ಮೂರು ಮಂತ್ರಿ ಸ್ಥಾನ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ

Friday, July 30th, 2021
Yedyurappa

ಬೆಂಗಳೂರು : ಮಾಜಿ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋ ಬಳಿಕ ಮೊದಲ ಬಾರಿ ಅಸಮಾಧಾನ ಹೊರಹಾಕಿದ್ದು. ಇದ್ದರಿಂದ ರಾಜ್ಯಾಧ್ಯಕ್ಷರ ಸ್ಥಾನ ಬದಲಾಗುವ ಮುನ್ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೆಲಸಮಾಡುತ್ತಿಲ್ಲ. ಪಕ್ಷ ಬಲವರ್ಧನೆಗೆ ನಾನೇ ವಾರಕ್ಕೊಂದು ಬಾರಿ ರಾಜ್ಯದ ಪ್ರತೀ ಜಿಲ್ಲೆಗಳಲ್ಲಿ ಸಂಚರಿಸಿ, ಮುಂದಿನ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಶ್ರಮವಹಿಸುವುದಾಗಿ ಹೇಳಿದ್ದಾರೆ. ರಾಜ್ಯಾಧ್ಯಕ್ಷರನ್ನಾಗಿ ಪ್ರಭಲ ಲಿಂಗಾಯತ ನಾಯಕನನ್ನು ನೇಮಿಸುವ ಚಿಂತನೆಯಲ್ಲಿ ಯಡಿಯೂರಪ್ಪ ಬಣ ಸಜ್ಜಾಗಿದೆ. ಆ ಮೂಲಕ […]

ಎರೆಡಲ ಪನೆರೆ ಪೋವೊಡ್ಚಿ, ಪೊಸ ಟೀಮು ಮಲ್ಪುವ : ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್

Monday, July 19th, 2021
nalin kumar kateel

ಮಂಗಳೂರು  :  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಅವರು, ” ಆ ಧ್ವನಿ ನನ್ನದಲ್ಲ, ಈ ಬಗ್ಗೆ ತನಿಖೆ ನಡೆಸಲು ಈಗಾಗಲೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ. ಆಡಿಯೋದಲ್ಲಿ ತುಳುವಿನಲ್ಲಿ ‘ಎರೆಡಲ ಪನೆರೆ ಪೋವೊಡ್ಚಿ.  ಈಶ್ವರಪ್ಪ , ಜಗದೀಶ್ ಶೆಟ್ಟರ್ ಟೀಮುನೇ ದೆಪ್ಪುವ, ಪೊಸ ಟೀಮು ಮಲ್ಪುವ, ಇತ್ತೇ ಪುರ ನಮ್ಮ ಕೈಟ್ ಉಂಡು, ಮೂಜಿ ಪುದರ್ ವುಂಡು ಎಂದು […]

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಹೋದರ ನವೀನ್ ಕುಮಾರ್ ನಿಧನ

Monday, June 28th, 2021
Naveen-Kumar

ಸುಳ್ಯ: ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಕುಂಜಾಡಿ (56) ಅವರು ಅಲ್ಪಕಾಲದ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿಯಾಗಿರುವ ನವೀನ್ ಕುಮಾರ್, ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿಯವರನ್ನು ಅಗಲಿದ್ದಾರೆ. ನವೀನ್ ಕುಮಾರ್ ಅವರು ಕೃಷಿಕ ರಾಗಿದ್ದರು ಮತ್ತು  ಸಾಮಾಜಿಕ […]

ಕುಂಜಾಡಿ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವ

Friday, April 9th, 2021
Dharmanema

ಸುಳ್ಯ: ಕುಂಜಾಡಿ ತರವಾಡು ಮನೆಯಲ್ಲಿ ‍60 ವರ್ಷಗಳ ಬಳಿಕ ಮೊದಲ ಬಾರಿ ನಡೆಯುತ್ತಿರುವ ಧರ್ಮ ನೇಮೋತ್ಸವ ಗುರುವಾರ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕೊರೋನಾ ನಿಯಮ ಗಳಿಗನುಗುಣವಾಗಿ  ಆರಂಭಗೊಂಡಿತು. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕುಂಜಾಡಿ ತರವಾಡು ಕುಟುಂಬದ ಹಿರಿಯರು, ಯಜಮಾನರು, ಬಂಬಿಲ ಗುತ್ತು, ಮೇಗಿನ ಕುಂಜಾಡಿ, ಕೆಳಗಿನ ಕುಂಜಾಡಿ ಮಧ್ಯಸ್ಥರ ನೇತೃತ್ವದಲ್ಲಿ  ಸಚಿವರು, ಸ್ವಾಮೀಜಿಗಳು, ಜನಪ್ರತಿನಿಧಿಗಳು, ರಾಜ್ಯ ರಾಜಕೀಯ- ಸಾಮಾಜಿಕ ಮುಖಂಡರು ಭೇಟಿ ನೀಡಿದ್ದಾರೆ. ಗ್ರಾಮ ದೈವ ಅಬ್ಬೆಜಲಾಯ, ಉಲ್ಲಾಕುಳು ಮತ್ತು ರಕ್ತೇಶ್ವರಿ […]

ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ ಸ್ಥಳಾಂತರ, ಜಿಲ್ಲೆಗೆ ಮಾಡಿದ ಮೋಸ

Tuesday, January 19th, 2021
muneerKatialla

ಮಂಗಳೂರು : ನಗರ ಹೊರವಲಯದ ಬಡಗ ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎಎಫ್) ಘಟಕ ಯಾರ ಅರಿವಿಗೂ ಬಾರದಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಸ್ಥಳಾಂತರಿಸಿ  ಶಿಲಾನ್ಯಾಸ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿಂದೆ ಕರಾವಳಿಯ ಬ್ಯಾಂಕುಗಳು ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನ, ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ, ಇದೀಗ ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಸ್ಥಳಾಂತರ ಸಂಸದ ನಳಿನ್ ಕುಮಾರ್ ಕಟೀಲ್ ವೈಫಲ್ಯ ಎಂದು ಮುನೀರ್‌ ಕಾಟಿಪಳ್ಳ ಆರೋಪಿಸಿದ್ದಾರೆ. ಈ ವೈಫಲ್ಯದ ಜವಾಬ್ದಾರಿಯನ್ನು […]