ಭಾರತ ದೇಶದ ಜನರ ಅಸಹಾಯಕತೆಯನ್ನು ಅವಹೇಳನ ಮಾಡುವ ಸ್ಥಿತಿ ನಿರ್ಮಾಣಗೊಂಡಿದೆ – ಮುನೀರ್ ಕಾಟಿಪಳ್ಳ

Friday, September 23rd, 2022
muneer

ಮಂಗಳೂರು : ಭಾರತ ದೇಶದ ಜನರನ್ನು ಕಾಡುವ ಹಲವು ಗಂಭೀರ ಸಮಸ್ಯೆಗಳನ್ನು ಈಡೇರಿಸುವ ಭರವಸೆಯನ್ನು ಮುಂದಿಟ್ಟು ಅಧಿಕಾರದ ಗದ್ದುಗೆಯನ್ನೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಾವೊಂದು ಭರವಸೆಗಳನ್ನು ಈಡೇರಿಸದೆ ಕನಿಷ್ಟ ನೆಮ್ಮದಿಯಿಂದ ಬದುಕು ನಡೆಸಲಾಗದಂತಹ ಸ್ಥಿತಿಗೆ ಈ ದೇಶದ ಜನರನ್ನು ತಂದು ನಿಲ್ಲಿಸಿದ್ದಾರೆ. ಇವತ್ತು ನಮ್ಮ ಬಡತನವನ್ನು, ಅಸಹಾಯಕತೆಯನ್ನು ಅವಹೇಳನ ಮಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸಿಪಿಐಎಂ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಕಾಂ ಮುನೀರ್ ಕಾಟಿಪಳ್ಳ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕೇಂದ್ರ, ರಾಜ್ಯ ಸರಕಾರದ […]

ಬಿಜೆಪಿ ಸರಕಾರ ಜನರ ಮೇಲೆ ಜಿಎಸ್‌ಟಿ ರೂಪದಲ್ಲಿ ಹೊರೆ ಹಾಕುತ್ತಿದೆ : ಯು.ಟಿ.ಖಾದರ್

Tuesday, July 19th, 2022
UT Khader

ಮಂಗಳೂರು : ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಲಾಗಿದೆ. ಅದನ್ನು ನಿಭಾಯಿಸುವ ಸಾಮರ್ಥ್ಯ ಇಲ್ಲದ ಬಿಜೆಪಿ ಸರಕಾರ ಜನರ ಮೇಲೆ ಜಿಎಸ್‌ಟಿ ರೂಪದಲ್ಲಿ ಹೊರೆ ಹಾಕುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಕಿ, ಗೋಧಿ, ಬೆಲ್ಲ, ಜೇನುತುಪ್ಪ, ಪೆನ್ಸಿಲ್ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹಾಕುವ ಮೂಲಕ ಬಿಜೆಪಿ ಸರಕಾರ ಜನರನ್ನು ಲೂಟಿ ಮಾಡಿ ಖಜಾನೆ ತುಂಬಿಸುವ ಯತ್ನ ನಡೆಸುತ್ತಿದೆ. […]

ಜೀವವನ್ನು ಮುಡಿಪಾಗಿಟ್ಟಾದರೂ ಅನ್ಯಾಯದ ವಿರುದ್ದದ ಧ್ವನಿ ಹತ್ತಿಕ್ಕಲು ಬಿಡುವುದಿಲ್ಲ – ಸುನೀಲ್ ಕುಮಾರ್ ಬಜಾಲ್

Friday, June 24th, 2022
srinivas-bajal

ಮಂಗಳೂರು : ಪ್ರಸಕ್ತ ಸನ್ನಿವೇಶದಲ್ಲಿ ಕೋಮುವಾದವೆಂಬ ವಿಷ ದೇಶದುದ್ದಗಲಕೂ ಆವರಿಸಿ ವಿಷಮ ಪರಿಸ್ಥಿತಿಯನ್ನು ನಿರ್ಮಿಸಿದೆ. ಕೇಂದ್ರದ ಬಿಜೆಪಿ ಸರಕಾರ ಇಂದು ಫ್ಯಾಸಿಸ್ಟ್ ಮಾದರಿಯಲ್ಲಿ ದೇಶವನ್ನಾಳುತ್ತಿದೆ. ಸಮಾಜದಲ್ಲಾಗುವ ಅನ್ಯಾಯ ದಬ್ಬಾಳಿಕೆಗಳ ವಿರುದ್ದ , ಬಿಜೆಪಿ ಸರಕಾರದ ಕೋಮು ರಾಜಕಾರಣದ ಆಡಳಿತ ನೀತಿಯ ವಿರುದ್ದ ಧ್ವನಿ ಎತ್ತಿದರೆ ಅಂತಹ ಧ್ವನಿಯನ್ನು ಹಿಂಸೆಯ ಮೂಲಕ ಹತ್ತಿಕ್ಕುವ ಅಥವಾ ದೇಶದ್ರೋಹದ ಪ್ರಕರಣ ದಾಖಲಿಸಿ ಹೋರಾಟವನ್ನು ಕುಗ್ಗಿಸುವ ದಮನಕಾರಿ, ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ. ದೇಶದಾದ್ಯಂತ ಆರ್.ಎಸ್.ಎಸ್ ನಡೆಸುವ ಕ್ರೌರ್ಯಕ್ಕೆ ಎದುರಾಗಿ ಸಮಾಜದಲ್ಲಿ ಶಾಂತಿ ಸೌಹಾರ್ಧತೆ […]

ನರೇಂದ್ರ ಮೋದಿ ನೇತೃತ್ವದ 2ನೇ ಅವಧಿಯ ಮತ್ತು 7 ವರ್ಷದ ಆಡಳಿತದಲ್ಲಿ ಆದ ಕುತೂಹಲಕಾರಿ ಬದಲಾವಣೆಗಳು

Sunday, May 30th, 2021
Naredra-Modi

ಮಂಗಳೂರು  : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ 2ನೇ ಅವಧಿಯ ಮತ್ತು ಒಟ್ಟು 7 ವರ್ಷದ ಆಡಳಿತ ನಡೆಸಿದೆ. ಭಾನುವಾರ ದೇಶದ ನಾಗರಿಕರನ್ನು ಉದ್ದೇಶಿಸಿ ತಮ್ಮ 77ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು  7 ವರ್ಷ ಪೂರೈಸಿದ ಸಂತಸ ವ್ಯಕ್ತ ಪಡಿಸಿದರು ಕೊರೋನಾದಂತಹ ಸಾಂಕ್ರಾಮಿಕ ಪಿಡುಗು ದೇಶದ ಜನರ ಜೀವನಕ್ಕೆ ತೀವ್ರ ಹಾನಿ ಮಾಡಿ, ದೇಶದ ಆರ್ಥಿಕತೆಗೆ ದೊಡ್ಡ ಪೆಟ್ಟು ನೀಡಿದೆ. ಭಾರತವು […]

ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ಬರುತ್ತಾರೆ, ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ : ಡಿಸಿಎಂ ಅಶ್ವಥ್ ನಾರಾಯಣ್

Monday, February 24th, 2020
DCM

ಕಲಬುರಗಿ : ಬಿಜೆಪಿಯ 32 ಶಾಸಕರು ಶೀಘ್ರ ರಾಜೀನಾಮೆ ಎನ್ನುವ ಸಿಎಂ ಇಬ್ರಾಹಿಂ ಹೇಳಿಕೆಗೆ  ಡಿಸಿಎಂ ಅಶ್ವಥ್ ನಾರಾಯಣ್ ಲೇವಡಿ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ 32 ಶಾಸಕರು ಬಿಜೆಪಿಗೆ ಬರ್ತಾರೆ ಅಂತ ಸಿಎಂ ಇಬ್ರಾಹಿಂ ಹೇಳಿರಬೇಕು. ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ. ಮೂರು ವರ್ಷ ಮೂರು ತಿಂಗಳು ಕಾಲ ಆಡಳಿತ ಪೂರ್ಣಗೊಳಿಸುತ್ತೇವೆ ಎಂದರು. ರಾಜ್ಯದಲ್ಲಿ ಮತ್ತೆ 2023ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸರಕಾರ ಅವಧಿ […]

ಮಂಗಳೂರು : ರಾಜ್ಯದ ಬಿಜೆಪಿ ಸರಕಾರದ ‘ನೂರು ದಿನ ನೂರು ಸಾಧನೆ’ ಎಂಬ ಪುಸ್ತಕ ಬಿಡುಗಡೆ

Friday, November 8th, 2019
100-dina-pustaka

ಮಂಗಳೂರು : ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಯಡಿಯೂರಪ್ಪ ನೇತೃತ್ವದ ರಾಜ್ಯದ ಬಿಜೆಪಿ ಸರಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ‘ನೂರು ದಿನ ನೂರು ಸಾಧನೆ’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿದರು. ಕಳೆದ ಒಂದೂವರೆ ವರ್ಷಗಳಲ್ಲಿ ಅಭಿವೃದ್ಧಿಯಲ್ಲಿ ಕುಂಟುತ್ತಾ ಮಲಗಿದ್ದ ರಾಜ್ಯ ಸರಕಾರ ಇದೀಗ ಓಡಲು ಆರಂಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯದಲ್ಲಿ ಹಲವು ಸವಾಲುಗಳ ಮಧ್ಯೆಯೇ […]

ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಕಾಂಗ್ರೆಸ್ ಪ್ರಶ್ನೆ

Friday, April 5th, 2019
Modi-shop

ಮಂಗಳೂರು : ಬಿಜೆಪಿ ಸರ್ಕಾರವಿದ್ದಾಗ ಅಬಕಾರಿ ಇಲಾಖೆ ಸಚಿವರಾಗಿದ್ದ ಎಂ.ಪಿ. ರೇಣುಕಾಚಾರ್ಯ ಅವರೇನು ನಂದಿನಿ ಹಾಲು ಪ್ಯಾಕೇಟುಗಳನ್ನು ಮಾರಾಟ ಮಾಡುತ್ತಿದ್ರ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬಾರ್ ನಡೆಸುವವರ ಕಟ್ಟಡದಲ್ಲಿ ಚುನಾವಣಾ ಕಚೇರಿ ಮಾಡುವುದು ಸಂಸ್ಕೃತಿ ವಿರೋಧ ಮತ್ತು ಅನೈತಿಕವೆಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್ ಮಹಾಬಲ ಮಾರ್ಲ ಅವರು, ಬಿಜೆಪಿ ಶಾಸಕರ ಸ್ನೇಹಿತರು ಬಾರುಗಳಲ್ಲಿ ಗೋವಿನ ಹಾಲು ಮಾರಾಟ ಮಾಡುತ್ತಿದ್ದಾರೆಯೇ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ. ಬಿಜೆಪಿಯವರ ಪ್ರಕಾರ ಕಾನೂನು […]

ಎತ್ತಿನಹೊಳೆ ಯೋಜನೆ ಕೆಲವರ ಜೇಬು ತುಂಬಿಸಲು ರೂಪಿಸಿರುವ ಯೋಜನೆ: ಸಿ.ಟಿ.ರವಿ

Thursday, January 19th, 2017
C T Ravi

ಮಂಗಳೂರು: ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಒಂದು ಹನಿ ನೀರು ಕೂಡಾ ಸಿಗುವುದಿಲ್ಲ. ಬಿಳಿ ಆನೆ ಆಗಿರುವ ಎತ್ತಿನಹೊಳೆ ಕೆಲವರ ಜೇಬು ತುಂಬಿಸಲು ರೂಪಿಸಿರುವ ಯೋಜನೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ. ಆರೋಪಿಸಿದರು. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಯೋಜನೆಗೆ 2,300 ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆಗೆ ಪರಿಸರ ಇಲಾಖೆ ಅನುಮತಿ ಇಲ್ಲ. ಸಮರ್ಪಕ ಯೋಜನಾ ವರದಿ ಇಲ್ಲ. ಒಟ್ಟು ಯೋಜನೆಯಲ್ಲಿಯೇ ಗೊಂದಲ ಇದೆ. ಈ ಹಿನ್ನೆಲೆಯಲ್ಲಿ ಎತ್ತಿನಹೊಳೆ […]

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷನಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಣೆ : ಗಣೇಶ್ ಕಾರ್ಣಿಕ್

Thursday, December 27th, 2012
Capt Ganesh Karnik

ಮಂಗಳೂರು : ವಿದೇಶದಲ್ಲಿರುವ ರಾಜ್ಯದ ಜನರ ಹಿತದೃಷ್ಟಿಯನ್ನು ಕಾಪಾಡುವ ಸಲುವಾಗಿ ಬಿಜೆಪಿ ಸರಕಾರದ ಅವಧಿಯಲ್ಲಿ ಅನಿವಾಸಿ ಭಾರತೀಯ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು ಇದರಲ್ಲಿ ತನಗೆ ಅವಧಿಗಿಂತ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ ಎಂದು ವಿಧಾನ ಪರಿಷತ್ ನೈರುತ್ಯ ಶಿಕ್ಷಕ ಕ್ಷೇತ್ರದ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲಾಗಿದ್ದು ತನ್ನನ್ನು ಇದರ ಉಪಾಧ್ಯಕ್ಷನನ್ನಾಗಿ ಮಾಡಿದೆ. ತನ್ನ […]

ವಿದ್ಯುತ್‌ ಕ್ಷಾಮಕ್ಕೆ ಬಿಜೆಪಿ ಸರಕಾರದ ಆಡಳಿತ ವೈಫಲ್ಯವೇ ಮುಖ್ಯ ಕಾರಣಃ ಜೈನ್‌

Friday, October 21st, 2011
congress protest

ಮಂಗಳೂರು: ವಿದ್ಯುತ್‌ ಸಮಸ್ಯೆಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಮತ್ತು ಯುವ ಕಾಂಗ್ರೆಸ್‌ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಯಿತು. ಮೂಲ್ಕಿ- ಮೂಡಬಿದಿರೆಯ ಶಾಸಕ ಕೆ. ಅಭಯಚಂದ್ರ ಜೈನ್‌ ಪ್ರತಿಭಟನೆಯ ಸಭೆಯನ್ನು ಉದ್ಘಾಟಿಸಿದರು. ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್‌ ಕ್ಷಾಮಕ್ಕೆ ಬಿಜೆಪಿ ಸರಕಾರದ ಆಡಳಿತ ವೈಫಲ್ಯವೇ ಮುಖ್ಯ ಕಾರಣ. ಅಧಿಕಾರಕ್ಕೆ ಬರುವ ಮೊದಲು ದಿನದ 24 ಗಂಟೆ ಕಾಲವೂ ವಿದ್ಯುತ್‌ ಪೂರೈಕೆ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಕಳೆದ 5 […]