ಮಧ್ಯಂತರ ಬಜೆಟ್ ದೇಶದ ಭರವಸೆಯ ಬಜೆಟ್ : ಶಾಸಕ ವೇದವ್ಯಾಸ್ ಕಾಮತ್

Thursday, February 1st, 2024
Vedavyas-kamath

ಮಂಗಳೂರು : ದೇಶ ಚುನಾವಣೆಯ ಹೊಸ್ತಿಲಲ್ಲಿದ್ದರೂ ಯಾವುದೇ ಓಲೈಕೆಯ ಘೋಷಣೆಗಳಿಲ್ಲದ ಭವ್ಯ ಭಾರತದ ಭವಿಷ್ಯದ ದೃಷ್ಟಿಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರದ ಮಧ್ಯಂತರ ಬಜೆಟ್ ಭಾರತವೀಗ ಸ್ವಾವಲಂಬಿ ಹಾಗೂ ಹೊಸ ದಿಕ್ಕಿನತ್ತ ಸಾಗುತ್ತಿರುವುದರ ಸಂಕೇತ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಇದು ದೇಶದ ಭರವಸೆಯ ಬಜೆಟ್ ಆಗಿದ್ದು ಬಿಜೆಪಿ ಸರ್ಕಾರದ ಮುಖ್ಯ ಗುರಿಯೇ ದೇಶದ ಮೂಲಭೂತ ಸೌಕರ್ಯದ ಅಭಿವೃದ್ಧಿ. ಆ ನಿಟ್ಟಿನಲ್ಲಿ ಕೇಂದ್ರದ ಮೋದಿ ಸರ್ಕಾರವು ದೇಶವನ್ನು ಕೊಂಡೊಯ್ಯುತ್ತಿದೆ. ಪಿಎಂ […]

ಪೆಟ್ರೋಲ್ ಬೆಲೆ ಶತಕದ ಗಡಿ : ತೈಲೋತ್ಪನ್ನಗಳ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

Sunday, June 6th, 2021
congress protest

ಬೆಂಗಳೂರು : ಕೋವಿಡ್ ಸಂಕಷ್ಟದಿಂದಾಗಿ ಉದ್ಯೋಗ, ಆದಾಯ ಕಳೆದುಕೊಂಡು ತೀವ್ರ ತೊಂದರೆಯಲ್ಲಿರುವಾಗ ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಸಾಮಾನ್ಯ ಜನತೆಯ ಮೇಲೆ ಭಾರೀ ಹೊರೆ ಹೇರುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್ ದರ ನಗರದಲ್ಲಿ ನೂರು ರೂ ಗಡಿ ಸಮೀಪಿಸುತ್ತಿದ್ದು, ಡೀಸೆಲ್ ದರ 90 ರೂ ದಾಟಿದೆ. ಇದರಿಂದ ಎಲ್ಲಾ ಅಗತ್ಯ ವಸ್ತುಗಳ ದರ ಹೆಚ್ಚಾಗುತ್ತಿದ್ದು, ಇದಕ್ಕೆ ಕೇಂದ್ರದ ಬಿಜೆಪಿ ಸರ್ಕಾರದ […]

ಗೋಡೆ ಬರಹ ಬರೆದ ದೇಶ ದ್ರೋಹಿಗಳನ್ನು ಪತ್ತೆ ಹಚ್ಚಿ ಬೇರೆ ದೇಶಕ್ಕೆ ಬಿಟ್ಟು ಬರಬೇಕು : ಯು.ಟಿ. ಖಾದರ್

Sunday, November 29th, 2020
UT Khader

ಮಂಗಳೂರು: ಉಗ್ರರಿಗೆ ಬೆಂಬಲವಾಗಿ ಗೋಡೆ ಮೇಲೆ ಬರೆದ ಆರೋಪಿಗಳು  ಯಾರೆ ಇರಲಿ ಅಂತಹ ದೇಶ ದ್ರೋಹಿಗಳನ್ನು 15 ದಿನದೊಳಗೆ ಬಂಧಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮಾಜಿ‌ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಉಗ್ರರ ಪರ ಗೋಡೆ ಬರಹ ಬರೆಯುವವರ ಹಿಂದೆ ಯಾರಿದ್ದಾರೆ ಎಂದು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕಾದದ್ದು ಬಿಜೆಪಿ ಸರ್ಕಾರ ಮತ್ತು ಪೊಲೀಸರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಈ ರೀತಿ ಬರೆದವರು ಯಾರೆ ಇರಲಿ ಅಂತಹ ದೇಶ ದ್ರೋಹಿಗಳನ್ನು ಪತ್ತೆ ಹಚ್ಚಿ ಅವರನ್ನು […]

ನಿದ್ರಾವಸ್ಥೆಯಲ್ಲಿರುವ ಜನಪ್ರತಿನಿಧಿಗಳಿಂದಾಗಿ ಆದಾಯ ತೆರಿಗೆ ಕಚೇರಿ ಗೋವಾ ರಾಜ್ಯಕ್ಕೆ ಸ್ಥಳಾಂತರಗೊಂಡಿದೆ : ಖಾದರ್ :

Sunday, September 6th, 2020
UT Khader

ಮಂಗಳೂರು: ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ‌. ಜಿಲ್ಲೆಯಲ್ಲಿದ್ದ ಆದಾಯ ತೆರಿಗೆ ಇಲಾಖೆಯನ್ನು ಗೋವಾಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಈ ಮೂಲಕ ಅಭಿವೃದ್ಧಿ ಆಗುವ ಜಿಲ್ಲೆಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಬದಲು ಇನ್ನಷ್ಟು ಸಂಕಷ್ಟಕ್ಕೆ ದೂಡುವ ಸ್ಥಿತಿಯನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು,  ನಿದ್ರಾವಸ್ಥೆಯಲ್ಲಿರುವ ಜನಪ್ರತಿನಿಧಿಗಳಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆದಾಯ ತೆರಿಗೆ ಕಚೇರಿ  ಗೋವಾ ರಾಜ್ಯಕ್ಕೆ ಸ್ಥಳಾಂತರಗೊಂಡಿದೆ ಈ ಮೂಲಕ […]

ಅನ್ನದಾತನ ಹಿತರಕ್ಷಣೆ ಕಾಯ್ದ ಬಿಜೆಪಿ ಸರ್ಕಾರ :  ನಳಿನ್‌ಕುಮಾರ್ ಕಟೀಲ್

Friday, May 15th, 2020
Nalin Kateel

ಮಂಗಳೂರು : ಕರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ರೈತರ ಹಿತರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ಯೋಜನೆಗಳನ್ನು ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಲ್ಲಿ ಕೃಷಿ ಮೂಲ ಸೌಕರ್ಯಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು1 ಲಕ್ಷ ಕೋಟಿ ರೂ. ಹಂಚಿಕೆ ಮಾಡಿರುವುದು ಅನ್ನದಾತನಿಗೆ ನೆರವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಮೀನುಗಾರರಿಗೆ 20 ಸಾವಿರ ಕೋಟಿ ರೂ.ಮೀಸಲಿರಿಸಿದ್ದು, ಕರ್ನಾಟಕ ಕರಾವಳಿಯ ಮೀನುಗಾರರಿಗೂ ಇದರ […]

“ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರವನ್ನು ಬೀಳೋಕೆ ಬಿಡಲ್ಲ” : ಸುರೇಶ್ ಗೌಡ

Saturday, February 1st, 2020
suresh-gowda

ಮಂಡ್ಯ : ಒಂದೆಡೆ ಆಪರೇಷನ್ ಕಮಲದಿಂದಾಗಿ ಕುಗ್ಗಿರುವ ಜೆಡಿಎಸ್ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಪಕ್ಷದ ವರಿಷ್ಠರು ಜೆಡಿಯು ಉಚ್ಛಾಟಿತ ನಾಯಕ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದ್ದರೆ, ಮತ್ತೊಂದೆಡೆ ಸ್ವತಃ ಜೆಡಿಎಸ್ ಶಾಸಕರು ಬಹಿರಂಗವಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ಶಾಸಕರು ಪಕ್ಷ ತೊರೆಯುವ ಸೂಚನೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಎಂಬುದು ಕಳೆದ ಮೂರ್ನಾಲ್ಕು ತಿಂಗಳಿಂದ ಕಗ್ಗಂಟಾಗಿದೆ. ಸಚಿವ ಸ್ಥಾನಕ್ಕೆ ಮೂಲ ಬಿಜೆಪಿಗರು […]

ಸಿಎಂ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ಸದ್ಯದಲ್ಲೇ ವಿಸ್ತರಣೆ

Tuesday, December 24th, 2019
BSY

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಸಿಎಂ ಯಡಿಯೂರಪ್ಪಗೆ ನೂತನ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಹಾಗಾಗಿ ಮುಂದಿನ ವರ್ಷ ಜನವರಿ ಮೊದಲ ವಾರದಲ್ಲೇ ಸಚಿವ ಸಂಪುಟ ಮಾಡುವ ನಿರ್ಧಾರ ಸಿಎಂ ಬಿ.ಎಸ್ ಯಡಿಯೂರಪ್ಪ ಕೈಗೊಂಡಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸುವ ಸಲುವಾಗಿ ವಾರಾಂತ್ಯಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಕೇಂದ್ರ ಗೃಹ ಸಚಿವ […]

ರಾಜ್ಯ ಬಿಜೆಪಿ ಸರ್ಕಾರ ವಜಾಕ್ಕೆ ಆಗ್ರಹ : ಕೊಡಗು ಕಾಂಗ್ರೆಸ್ ಪ್ರತಿಭಟನೆ

Monday, November 4th, 2019
Kodagu

ಮಡಿಕೇರಿ : ವಾಮಮಾರ್ಗದಲ್ಲಿ ಸರ್ಕಾರ ರಚನೆಗೆ ಮುಂದಾದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸ್ವತ: ಹೇಳಿಕೊಂಡ ಆಡಿಯೋ ವೈರಲ್ ಆಗಿದ್ದು, ಇದನ್ನೇ ಸೂಕ್ತ ಸಾಕ್ಷ್ಯವೆಂದು ಪರಿಗಣಿಸಿ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಬಿಜೆಪಿ, ಸಿಎಂ ಯಡಿಯೂರಪ್ಪ, ಕೇಂದ್ರ ಸರ್ಕಾರ ಮತ್ತು ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ […]

ಸರ್ಕಾರ ಬೀಳಿಸುವ ಕಿಂಗ್​ಪಿನ್​ ಯಾರೆಂಬುದು ನನಗೆ ಗೊತ್ತು: ಸಿಎಂ ಕೊಟ್ರು ಶಾಕ್​​!

Friday, September 14th, 2018
ಸರ್ಕಾರ ಬೀಳಿಸುವ ಕಿಂಗ್​ಪಿನ್​ ಯಾರೆಂಬುದು ನನಗೆ ಗೊತ್ತು: ಸಿಎಂ ಕೊಟ್ರು ಶಾಕ್​​!

ಬೆಂಗಳೂರು: ಬಿಜೆಪಿಯವರು ಸರ್ಕಾರ ಬೀಳಿಸುವ ಕೆಲಸ ಮಾಡುತ್ತಿದ್ದು, ಹಣದ ಆಮಿಷ ಮಾಡುತ್ತಿರುವುದು ಗೊತ್ತಿದೆ. ಹಣ ಎಲ್ಲಿ ಸಂಗ್ರಹ ಆಗುತ್ತಿದೆ. ಇದರ ಕಿಂಗ್ ಪಿನ್ ಯಾರು ಎಲ್ಲವೂ ಗೊತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಕಡತಕ್ಕೆ ಬೆಂಕಿ ಇಟ್ಟವರೂ ಈಗ ಸರ್ಕಾರ ಬೀಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಎಲ್ಲವೂ ಗೊತ್ತು, ನಾನೇನು ಸುಮ್ಮನೆ ಕುಳಿತಿಲ್ಲ ಎಂದು ಹೇಳಿದರು. ಹಣ ಹಂಚಿಕೆ ಕುರಿತು ಕಾನೂನು ಕ್ರಮ […]

ಡಿಸೆಂಬರ್ 25ರಂದು ಮತ್ತೆ ಸಿಎಂ ಆಗಿ ವಿಜಯ್ ರೂಪಾನಿ ಪ್ರಮಾಣ ವಚನ ಸ್ವೀಕಾರ

Wednesday, December 20th, 2017
vijay-rupani

ಅಹ್ಮದಾಬಾದ್: ಇದೇ ಡಿಸೆಂಬರ್ 25ರಂದು ಗುಜರಾತ್ ನಲ್ಲಿ ಮತ್ತೆ ಬಿಜೆಪಿ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಹಾಲಿ ಸಿಎಂ ವಿಜಯ್ ರೂಪಾನಿ ಅವರೇ ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಸಿಎಂ ವಿಜಯ್ ರೂಪಾನಿ ಅವರ ಚುನಾವಣಾ ಪ್ರಯಾಸದ ಜಯಕ್ಕೆ ಸಂಬಂಧಿದಂತೆ ರೂಪಾನಿ ಅವರನ್ನು ಮುಂದಿನ ಸಿಎಂ ಆಗಿ ಮುಂದುವರೆಸಬಾರದು ಎಂದು ಕೆಲ ಬಿಜೆಪಿ ನಾಯಕರ ಬಣ ವಾದಿಸಿತ್ತು. ಆದರೆ ಮತ್ತೊಂದು ಬಣ ರೂಪಾನಿ ಅವರ ನೇತೃತ್ವದಲ್ಲೇ ಬಿಜೆಪಿ […]