ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ

Monday, June 24th, 2024
BS-Yedyurappa

ಸುಬ್ರಹ್ಮಣ್ಯ: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು. ಬೆಳ್ಳಿಗ್ಗೆ ದೇವಾಲಯಕ್ಕೆ ಬಂದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು. ಮಧ್ಯಾಹ್ನ ಸುಳ್ಯಕ್ಕೆ ತೆರಳುವ ಯಡಿಯೂರಪ್ಪ, ಸುಳ್ಯದ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.

ನೂತನ ವಿಜಯನಗರ ಜಿಲ್ಲೆ ಉದ್ಘಾಟಿಸಿದ ಮುಖ್ಯಮಂತ್ರಿ

Saturday, October 2nd, 2021
Vijayanagara

ಹೊಸಪೇಟೆ : ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಇಂದಿನಿಂದ ಅಸ್ತಿತ್ವಕ್ಕೆ ಬಂದ ನೂತನ ವಿಜಯನಗರ ಜಿಲ್ಲೆ ಕುರಿತ ಸರ್ಕಾರದ ಆದೇಶವನ್ನು ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ 56 ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆಯನ್ನು ನೆರವೇರಿಸಿದರು. ವರ್ಣರಂಜಿತವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಜಿಲ್ಲೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಪಟಾಕಿ, ಸಿಡಿ ಮದ್ದುಗಳ ಕಲರವ, ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತು ಮಾಜಿ ಮುಖ್ಯಮಂತ್ರಿ ಬಿ ಎಸ್ […]

ಪ್ರವಾಹದ ಸಂದರ್ಭದಲ್ಲಿ ಮುಖ್ಯಮಂತ್ರಿಯನ್ನು ಹೆದರಿಸಿ ರಾಜೀನಾಮೆ ಕೊಡಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ

Tuesday, July 27th, 2021
siddaramaiah

ಬೆಳಗಾವಿ : ರಾಜ್ಯದಲ್ಲಿ ಪ್ರವಾಹ ಸಂದರ್ಭದಲ್ಲೇ  ‘ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ನವರು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಸೋಮವಾರ ರಾತ್ರಿ ಪ್ರವಾಸಿಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ಹೇಳಿದ್ದಾರೆ. ‘2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ಇಲ್ಲ. ಇದು ಕರ್ನಾಟಕದ ದುರ್ದೈವವೆ ಸರಿ ಎಂದರು. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. […]

ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ

Monday, July 26th, 2021
BS Yediyurappa

ಬೆಂಗಳೂರು: ಸರ್ಕಾರ ಎರಡು ವರ್ಷ ಪೂರೈಸುತ್ತಿದ್ದಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಬಿ ಎಸ್ ಯಡಿಯೂರಪ್ಪ ಕಾರಿನಲ್ಲಿ ತೆರಳಿದರು. ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ […]

ನಗರ ಪ್ರದಕ್ಷಿಣೆಯಲ್ಲಿ ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದ ಸಚಿವ ಅಶೋಕ

Friday, July 23rd, 2021
R Ashoka

ಬೆಂಗಳೂರು : ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಗಳು ಮತ್ತು ಟೆಂಡರ್ ಶ್ಯೂರ್ ಕಾಮಗಾರಿಗಳನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕಂದಾಯ ಸಚಿವ ಆರ್ ಅಶೋಕ ಕೂಡಾ ಸಾಥ್ ನೀಡಿದರು. ಈ ವೇಳೆ ನಗರದ ವಿವಿಧ ಪ್ರಮುಖ ಜಂಕ್ಷನ್‍ ಗಳಲ್ಲಿ ಥೀಮ್ ಆಧಾರಿತ ಯೋಜನೆಗಳನ್ನ ಅಭಿವೃದ್ಧಿ ಪಡಿಸುವ ಕುರಿತಂತೆ ಘೋಷಣೆ ಮಾಡಲಾಯಿತು. ಇದರ ಮೊದಲ ಭಾಗವಾಗಿ ವಿಂಡ್ಸರ್ ಮ್ಯಾನರ್ ಜಂಕ್ಷನ್ ನಲ್ಲಿ ನಿರ್ಮಿಸಲಾದ ಮೇಕ್ ಇನ್ ಇಂಡಿಯಾ ಸಿಂಹದ ಲಾಂಛನವನ್ನ ಇದೇ ಫೆಬ್ರವರಿ 27ರಂದು […]

ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ವೀಡಿಯೊ ಸಂವಾದ

Tuesday, July 20th, 2021
DC meet

ಬೆಂಗಳೂರು : ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವೀಡಿಯೊ ಸಂವಾದ ನಡೆಸಿದರು. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂಡಿಗೆ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವೀಡಿಯೊ ಸಂವಾದ ನಡೆಸಿದರು. ಸಭೆಯ ಮುಖ್ಯಾಂಶಗಳು: 1. ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ […]

ಚುನಾವಣೆಗಳು ಯುವ ಮುಖಂಡರಿಗೆ ಪರೀಕ್ಷೆಗಳಿದ್ದಂತೆ: ಆರ್ ಅಶೋಕ್

Sunday, July 18th, 2021
R Ashoka

ಬೆಂಗಳೂರು :  ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಶ್ರೀ ಆರ್ ಅಶೋಕ, ಸಿಎಂ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು. “ಆಮ್ಲಜನಕಯುಕ್ತ ಹಾಸಿಗೆಗಳನ್ನು ಹೆಚ್ಚಿಸುವುದು, ವೈದ್ಯರಿಗೆ ತರಬೇತಿ ನೀಡುವುದು ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ವೈದ್ಯರನ್ನು ಗುರುತಿಸುವುದು ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮಳೆಗಾಲದಲ್ಲಿ ನೀರು ತುಂಬುವ ತಗ್ಗು ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಕ್ರಿಯಾ ಯೋಜನೆ […]

ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Friday, July 16th, 2021
CM Delhi

ನವ ದೆಹಲಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರುಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ […]

ನಿಗದಿತ ಕಾಲಮಿತಿಯೊಳಗೆ ಜಲಜೀವನ್ ಮಿಷನ್ ಪೂರ್ಣಗೊಳಿಸಲು ಕೇಂದ್ರ ಸಚಿವರ ಸಲಹೆ

Tuesday, July 13th, 2021
Jala jeevan

ಬೆಂಗಳೂರು : ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿದರು. ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೇ ಪೂರ್ಣಗೊಳಿಸುವಂತೆ ಕೇಂದ್ರ ಸಚಿವರು ಸಲಹೆ ನೀಡಿದರು. ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ 18.93 ಕೋಟಿ ಗ್ರಾಮೀಣ ಮನೆಗಳ್ಲಲಿ 15.70 ಕೋಟಿ ಮನೆಗಳಿಗೆ […]

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಅನುಮೋದನೆ

Tuesday, July 13th, 2021
Basavakalyana

ಬೆಂಗಳೂರು  : ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ 2021-22 ನೇ ಸಾಲಿನ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ  ಸಭೆ ನಡೆಸಿ ಸೋಮವಾರ ಚಾಲನೆ ನೀಡಲಾಯಿತು. ಮಂಡಳಿ ವತಿಯಿಂದ ಕೈಗೊಳ್ಳಲಾಗಿರುವ 134 ಕಾಮಗಾರಿಗಳ ಪೈಕಿ ಈವರೆಗೆ 76 ಕಾಮಗಾರಿಗಳು ಪೂರ್ಣಗೊಂಡಿದ್ದು, 58 ಕಾಮಗಾರಿಗಳು ಬಾಕಿ ಇರುತ್ತವೆ. ಒಟ್ಟು 500 ಕೋಟಿ ರೂ ವೆಚ್ಚದ ಅನುಭವ ಮಂಟಪ ಯೋಜನೆಗೆ ಸರ್ಕಾರ 200 ಕೋಟಿ ರೂ ಹಂಚಿಕೆ ಮಾಡಿದೆ. 101 ಎಕರೆ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಹನ್ನೊಂದು […]