Blog Archive

ಸಿಎಂ ವಿರುದ್ಧ ಹೇಳಿಕೆ ನೀಡಿದರೆ ಶಿಸ್ತು ಕ್ರಮ: ಆರ್ ಅಶೋಕ

Monday, June 7th, 2021
R Ashoka

ಬೆಂಗಳೂರು  : ನಿಸ್ಸಂಶಯವಾಗಿ ಬಿ ಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರ ಬದಲಾವಣೆ ಕೇವಲ ಊಹಾಪೋಹ. ಈ ವಿಚಾರ ಮುಗಿದು ಹೋಗಿದ್ದು, ಪಕ್ಷದ ನಾಯಕರು ಸಿಎಂ ಬದಲಾವಣೆ ಕುರಿತಂತೆ ಹೇಳಿಕೆಗಳನ್ನ ನೀಡಿದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ ಎಚ್ಚರಿಸಿದರು. ಈ ಕುರಿತಂತೆ ಮಾಹಿತಿ ನೀಡಿದ ಆರ್ ಅಶೋಕ,”ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನ ರಚಿಸಿದ್ದು, ಮುಖ್ಯಮಂತ್ರಿಗಳು, ಪ್ರಧಾನ ಕಾರ್ಯದರ್ಶಿ ಹಾಗೂ ಮೂವರು […]

ಮುಖ್ಯಮಂತ್ರಿಗಳಿಂದ ಮಳೆ ವಿಕೋಪ ತಡೆಯಲು ಪೂರ್ವ ಸಿದ್ದತೆಗಳ ಪರಿಶೀಲನೆ

Thursday, June 3rd, 2021
Rain

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿ 209 ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರ ರೂಪಿಸಲು ನಿರ್ದೇಶನ ನೀಡಿದರು. ಎಂಡು ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಣತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿದ್ದು, ಅನ್ – ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು ಮತ್ತು ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗೆ […]

ಜೂನ್ 7ರ ಬಳಿಕ ಲಾಕ್ಡೌನ್ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು ಗೊತ್ತಾ ?

Sunday, May 30th, 2021
yedyurappa

ಬೆಂಗಳೂರು : ಕರ್ನಾಟಕದಲ್ಲಿ ಲಾಕ್ಡೌನ್ ಅನ್ನು ಮುಂದುವರೆಸುವ ಬಗ್ಗೆ ಮತ್ತೆ ಚರ್ಚೆಗಳು ನಡೆಯುತ್ತಿದ್ದು, ಲಾಕ್ಡೌನ್ ವಿಸ್ತರಣೆ ಬಗ್ಗೆ ಜೂನ್ 5 ಅಥವಾ 6ರಂದು ನಿರ್ಧಾರ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಕೇಂದ್ರ ಗೃಹ ಇಲಾಖೆ ಕೂಡ ಜೂನ್ 30ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿ ಅಂತ ಸಲಹೆ ಕೊಟ್ಟಿದೆ. ಲಾಕ್ ಡೌನ್ ವಿಸ್ತರಣೆ ಮಾಡೋದು ಜನರ ಮೇಲೆ ನಿಂತಿದೆ. ಕೇಂದ್ರದ ಮಾರ್ಗಸೂಚಿ, ಮತ್ತು ರಾಜ್ಯದ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ತೀರ್ಮಾನ […]

ಸೋಂಕಿನ ಪ್ರಮಾಣ ಇಳಿಸಲು ಗ್ರಾ.ಪಂ. ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಿ : ಸಿಎಂ

Friday, May 28th, 2021
Tumkuru Covid

ಬೆಂಗಳೂರು / ತುಮಕೂರು : ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವ್ ಪ್ರಮಾಣದ ಇಳಿಕೆಗೂ ಸೂಚನೆ ನೀಡಿದರು. ಕೋವಿಡ್ 19 ಎರಡನೇ ಅಲೆ ರಾಜ್ಯವನ್ನು ತೀವ್ರವಾಗಿ ಬಾಧಿಸಿದೆ. ಬೆಂಗಳೂರಿನ ನೆರೆಯ ಜಿಲ್ಲೆಯಾದ […]

ಬಡವರು, ಕಾರ್ಮಿಕರಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

Thursday, May 27th, 2021
street-vendors

ಬೆಂಗಳೂರು : ಬೀದಿ ಬದಿ ವ್ಯಾಪಾರಿಗಳಿಗೆ, ಮೆಟ್ರೋ ನಿರ್ಮಾಣ ಕಾರ್ಮಿಕರಿಗೆ ಮತ್ತು ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರದ ವಿವಿಧ ಭಾಗಗಳಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,”ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚಿನ ಜನ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸೋಂಕಿನ ವಿರುದ್ಧದ ಹೋರಾಟವನ್ನ ಮತ್ತಷ್ಟು ಪರಿಣಾಮಕಾರಿಯಾಗಿಸಲು ಲಸಿಕೆ ನೀಡುವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಮುಂಚೂಣಿಯ ಕಾರ್ಯಕರ್ತರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. […]

ಕೋವಿಡ್ ಟೆಸ್ಟಿಂಗ್ ಮೊಬೈಲ್ ಕ್ಲಿನಿಕ್‌ ವೀಕ್ಷಿಸಿದ ಮುಖ್ಯಮಂತ್ರಿ

Thursday, May 27th, 2021
mobile-clinic

ಬೆಂಗಳೂರು : ಪ್ರೆಸಿಡೆಂಟ್ 20-21 ರೋಟರಿ ಹೈಗ್ರೌಂಡ್ಸ್, ಬೆಂಗಳೂರು ಹಾಗೂ ಮೆ: ಸಾಯಿಕಾರ್ಪ್ ಪ್ರೈ.ಲಿ. ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಅಭಿವೃದ್ಧಿ ಪಡಿಸಿರುವ ಕೋವಿಡ್ ಟೆಸ್ಟಿಂಗ್ ಮೊಬೈಲ್ ಕ್ಲಿನಿಕ್‍ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವೀಕ್ಷಿಸಿದರು. ರೋಟರಿ ಸಂಸ್ಥೆಯ ಜಿಲ್ಲಾ ರಾಜ್ಯಪಾಲ ನಾಗೇಂದ್ರ ಪ್ರಸಾದ್, ನಿಕಟಪೂರ್ವ ರಾಜ್ಯಪಾಲ ಕೆ.ಪಿ ನಾಗೇಶ್, ಟಾಟಾ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಗಿರೀಶ್ ಕೃಷ್ಣಮೂರ್ತಿ ಉಪಸ್ಥಿತರಿದ್ದರು. ನೆಹರು ಪುಣ್ಯ ತಿಥಿ : ಮಾಜಿ ಪ್ರಧಾನಿ ದಿ.ಪಂಡಿತ್ ಜವಾಹರಲಾಲ್ ನೆಹರು ಅವರ […]

ಸಿ ಎಸ್ ಆರ್ ಸೌಲಭ್ಯದ ಸಮಗ್ರ ಆನ್ ಲೈನ್ ವೇದಿಕೆ ‘ಆಕಾಂಕ್ಷಾ’ ಪೋರ್ಟಲ್ ಗೆ ಚಾಲನೆ

Wednesday, May 26th, 2021
Yedyurappa

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿ ಎಸ್ ಆರ್ ಸೌಲಭ್ಯದ ಸಮಗ್ರ ಆನ್ ಲೈನ್ ವೇದಿಕೆ ‘ಆಕಾಂಕ್ಷಾ’ ಪೋರ್ಟಲ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯಮಟ್ಟದಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಯೋಜನೆಗಳನ್ನು ಸುಗಮವಾಗಿ ಮುಂದುವರೆಸಲು ಸರ್ಕಾರ ಮತ್ತು ದಾನಿಗಳ ನಡುವೆ ಒಂದು ಪಾರದರ್ಶಕ ಸೇತುವೆಯಾಗಿ ಈ ಪೋರ್ಟಲ್ ಕಾರ್ಯನಿರ್ವಹಿಸಲಿದೆ. ಇದರಿಂದ ಸಿ ಎಸ್ ಆರ್ ಅನುದಾನವನ್ನು ನಿಜಕ್ಕೂ ಅಗತ್ಯವಿರುವ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು. ಕೋವಿಡ್ ನಿಯಂತ್ರಣ […]

ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್ : ಮುಖ್ಯಮಂತ್ರಿ ಘೋಷಣೆ

Wednesday, May 26th, 2021
Yedyurappa

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಅವರು ಇಂದು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಈ ಘೋಷಣೆ ಮಾಡಿದರು. ಕೋವಿಡ್ […]

ಸಂಪುಟ ಸಹೋದ್ಯೋಗಿಗಳ ಜೊತೆ ಸಿಎಂ ಮೆಟ್ರೋ ಕಾಮಗಾರಿ ಪರಿಶೀಲನೆ

Wednesday, May 26th, 2021
metro

ಬೆಂಗಳೂರು : ಟ್ರಾಫಿಕ್ ಸಮಸ್ಯೆ ದೂರ ಮಾಡುವ ನಿಟ್ಟಿನಲ್ಲಿ ನಗರದಲ್ಲಿ ಮತ್ತೊಂದು ಮೆಟ್ರೋ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಲಭ್ಯವಾಗಲಿದ್ದು, ಆ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾಮಗಾರಿಯ ಪರಿಶೀಲನೆ ನಡೆಸಿದರು. ಇಂದು ಸಂಪುಟದ ಸಹೋದ್ಯೋಗಿಗಳ ಜೊತೆಗೆ ಹಂತ 2ರ ರೀಚ್ 2 ಮೈಸೂರು ರಸ್ತೆಯ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ ನೂತನ ಮಾರ್ಗದ ಕಾಮಗಾರಿಯನ್ನ ಪರಿವೀಕ್ಷಣೆ ಮಾಡಿದರು. ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಖುದ್ದು ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸಿದ ಮುಖ್ಯಮಂತ್ರಿಗಳು ಕೆಂಗೇರಿ […]

ಲಾಕ್ಡೌನ್ ಕಟ್ಟು ನಿಟ್ಟಾಗಿ ಜಾರಿಗೆ ಪೊಲೀಸರಿಗೆ ಸೂಚನೆ

Saturday, May 22nd, 2021
Bommai

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯದಲ್ಲಿ ವಿಸ್ತರಣೆ ಯಾಗಿರುವ ಲಾಕ್‍ಡೌನ್‍ನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೋಲಿಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿಗಳು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ 3- 4 ದಿನಗಳ ಕಾಲ ನಿರಂತರವಾಗಿ ಲಾಕ್ಡೌನ್ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ […]