Blog Archive

ಬಿಎಸ್‍ವೈ- ಜನಾರ್ದನ ರೆಡ್ಡಿ ನಡುವಿನ ಬಾಂಧವ್ಯ ವೃದ್ಧಿಗೆ ಶ್ರೀರಾಮುಲು ಯತ್ನ

Wednesday, April 4th, 2018
shri-ramoolu

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಇಂದು ಸಂಸದ ಶ್ರೀರಾಮುಲು ವಿಶೇಷ ಮಾತುಕತೆ ನಡೆಸುವ ಸಾಧ್ಯತೆ ಇದೆ. ಜನಾರ್ದನ ರೆಡ್ಡಿ ರಾಜಕೀಯ ಮರುಪ್ರವೇಶದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲೇ ಬೇಕಿರುವ ಸಂದರ್ಭದಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಬಿಜೆಪಿಗೂ, ಜನಾರ್ದನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಡಿರುವ ಮಾತಿನ ಕುರಿತು ಕೂಡ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಭೆ ಎಲ್ಲಿ, ಯಾವ ಸಮಯಕ್ಕೆ ನಡೆಯಲಿದೆ ಎನ್ನುವ ಮಾಹಿತಿ […]

ಅವ್ರು ಕೊನೆಗೂ ನಿಜ ಹೇಳಿದ್ದಾರೆ: ಶಾ ಯಡವಟ್ಟು ಕೈ ನಾಯಕರಿಗೆ ವರಪ್ರಸಾದ!

Tuesday, March 27th, 2018
rahul-gandhi

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಷಣ ಸಂದರ್ಭ ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನುವ ಬದಲು ಬಿ.ಎಸ್. ಯಡಿಯೂರಪ್ಪ ಸರ್ಕಾರ ಅತ್ಯಂತ ಭ್ರಷ್ಟ ಎಂದು ಹೇಳಿ ಮಾಡಿಕೊಂಡಿರುವ ಯಡವಟ್ಟು, ಕಾಂಗ್ರೆಸ್ ನಾಯಕರಿಗೆ ವರವಾಗಿ ಲಭಿಸಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅಮಿತ್ ಶಾ ಸುದ್ದಿಗೋಷ್ಟಿಯಲ್ಲಿ ನೀಡಿದ ಹೇಳಿಕೆ ಇದೀಗ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಅಸ್ತ್ರವಾದಂತಾಗಿದೆ. ಬಿ.ಎಸ್. ಯಡಿಯೂರಪ್ಪ ಭ್ರಷ್ಟಾಚಾರಿ […]

ಸುರಕ್ಷಾ ಯಾತ್ರೆ ಬಳಿಕ ಟಿಕೆಟ್‌ ಆಕಾಂಕ್ಷಿಗಳ ಮನವೊಲಿಕೆ

Saturday, March 3rd, 2018
bjp-rally

ಮಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಪ್ರತಿಯೊಂದು ಕ್ಷೇತ್ರದಲ್ಲೂ ನಮ್ಮ ಪಕ್ಷದ ಬಹಳಷ್ಟು ಟಿಕೆಟ್‌ ಆಕಾಂಕ್ಷಿಗಳಿರುವ ಕಾರಣ “ಸುರಕ್ಷಾ ಯಾತ್ರೆ’ ಮುಗಿದ ಕೂಡಲೇ ಎಲ್ಲ ಆಕಾಂಕ್ಷಿಗಳನ್ನು ಕರೆದು ಮನವೊಲಿಸುವ ಕಾರ್ಯ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿರುವ ಕಾರಣ ಪಕ್ಷದೊಳಗೆ ಈಗ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್‌ ಆಕಾಂಕ್ಷಿಗಳಿರುವುದು ಸಹಜ. ಇದನ್ನು ನಾವು ಸ್ವಾಗತಿಸುತ್ತೇವೆ. ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಒಬ್ಬರನ್ನಷ್ಟೇ ಅಧಿಕೃತ ಅಭ್ಯರ್ಥಿಯನ್ನಾಗಿ […]

ದೀಪಕ್‌ ರಾವ್‌ ಮನೆಗೆ ಅಮಿತ್‌ ಶಾ , ಬಿ.ಎಸ್. ಯಡಿಯೂರಪ್ಪ ಭೇಟಿ, ಸಾಂತ್ವನ

Wednesday, February 21st, 2018
deepak-rao

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಅಮಿತ್‌ ಶಾ ಅವರ ಭೇಟಿ ವೇಳೆ ಪಕ್ಷದ ಉತ್ತರ ಬ್ಲಾಕ್ ಸಮಿತಿ ಈಗಾಗಲೇ ಸಂಗ್ರಹಿಸಿದ್ದ 10 ಲಕ್ಷ ರೂ.ಗಳನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಉತ್ತರ ಬ್ಲಾಕ್ ಅಧ್ಯಕ್ಷ ಭರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಶತಸಿದ್ಧ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

Tuesday, February 20th, 2018
yedeyorappa

ಮಂಗಳೂರು: ಪರಿವರ್ತನಾ ಯಾತ್ರೆಯ ಮೂಲಕ‌ ರಾಜ್ಯದ‌ ಉದ್ದಗಲಕ್ಕೆ ಪ್ರವಾಸ ಮಾಡಿದ್ದೇನೆ. ಆಯಾ ಭಾಗದ ಜ್ವಲಂತ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಸ್ಥಳೀಯ ಜನರ ಆಶಯಗಳನ್ನು‌ ಆಲಿಸಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು. ಬಂಟ್ವಾಳದಲ್ಲಿ‌ ನವಶಕ್ತಿ ಸಮಾವೇಶದಲ್ಲಿ ಅವರು ಮಾತನಾಡಿದರು. ವಿಧಾನಸಭಾ ಕ್ಷೇತ್ರದ ಬೂತ್ ಗಳನ್ನು ಬಲಪಡಿಸಬೇಕು. ಬೂತ್ ಮಟ್ಟದಲ್ಲಿ ಶೇ 60ರಷ್ಟು ಮತ ಪಡೆಯುವಲ್ಲಿ ಯಶಸ್ವಿಯಾಗಬೇಕು.‌‌ ಕಾಂಗ್ರೆಸ್ ನವರು‌ ಎಷ್ಟೇ ಪ್ರಬಲರಾಗಿದ್ದರೂ ತಲೆ ಕೆಡಿಸಿಕೊಳ್ಳಬೇಡಿ. ಬೂತ್ ಗಳನ್ನು ಬಲಪಡಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ಕರ್ನಾಟಕ‌‌ದಲ್ಲಿ ಮಾತ್ರ ಅಧಿಕಾರದಲ್ಲಿದೆ.‌ ಮೂರುವರೆ ವರ್ಷದಲ್ಲಿ […]

ಸುಕುಮಾರ ಶೆಟ್ಟರಿಗೆ ಸಂಕಟ

Wednesday, January 3rd, 2018
sukumar-shetty

ಉಡುಪಿ: ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರ ಆಗಮನ ಬೈಂದೂರು ವಿಧಾನಸಭಾ ಕ್ಷೇತ್ರದ ರಾಜಕೀಯ ರಂಗೇರಲು ಕಾರಣವಾಗಿದೆ. ಟಿಕೆಟ್‌ ಯಾರಿಗೆ ಎಂಬ ಪ್ರಶ್ನೆ ಉದ್ಭವಿಸಿರುವುದರಿಂದ ಈ ಕ್ಷೇತ್ರ ಕುತೂಹಲದ ಕೇಂದ್ರವಾಗಿದೆ. ಕಳೆದ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಬಿಜೆಪಿ ಮುಖಂಡ ಬಿ.ಎಂ. ಸುಕುಮಾರ ಶೆಟ್ಟಿ ಅವರು ಈ ಬಾರಿ ಗೆಲ್ಲಲು ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಟಿಕೆಟ್ ಸಹ ಅವರಿಗೇ ಸಿಗುವ ನಿರೀಕ್ಷೆ ಇದೆ. ಆದರೆ, ಹಿರಿಯ ರಾಜಕಾರಣಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸಹ ಇದೇ […]

ಮಹದಾಯಿ: ಬಂದ್‍ಗೆ ಕರೆ ಕೊಟ್ಟಿರುವುದು ಏಕೆಂದು ಗೊತ್ತಿಲ್ಲ?

Monday, December 25th, 2017
sadananda

ಪುತ್ತೂರು: ‘ಮಹದಾಯಿ ವಿಚಾರದಲ್ಲಿ ಸಿದ್ಧರಿಲ್ಲದವರನ್ನು ಇಂದು ಸಿದ್ಧಗೊಳಿಸುವ ಕೆಲಸ ಆಗಿದೆ. ಇದು ದೊಡ್ಡ ಪರಿವರ್ತನೆ. ಮನೋಹರ್ ಪರಿಕ್ಕರ್ ಅವರ ಸೂತ್ರವನ್ನು ಮಹಾದಾಯಿ ಹೋರಾಟಗಾರರು ಕೂಡ ಒಪ್ಪಿದ್ದಾರೆ. ಹೀಗಿದ್ದರೂ ಇದೇ 27ರಂದು ಬಂದ್‍ಗೆ ಕರೆ ಕೊಟ್ಟಿರುವುದು ಏಕೆಂದು ಗೊತ್ತಿಲ್ಲ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು. ‘ಮಹಾದಾಯಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ. ಸಂಧಾನ ಮಾತುಕತೆ ನಡೆಸಿ ಎಂದು ಸಚಿವರಾದ ಎಂ.ಬಿ. ಪಾಟೀಲ್, ಎಚ್.ಕೆ. ಪಾಟೀಲ್ ಅವರಂಥವರೇ ಹಿಂದೆ ಹೇಳಿದ್ದರು. ಈಗ ಬಿ.ಎಸ್. ಯಡಿಯೂರಪ್ಪ ಅದೇ ಕೆಲಸ […]

ಕಾವೇರಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ತರ್ಕಹೀನ ಮತ್ತು ಅವೈಜ್ಞಾನಿಕ: ಬಿಎಸ್‌ವೈ

Tuesday, September 13th, 2016
b-s-yeddyurappa

ಬೆಂಗಳೂರು: ಕಾವೇರಿ ನದಿ ನೀರು ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ತರ್ಕಹೀನ ಮತ್ತು ಅವೈಜ್ಞಾನಿಕ. ತೀರ್ಪಿನಿಂದ ಕರ್ನಾಟಕ ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದು, ತೀರ್ಪು ಅರ್ಥವಾಗದ ಸಂಗತಿಯಾಗಿದೆ ಎಂದು ಪ್ರಕಟಣೆಯಲ್ಲಿ ಯಡಿಯೂರಪ್ಪ ತಿಳಿಸಿದ್ದಾರೆ. ಎರಡೂ ರಾಜ್ಯಗಳ ವಸ್ತು ಸ್ಥಿತಿ ಅರಿಯಲು ತಜ್ಞರ ತಂಡ ಕಳುಹಿಸಬೇಕಿತ್ತು. ಅದ್ಯಾವುದನ್ನೂ ಮಾಡದೆ ತೀರ್ಪು ನೀಡಿರುವುದು ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಆದ್ಯ ಕ್ರಮ ಕೈಗೊಳ್ಳಬೇಕು. ಕನ್ನಡಿಗರು […]

ಕಟೀಲು ದೇವರನ್ನು ಅವಹೇಳನ ಮಾಡುವ ಮೂಲಕ ಕೋಮುವಾದ ಹಾಗೂ ಭಯೋತ್ಪಾದನೆ ಬಿತ್ತುವ ಕೆಲಸವಾಗುತ್ತಿದೆ: ಬಿ. ಎಸ್. ಯಡಿಯೂರಪ್ಪ

Tuesday, September 6th, 2016
B-S-Yeddyurappa

ಮಂಗಳೂರು: ಕಟೀಲು ದೇವರನ್ನು ಅವಹೇಳನ ಮಾಡುವ ಮೂಲಕ ಕೋಮುವಾದ ಹಾಗೂ ಭಯೋತ್ಪಾದನೆ ಬಿತ್ತುವ ಕೆಲಸವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು. ಇಂದು ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಹಿಂದೂ ನಾಯಕರ ಹತ್ಯೆಯಾಗುತ್ತಿದೆ. ಹಿಂದೂ ದೇವರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ಇಷ್ಟಾದರೂ ಸರ್ಕಾರ ತಪ್ಪಿತಸ್ಥರ ಮೇಲೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಕಟೀಲು ದೇವಿಯ ಬಗ್ಗೆ […]

ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಕೋರ್‌ ಕಮಿಟಿ ಸಭೆಯಲ್ಲಿ ಚರ್ಚಿಸಿ ಪರಿಹರಿಸಲು ಪ್ರಯತ್ನಿಸಲಾಗುವುದು: ಡಿ.ವಿ.ಎಸ್

Tuesday, August 23rd, 2016
Sadananda-gouda

ಮಂಗಳೂರು: ಭಾರತೀಯ ಜನತಾ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಮಂಗಳವಾರ ದಿಲ್ಲಿಯಲ್ಲಿ ನಡೆಯುವ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚಿಸಿ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ಅವರು ಸೋಮವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಪಕ್ಷದ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲ ನಾಯಕರು ಒಟ್ಟಾಗಿ ಶ್ರಮಿಸಲಿದ್ದಾರೆ ಎಂದರು. ಪಕ್ಷದೊಳಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರುವುದು ನಿಜ. ಆಗಸ್ಟ್‌ 23ರಂದು ದಿಲ್ಲಿಯಲ್ಲಿ ನಡೆಯುವ ಪಕ್ಷದ ಕೋರ್‌ ಕಮಿಟಿ […]