Blog Archive

ಸಿಎಂ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

Tuesday, March 29th, 2011
ಸಿಎಂ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕುಟುಂಬ ವರ್ಗದ ವಿರುದ್ಧದ ಭೂ ಹಗರಣದ ಕುರಿತಂತೆ ಲೋಕಾಯುಕ್ತ ಕೋರ್ಟ್ ಆದೇಶಕ್ಕೆ ತಡೆ ನೀಡಬೇಕೆಂದು ಕೋರಿ ಸಿಎಂ ಅಳಿಯ ಸೋಹನ್ ಕುಮಾರ್ ಸೋಮವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, […]

ಲೋಕಾಯುಕ್ತ ಪೊಲೀಸರಿಂದ ಸಿ.ಎಂ. ಕುಟುಂಬದ ಭೂ ಹಗರಣ ತನಿಖೆ ಆರಂಭ

Thursday, March 24th, 2011
ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೂಹಗರಣಗಳ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಪೊಲೀಸರಿಗೆ ಗುರುವಾರ ಮಹತ್ವದ ಆದೇಶ ನೀಡಿದೆ. ವಕೀಲ ಸಿರಾಜುದ್ದೀನ್ ಬಾಷಾ ಮುಖ್ಯಮಂತ್ರಿ ಹಾಗೂ ಅವರ ಕುಟುಂಬ ಸದಸ್ಯರ ಭೂ ಹಗರಣಗಳ ವಿರುದ್ಧ ಸಲ್ಲಿಸಿರುವ ಮೊದಲ ದೂರಿನ ಆಧಾರದ ಮೇಲೆ 23ನೇ ಅಧೀನ ಕೋರ್ಟ್‌ನ ನ್ಯಾಯಾಧೀಶ ಸಿ.ಬಿ.ಹಿಪ್ಪರಗಿ ಮಾ.24ಕ್ಕೆ ಆದೇಶ ನೀಡುವುದಾಗಿ ತಿಳಿಸಿದ್ದರು. ಸಿಎಂ ಕುಟುಂಬದ ಭೂ ಹಗರಣಗಳ ಮೊದಲ ದೂರಿನ ವಿಚಾರಣೆ ಪೂರ್ಣಗೊಳಿಸಿದ ನಂತರ ಈ ತೀರ್ಪು ನೀಡಿದ ನ್ಯಾಯಾಧೀಶರು, […]

77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯ ಮಂತ್ರಿಗಳಿಂದ ಚಾಲನೆ

Saturday, February 5th, 2011
77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು : 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮ್ಮೇಳನಾಧ್ಯಕ್ಷ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಪ್ರಭು ಕೆಂಪೇಗೌಡ ಮಹಾಮಂಟಪದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು. ಶುಕ್ರವಾರದಿಂದ ಮೂರು ದಿನಗಳ ಕಾಲ ಉದ್ಯಾನಗರಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ  ನಡೆಯಲಿದೆ. ನಾಡಗೀತೆಯೊಂದಿಗೆ ಆರಂಭವಾದ ಸಾಹಿತ್ಯ ಜಾತ್ರೆಗೆ ಚಾಲನೆ ನೀಡಿದ ಬಳಿಕ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಾಲ್ಕು ದಶಕಗಳ ನಂತರ ಈ ನಾಡ ಹಬ್ಬವನ್ನು ಬೆಂಗಳೂರಿನಲ್ಲಿ ಆಚರಿಸಲಾಗುತ್ತಿರುವುದು ನಿಜಕ್ಕೂ ಸಂತಸದ […]

ಫೆಬ್ರುವರಿ 24ರಂದು ರಾಜ್ಯದ ಮುಂಗಡ ಪತ್ರ ಮಂಡನೆ

Thursday, February 3rd, 2011
VS Acharya

ಬೆಂಗಳೂರು : ಇಂದು ನಡೆದ  ಸಚಿವ ಸಂಪುಟದ ಸಭೆಯಲ್ಲಿ ಪ್ರಸಕ್ತ ಸಾಲಿನ ಮುಂಗಡ ಪತ್ರ ಮಂಡನೆಯ ಬಗ್ಗೆ ಚರ್ಚೆ ನಡೆದಿದ್ದು, ಅದರಂತೆ ಫೆಬ್ರುವರಿ 24ರ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಲಿದ್ದಾರೆ ಎಂದು ಸಚಿವ ವಿ.ಎಸ್.ಆಚಾರ್ಯ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ,  15 ದಿನಗಳ ಕಾಲ ಬಜೆಟ್ ಅಧಿವೇಶನ ನಡೆಯಲಿದೆ.  ಲೋಕಾಯುಕ್ತ ಸಿಬ್ಬಂದಿ ವೇತನ ಶೇ.10ರಷ್ಟು ಏರಿಕೆ, ರಾಜ್ಯದಲ್ಲಿರುವ ಸುಮಾರು 1.5 ಲಕ್ಷ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ನಿರ್ಧರಿಸಲಾಗಿದೆ ಎಂದರು. ಗಡಿನಾಡ ಅಭಿವೃದ್ಧಿಗೆ […]

ಬಿ.ಎಸ್.ಯಡಿಯೂರಪ್ಪ ಉತ್ತರ ಸಮಾಧಾನ ತಂದಿಲ್ಲ : ಹಂಸರಾಜ್

Monday, December 20th, 2010
ರಾಜ್ಯಪಾಲ ಹಂಸರಾಜ್ ಮತ್ತು ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ರಾಜ್ಯಪಾಲರು ಅಕ್ರಮ ಗಣಿಗಾರಿಕೆ ಮತ್ತು ಭೂ ಹಗರಣದ ಕುರಿತು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಉತ್ತರ ಸಮಾಧಾನ ತಂದಿಲ್ಲ. ಹಾಗಾಗಿ ಸ್ಪಷ್ಟ ಉತ್ತರಕ್ಕಾಗಿ ಮತ್ತೆ ಪತ್ರ ಬರೆಯುವುದಾಗಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದ್ದಾರೆ. ಒಂದೆಡೆ ಅಕ್ರಮ ಗಣಿಗಾರಿಕೆ ನಡೆದಿಲ್ಲ ಅಂತಾರೆ. ಆದರೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೋಟಿ, ಕೋಟಿ ಲೂಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳುತ್ತಾರೆ. ಆ ನಿಟ್ಟಿನಲ್ಲಿ ನಾನು ರಾಜ್ಯದ ರಾಜ್ಯಪಾಲನಾಗಿ ಉತ್ಸವ ಮೂರ್ತಿಯಂತಿರಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ನಾನು ಕರ್ತವ್ಯ […]

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ

Monday, October 18th, 2010
ಮೈಸೂರು ದಸರಾ

ಮೈಸೂರು : 400 ವರ್ಷಗಳ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ  ಭಾನುವಾರ ಮಧ್ಯಾಹ್ನ 1.45 ಕ್ಕೆ  ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು .  750 ಕಿ.ಗ್ರಾಂ. ತೂಕದ ಬಂಗಾರದ ಅಂಬಾರಿಯಲ್ಲಿದ್ದ ದೇವಿ ಚಾಮುಂಡೇಶ್ವರಿಗೆ ಹಸಿರು ಶಾಲು ಹೊದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಪುಷ್ಪ ಸಮರ್ಪಣೆ ಮಾಡಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಅಂಬಾರಿ ಹೊತ್ತಿದ್ದ ಬಲರಾಮ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಬಲರಾಮನ ಹಿಂದೆ ಸುಂದರವಾಗಿ ಅಲಂಕೃತಗೊಂಡ ಆನೆಗಳು ಜಂಬೂ ಸವಾರಿಯಲ್ಲಿ […]

ಬಿಕ್ಷುಕರ ಕೊಲೋನಿಗೆ ಭೇಟಿ ನೀಡಿದ ಬಿ.ಎಸ್. ಯಡಿಯೂರಪ್ಪ

Saturday, August 21st, 2010
ಬಿಕ್ಷುಕರ ಕೊಲೋನಿಗೆ ಭೇಟಿ ನೀಡಿದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆಗಿರುವ ಆವಾಂತರಕ್ಕೆ ಇಂದು ಬೆಳಿಗ್ಗೆ 9.30ರ ಹೊತ್ತಿಗೆ ಬಿಕ್ಷುಕರ ಕಾಲೊನಿಗೆ ಭೇಟಿ ನೀಡಿ ವಿಷಾದಿಸಿದ್ದಾರೆ. ಸಮಾಜ ಕಲ್ಯಾಣ ಸಚಿವರಾಗಿದ್ದ ಡಿ. ಸುಧಾಕರ್ ಅವರನ್ನು ಎತ್ತಂಗಡಿ ಮಾಡಿದ ನಂತರ ಬಿಕ್ಷುಕರ ಕಾಲೊನಿಗೆ ಭೇಟಿ ನೀಡಿರುವ  ಅವರು ಶೌಚಾಲಯ, ಆಹಾರ ಪೂರೈಕೆ ವ್ಯವಸ್ಥೆ, ಅದರ ಗುಣಮಟ್ಟ, ಭೋಜನಾಲಯ ಮುಂತಾದ ಎಲ್ಲಾ ವಿಭಾಗಗಳನ್ನೂ ಖುದ್ದಾಗಿ ಪರಿಶೀಲನೆ ನಡೆಸಿದರು. ನಿರಾಶ್ರಿತರ ಕೇಂದ್ರದ ಪ್ರತಿಯೊಂದು ಕೊಠಡಿಗೂ ಪ್ರವೇಶಿಸಿ ಪರಿಶೀಲನೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ  ಯಡಿಯೂರಪ್ಪ, ಇಲ್ಲಿ […]