Blog Archive

ಮುಸ್ಲಿಮರಲ್ಲಿ ಹೆಚ್ಚಿನವರು ಎಸ್.ಡಿ.ಪಿ.ಐ ನವರು ಅವರನ್ನು ನಂಬಲು ಸಾದ್ಯವಿಲ್ಲ: ಕವಿತಾ ಸನಿಲ್

Friday, March 23rd, 2018
kavita-sanil

ಮಂಗಳೂರು: ಕರಾವಳಿಯಲ್ಲಿ ವಿಧಾನಸಭಾ ಚುನಾವಣಾ ಅಖಾಡಾ ರಂಗೇರುತ್ತಿದೆ. ಕರಾವಳಿಯಲ್ಲಿ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಪ್ರವಾಸ ಕರಾವಳಿ ಕೈ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಆದರೆ ಈ ನಡುವೆ ಕರಾವಳಿಯ ಕಾಂಗ್ರೆಸ್ ಮುಖಂಡರು ಒಂದರ ಮೇಲೊಂದು ಎಡವಟ್ಟುಗಳನ್ನು ಮಾಡಿಕೊಳ್ಳುತಲೇ ಇದ್ದು ಚುನಾವಣೆಯಲ್ಲಿ ಇದು ಹಿನ್ನಡೆಯಾಗಿ ಪರಿಣಮಿಸಬಹುದೇ ಎಂಬ ಅನುಮಾನ ಕಾಡುತ್ತಿದೆ. ಒಂದೆಡೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಸಂದರ್ಭದಲ್ಲಿ ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ನ ಮುಸ್ಲಿಂ ಮುಖಂಡರು ಭಾರೀ ಒತ್ತಡ ಹೇರಿದ್ದರು. ಅದರೆ […]

ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಿದ್ಧತೆ

Friday, March 16th, 2018
shakuntala-shetty

ಪುತ್ತೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲ ಬಾರಿಗೆ ದಕ್ಷಿಣಕನ್ನಡ ಜಿಲ್ಲೆಗೆ ಬರುತ್ತಿದ್ದು, ಇದೇ 20ರಂದು ಮಂಗಳೂರಿನಲ್ಲಿ ನಡೆಯುವ ಬೃಹತ್ ರ‍್ಯಾಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಹೆಚ್ಚಿನ ಮುತುವರ್ಜಿ ವಹಿಸಿ ತಮ್ಮ ಕ್ಷೇತ್ರಗಳಿಂದ ಹೆಚ್ಚಿನ ಕಾರ್ಯಕರ್ತರನ್ನು ಕರೆತಂದು ಶಕ್ತಿ ಪ್ರದರ್ಶನ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಬ್ಲಾಕ್ ಕಾಂಗ್ರೆಸ್ ವಿವಿಧ ವಿಭಾಗಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ಈಗಾಗಲೇ ಪಕ್ಷದ […]

ಬಿ.ಸಿ.ರೋಡ್: ‘ಬಂಟ್ವಾಳ ಟ್ರೋಫಿ-2018’ ಕ್ರಿಕೆಟ್ ಪಂದ್ಯಾಟ

Thursday, March 15th, 2018
ramanath-rai

ಬಂಟ್ವಾಳ: ಬೆಳ್ಳಿಪಾಡಿ ರಮಾನಾಥ ರೈ ಅಭಿಮಾನಿ ಬಳಗ ಮತ್ತು ಕಟ್ಟೆ ಫ್ರೆಂಡ್ಸ್ ಶಾಂತಿಯಂಗಡಿ ಇದರ ಜಂಟಿ ಆಶ್ರಯದಲ್ಲಿ “ಬಂಟ್ವಾಳ ಟ್ರೋಫಿ” 2018 ಕ್ರಿಕೆಟ್ ಪಂದ್ಯಾಟ ಬಿ.ಸಿ.ರೋಡ್ ಶಾಂತಿಯಂಗಡಿಯ ಅದ್ದೇಡಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಇದೇ ಸಂದರ್ಭದಲ್ಲಿ ಸಚಿವ ಬಿ.ರಮಾನಾಥ ರೈ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಸ್.ಎಂ.ಮಹಮ್ಮದ್, ಹಮೀದ್ ಕಣ್ಣೂರು, ನಾಸಿರ್ ಫರ್ಲಿಯಾ, ಹನೀಫ್ ಕೋಸ್ಟಲ್, ಮುಹಮ್ಮದ್ ಹನೀಫ್ ಅವರನ್ನು ಫ್ರೆಂಡ್ಸ್ ಬಳಗದ ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಪುರಸಭಾ ಸದಸ್ಯ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, […]

ಟೀಕಾಕಾರರ ಯಾವುದೇ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ: ಸಚಿವ ರೈ

Tuesday, March 13th, 2018
ramanath-rai

ಬಂಟ್ವಾಳ: “ಟೀಕಾಕಾರರ ಯಾವುದೇ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅಭಿವೃದ್ಧಿ ಕಾರ್ಯಗಳೇ ತನ್ನ ದಿಟ್ಟ ಉತ್ತರ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಸೋಮವಾರ ಬಿ.ಸಿ.ರೋಡಿನ ಮಿನಿವಿಧಾನಸೌಧದ ಬಳಿ ಇಂದಿರಾ ಕ್ಯಾಂಟೀನ್‌ಗೆ ಶಿಲಾನ್ಯಾಸ ನೆರವೇರಿಸಿ, ಬಂಟ್ವಾಳ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬುಡಾ ಅಧ್ಯಕ್ಷ ಸದಾಶಿವ ಬಂಗೇರ ಪ್ರಸ್ತಾವಿಸಿ, ಬಂಟ್ವಾಳದಲ್ಲಿ ವಾಹನ ನಿಬಿಡತೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಳೆದ 2009ರಿಂದ ಪುರಸಭಾ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬುಡಾ ಕಚೇರಿಯನ್ನು ಮಿನಿ ವಿಧಾನಸೌಧ ಮುಂಭಾಗದಲ್ಲಿರುವ […]

ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ

Friday, March 9th, 2018
ramanath-rai

ಬಂಟ್ವಾಳ: ಕಳ್ಳಿಗೆ ಗ್ರಾಮ ಆರ್ಥಿಕವಾಗಿ ಹಿಂದುಳಿದಿದ್ದು, ಈ ಗ್ರಾಮದ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಭರವಸೆ ನಿಡಿದ್ದಾರೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ ಹಾಗೂ ಸ್ವಚ್ಛತಾ ಕರೆಗಂಟೆ ಅಳವಡಿಸಿ, ಮೊಳಗಿಸುವ ಮೂಲಕ ಕಾಲಿಂಗ್ಬೆಲ್ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿ, ತಾಲೂಕಿನ 9 ಹೊಸ ಗ್ರಾಮ ಪಂಚಾಯತ್‌ಗಳಲ್ಲಿ ಕಳ್ಳಿಗೆ ಗ್ರಾಮ ಕೂಡಾ ಒಂದು. ಈ ಗ್ರಾಮದ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುವುದು ಎಂದು […]

ಸುರಕ್ಷಾ ಯಾತ್ರೆ ಜನರ ದಾರಿ ತಪ್ಪಿಸುವ ತಂತ್ರ: ಸಚಿವ ರೈ

Tuesday, March 6th, 2018
ramanath-rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷ ಹುಟ್ಟುಹಾಕಿ ಹಿಂಸೆಗೆ ಪ್ರಚೋದನೆ ನೀಡುತ್ತಾ ಬಂದಿರುವ ಬಿಜೆಪಿಯ ಜನ ಸುರಕ್ಷಾ ಯಾತ್ರೆ ಜನರನ್ನು ದಾರಿತಪ್ಪಿಸುವ ತಂತ್ರ ಎಂದು ಸಚಿವ ಬಿ.ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸಗಳನ್ನು ಮಾಡಿದವರು, ನೈತಿಕ ಪೊಲೀಸ್‌ ಗಿರಿ ಹೆಸರಿನಲ್ಲಿ ಶಾಂತಿ ಕದಡುತ್ತಿರುವವರು, ನಿಯೋಜಿತ ಕೊಲೆಗಳನ್ನು ನಡೆಸಿದವರು ಮತ್ತು ಅದನ್ನು ಸಮರ್ಥನೆ ಮಾಡಿಕೊಂಡು ಬಂದವರು ಯಾರು ಎಂಬುದು ಜನರಿಗೆ ತಿಳಿದಿದೆ. ಹಿಂಸೆಗೆ ಪ್ರಚೋದನೆ ನೀಡುತ್ತಾ ಬಂದಿರುವ ಬಿಜೆಪಿಗೆ ಜನಸುರಕ್ಷಾ […]

ಜನ ಸುರಕ್ಷಾ ಯಾತ್ರೆ ಜನರ ದಾರಿ ತಪ್ಪಿಸುವ ಯಾತ್ರೆ: ಸಚಿವ ರೈ

Monday, March 5th, 2018
ramanath-rai

ಮಂಗಳೂರು: ಬಿಜೆಪಿಯು ಜನ ಸುರಕ್ಷಾ ಯಾತ್ರೆಯನ್ನು ಪ್ರಚೋದನಾಕಾರಿ ಭಾಷಣ ಮಾಡುವ ಉದ್ದೇಶದಿಂದ ನಡೆಸಲಾಗುತ್ತಿದ್ದು, ಇದು ಜನರ ದಾರಿ ತಪ್ಪಿಸುವ ಯಾತ್ರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಆರೋಪಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಸಾಮಾಜಿಕ ಸಾಮರಸ್ಯವನ್ನು ಕದಡುವವರು, ಬಿಜೆಪಿಗೆ ಸುರಕ್ಷಾ ಯಾತ್ರೆ ಕೈಗೊಳ್ಳುವ ಯೋಗ್ಯತೆ ಇಲ್ಲ ಎಂದವರು ಹೇಳಿದರು. ಜಿಲ್ಲೆಯಲ್ಲಿ ಎರಡು ಮತೀಯ ಸಂಘಟನೆಗಳೇ ಘರ್ಷಣೆ, ಹತ್ಯೆ ಹಾಗೂ ಅಹಿತಕರ ಘಟನೆಗಳಿಗೆ ಕಾರಣವಾಗುತ್ತಿವೆ. ಯಾವುದೇ ಪ್ರಕರಣಗಳಲ್ಲಿ […]

ಹಿರಿಯ ಕಾಂಗ್ರೆಸ್ಸಿಗ, ಸಚಿವ ರೈ ಸಂಬಂಧಿ ಸಂಕಪ್ಪ ರೈ ನಿಧನ

Thursday, February 8th, 2018
sankappa-rai

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಜಿಲ್ಲಾ ಪರಿಷತ್ ಅಧ್ಯಕ್ಷರಾಗಿ ಅವಿಭಜಿತ ಜಿಲ್ಲೆಯಾದ್ಯಂತ ಹೆಸರು ಗಳಿಸಿದ್ದ, ಪುತ್ತೂರು ತಾಲೂಕಿನ ಪ್ರತಿಷ್ಠಿತ ಬೆಳ್ಳಿಪ್ಪಾಡಿ ಮನೆತನದವರಾದ ಬಿ. ಸಂಕಪ್ಪ ರೈ(85) ವಯೋಸಹಜ ಅನಾರೋಗ್ಯದಿಂದಾಗಿ ಇಂದು ಪುತ್ತೂರಿನಲ್ಲಿ ನಿಧನರಾದರು. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿಯವರಾದ ಬಿ.ಸಂಕಪ್ಪ ರೈ ಅವರು ಅವಿವಾಹಿತರಾಗಿದ್ದು, ಪುತ್ತೂರು ನಗರದ ಕೊಂಬೆಟ್ಟುವಿನಲ್ಲಿ ತನ್ನ ಮೊಮ್ಮಗನಾದ ಪುತ್ತೂರು ಪೂಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅವರೊಂದಿಗೆ ವಾಸವಾಗಿದ್ದರು. ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. […]

ಬೀಡಿ ಉದ್ಯಮದ ಸ್ಥಿತಿಗತಿ ಕುರಿತು ಪ್ರಧಾನಿ ಗಮನ ಸೆಳೆಯುತ್ತೇನೆ: ನಳಿನ್‌‌

Wednesday, January 31st, 2018
nalin-kumar

ಮಂಗಳೂರು: ಜಿಲ್ಲೆಯ ಅಭಿವೃದ್ಧಿಗೆ ಬೀಡಿ ಕಾರ್ಮಿಕರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜಿಲ್ಲೆಯ ಬೀಡಿ, ಗೇರು, ಹೆಂಚು ಉದ್ಯಮ ನಶಿಸಬಾರದು. ಇದರ ಪುನಶ್ಚೇತನಕ್ಕೆ ಎಲ್ಲರ ಸಹಕಾರ ಅಗತ್ಯ. ಬೀಡಿ ಉದ್ಯಮದ ಸ್ಥಿತಿಗತಿ ಮತ್ತದರ ಆವಶ್ಯಕತೆಯ ಬಗ್ಗೆ ಪ್ರಧಾನಿ ಸಹಿತ ಸಂಬಂಧಿತ ಸಚಿವರ ಗಮನ ಸೆಳೆಯುವುದಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್‌ ಹೇಳಿದರು. ಸೌತ್ ಕೆನರಾ ಉಡುಪಿ ಜಿಲ್ಲಾ ಬೀಡಿ ಗುತ್ತಿಗೆದಾರರ ಸಂಘದ ವತಿಯಿಂದ ನಗರದ ಪುರಭವನದಲ್ಲಿ ನಡೆದ ಬೀಡಿ ಕಾರ್ಮಿಕರ ಮತ್ತು ಗುತ್ತಿಗೆದಾರರ ಜಂಟಿ […]

ದ.ಕ. ಜಿಲ್ಲೆಯಲ್ಲಿ 10 ಇಂದಿರಾ ಕ್ಯಾಂಟೀನ್‌: ರೈ

Saturday, January 27th, 2018
indira-canteen

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ 10 ಇಂದಿರಾ ಕ್ಯಾಂಟೀನ್‌ಗಳು ಮಂಜೂರಾಗಿದ್ದು ಶೀಘ್ರ ಕಾರ್ಯಾರಂಭಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ನೆಹರೂ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣಗೈದು ಅವರು ಗಣ ರಾಜ್ಯೋತ್ಸವ ಸಂದೇಶ ನೀಡಿದರು. ಜಿಲ್ಲೆಯಲ್ಲಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ, ಮೈತ್ರಿ ಹಾಗೂ ವಿದ್ಯಾಸಿರಿ ಯೋಜನೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿವೆ ಎಂದರು. ದ.ಕ. ಜಿಲ್ಲೆಯ ಇತಿಹಾಸದಲ್ಲೇ ಅತ್ಯಧಿಕ ಸಂಖ್ಯೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದ್ದು […]