ಅನಂತ್ ಕುಮಾರ್ ನಿಧನ: ರಾಜ್ಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Monday, November 12th, 2018
ananth-kumar

ಬೆಂಗಳೂರು: ಕೇಂದ್ರ ಸಚಿವ ಹೆಚ್.ಎನ್. ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಶೋಕಾಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂತಾಪ‌ ಸೂಚಕವಾಗಿ ರಾಜ್ಯ ಸರ್ಕಾರ ಸರ್ಕಾರ ರಜೆ ಘೋಷಿಸಿದೆ. ಈ ವೇಳೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಮಾರಂಭಗಳ ಆಯೋಜನೆ ಮಾಡದಂತೆ‌ ಸುತ್ತೋಲೆ ಹೊರಡಿಸಿದೆ. ಈ ನಡುವೆ ಮೈಸೂರು ವಿವಿ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಮೈಸೂರು ವಿವಿ ಆದೇಶ ಹೊರಡಿಸಿದೆ. ಇತರೆ ವಿವಿಗಳ […]

ತೀವ್ರ ಹಣಕಾಸು ಮುಗ್ಗಟ್ಟು, ಆಸ್ತಿ ತೆರಿಗೆ ಹೆಚ್ಚಿಸಲು ಮುಂದಾದ ಬಿಬಿಎಂಪಿ

Saturday, February 23rd, 2013
BBMP property tax

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಹೆಚ್ಚಿಸಲು ಉದ್ದೇಶಿಸಿದೆ. ಹಣಕಾಸಿನ ತೀವ್ರ ಮುಗ್ಗಟ್ಟನ್ನು  ಬಿಬಿಎಂಪಿ ಎದುರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.  ಅಲ್ಲದೆ  `ಕರ್ನಾಟಕ ಮುನ್ಸಿಪಲ್ ಕಾರ್ಪೊರೇಶನ್ (ಕೆಎಂಸಿ) ಕಾಯ್ದೆ ಪ್ರಕಾರ, ಮೂರು ವರ್ಷದಲ್ಲಿ ಒಂದು ಸಲ ಕನಿಷ್ಠ ಶೇಕಡಾ 15 ಮತ್ತು ಗರಿಷ್ಠ 30ರಷ್ಟು ತೆರಿಗೆ ಹೆಚ್ಚಿಸುವುದು ಕಡ್ಡಾಯವಾಗಿದೆ. ಈ ಹಿಂದೆ 2008ರಲ್ಲಿ ಆಸ್ತಿ ತೆರಿಗೆ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ಅದಾದ ನಂತರ 2011ರ ಏಪ್ರಿಲ್‌ನಲ್ಲಿ ಬಿಬಿಎಂಪಿ ತೆರಿಗೆ ಹೆಚ್ಚಳಕ್ಕೆ […]

ಬಿಬಿಎಂಪಿ ಮೇಯರ್ ಡಿ. ವೆಂಕಟೇಶಮೂರ್ತಿ ಹಾಗೂ ಉಪ ಮೇಯರ್ ಎಲ್. ಶ್ರೀನಿವಾಸ್ ಆಯ್ಕೆ

Friday, April 27th, 2012
BBMP mayor deputy mayor

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 46ನೇ ಮೇಯರ್ ಆಗಿ ಬಿಜೆಪಿಯ ಡಿ. ವೆಂಕಟೇಶಮೂರ್ತಿ ಹಾಗೂ 47ನೇ ಉಪ ಮೇಯರ್ ಆಗಿ ಎಲ್. ಶ್ರೀನಿವಾಸ್ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಾಲಿಕೆಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಔಪಚಾರಿಕವಾಗಿ ನಡೆದ ಚುನಾವಣೆಯಲ್ಲಿ ಮೇಯರ್, ಉಪ ಮೇಯರ್ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪ್ರಾದೇಶಿಕ ಆಯುಕ್ತ ಶಂಭು ದಯಾಳ್ ಮೀನಾ ಪ್ರಕಟಿಸಿದರು. ಮೇಯರ್ ಸ್ಥಾನಕ್ಕೆ ಪೈಪೋಟಿ ಇದ್ದರೂ ಡಿ. ವೆಂಕಟೇಶಮೂರ್ತಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಉಪ ಮೇಯರ್ ಸ್ಥಾನಕ್ಕೆ […]