Blog Archive

ಶಿರೂರು ಶ್ರೀಗಳ ಸಾವು ಅಸಹಜ..ದೃಢಪಟ್ಟಲ್ಲಿ ಸೂಕ್ತ ತನಿಖೆ: ಡಾ. ಜಿ.ಪರಮೇಶ್ವರ್‍

Thursday, July 19th, 2018
parameshwar

ಬೆಂಗಳೂರು: ಉಡುಪಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‍ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದಿನ ಪರ್ಯಾಯ ಅವಧಿಯಲ್ಲಿ ಶ್ರೀಗಳು ಸಾಕಷ್ಟು ಉತ್ತಮ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ಹಲವು ಕಾರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ವಿಚಾರ ಮಾಡಲಾಗುವುದು. ಅವರ ಸಾವು ಅಸಹಜ ಎಂದು ದೃಢಪಟ್ಟಲ್ಲಿ ಸೂಕ್ತ ತನಿಖೆ ನಡೆಸಲಾಗುವುದು ಎಂದರು. ಶ್ರೀಗಳ ಅಗಲಿಕೆ ಧಾರ್ಮಿಕ ಕ್ಷೇತ್ರದಲ್ಲಿ ತುಂಬಲಾಗದ ನಷ್ಟವಾಗಿದೆ. ಕೇವಲ 55 ವರ್ಷಕ್ಕೆ ಅವರು ನಿಧನರಾಗಿದ್ದಾರೆ. ಆಸ್ಪತ್ರೆಯ ಮೂಲಗಳಿಂದ […]

ಶ್ರೀಗಳ ಅಗಲಿಕೆಯಿಂದ ಇಡೀ ಭಕ್ತ ಸಮೂಹಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ: ಹೆಚ್.ಡಿ.ದೇವೇಗೌಡ

Thursday, July 19th, 2018
devegowda

ಬೆಂಗಳೂರು: ಉಡುಪಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಶ್ರೀಗಳ ಅಗಲಿಕೆಯಿಂದ ಇಡೀ ಭಕ್ತ ಸಮೂಹಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಗಳು ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ಶಿರೂರು ಶ್ರೀಗಳು ಅತ್ಯಂತ ಕಿರಿಯ ವಯಸ್ಸಿನಲ್ಲೇ ಸನ್ಯಾಸತ್ವವನ್ನು ತೆಗೆದುಕೊಂಡವರು. ಶ್ರೀಗಳಿಗೆ ಸಾಹಿತ್ಯ ಮತ್ತು ಸಂಗೀತದ ಬಗ್ಗೆ ಬಹಳ ಆಸಕ್ತಿ ಇತ್ತು ಎಂದು ಅವರನ್ನು ಗುಣಗಾನ ಮಾಡಿದರು. ಸಮಾಜವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವಲ್ಲಿ ಶ್ರೀಗಳು ಮಾರ್ಗದರ್ಶಕರಾಗಿದ್ದರು ಎಂದು […]

ಸಹೋದರನ ಅನಾರೋಗ್ಯದ ಕಾರಣದಿಂದಾಗಿ‌ ದೆಹಲಿಗೆ ತೆರಳಲಿಲ್ಲ: ಡಾ.ಜಿ. ಪರಮೇಶ್ವರ್

Wednesday, July 18th, 2018
g-parameshwar

ಬೆಂಗಳೂರು: ಸಹೋದರನ ಅನಾರೋಗ್ಯದ ಕಾರಣದಿಂದಾಗಿ‌ ದೆಹಲಿಗೆ ತೆರಳಲಿಲ್ಲ. ಇದರ ಹೊರತು ಬೇರೆ ಯಾವುದೇ ಕಾರಣ ಇಲ್ಲ, ಸರಿಯಾಗಿ ಆಹ್ವಾನ ಬಂದಿರಲಿಲ್ಲ ಎನ್ನುವುದೆಲ್ಲಾ ಸತ್ಯಕ್ಕೆ ದೂರವಾದ ಮಾತುಗಳು ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಸ್ಪಷ್ಟೀಕರಣ ನೀಡಿದ್ದಾರೆ. ವಿಧಾನಸೌಧದಲ್ಲಿ‌ ಸುದ್ದಿಗಾರರ ಜೊತೆ ಮಾತನಾಡಿದ ಅವರು , ನಮ್ಮ ಅಣ್ಣನ ಆರೋಗ್ಯ ಗಂಭೀರವಾಗಿದೆ. ಹೀಗಾಗಿ ನಾನು ದೆಹಲಿಗೆ ಹೋಗಲಿಲ್ಲ. ಕಾವೇರಿ ವಿಚಾರ ಸಭೆ ಸಂಬಂಧ ಸಂಸದರಿಗೆ ಮಾಹಿತಿ ನೀಡಿಲ್ಲ ಅನ್ನೋದು ತಪ್ಪು. ಎಲ್ಲರಿಗೂ ಸರ್ಕಾರದ ವತಿಯಿಂದ ಮಾಹಿತಿ ಹೋಗಿದೆ ಅನ್ನಿಸುತ್ತದೆ ಎಂದರು. […]

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಯಾವುದೇ ಸಮಸ್ಯೆ ಇಲ್ಲ: ಡಿ.ಸಿ‌.ತಮ್ಮಣ್ಣ

Wednesday, July 18th, 2018
d-c-tamanna

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಯಾವುದೇ ಸಮಸ್ಯೆ ಇಲ್ಲ. ಇನ್ನೊಂದು ವಾರದಲ್ಲಿ ಬಸ್ ಪಾಸ್ ಕುರಿತು ಅಧಿಕೃತ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಸಾರಿಗೆ ಸಚಿವ ಡಿ.ಸಿ‌.ತಮ್ಮಣ್ಣ ಹೇಳಿದ್ದು, ಜೊತೆಗೆ ಬಸ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಬಂದಿರುವ ಮಾಹಿತಿ ನೀಡಿ ಪ್ರಯಾಣ ದರ ಹೆಚ್ಚಳ ಸಾಧ್ಯತೆಯ ಸುಳಿವು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಚಿತ ಬಸ್ ಪಾಸ್ಗೆ 2 ಸಾವಿರ ಕೋಟಿ ರೂ. ಖರ್ಚು ಬರಲಿದೆ. ಶಿಕ್ಷಣ ಮಂತ್ರಿಗಳು ಶಿಕ್ಷಣ ಇಲಾಖೆಯಿಂದ ಶೇ. 25ರಷ್ಟು […]

ಮುಖ್ಯಮಂತ್ರಿಯಾಗಿ ನಿಮಗೆ ಅಮೃತ ಕೊಟ್ಟು ನಾನು ವಿಷ ಕುಡಿಯುತ್ತೇನೆ: ಹೆಚ್.ಡಿ.ಕುಮಾರಸ್ವಾಮಿ

Saturday, July 14th, 2018
kumarswamy-sarkar

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿದ್ದೇನೆ. ಸಿದ್ದರಾಮಯ್ಯ ಅವರು ಕೊಟ್ಟಿರುವ ಮಾತನ್ನು ನಾನು ಉಳಿಸಿಕೊಳ್ಳಬೇಕು ಎಂದು ಜೆಡಿಎಸ್ ಕಚೇರಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಸಿದ್ದರಾಮಯ್ಯನವರು ಮಾಡಿದ್ದ 50,000 ರೂ.ವರೆಗಿನ ಸಾಲ ಮನ್ನಾದ 8,000 ಕೋಟಿ ಬಾಕಿಯನ್ನೂ ನಾನೇ ತೀರಿಸಬೇಕಾಗಿದೆ. ನಾನು ಚಾಲೆಂಜ್ ಆಗಿ ಸ್ವೀಕರಿಸಿ ರೈತರ ಒಂದು ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡಲು ತೀರ್ಮಾನಿಸಿದ್ದೇನೆ. ಆದರೆ, ರೈತರು ಅನ್ನ ಕೊಡ್ತೀರೋ.. ವಿಷ  ಕೊಡ್ತೀರೋ ತೀರ್ಮಾನಿಸಿ… ನಿಮ್ಮ ತೀರ್ಮಾನದಿಂದ ನನಗೆ ನಷ್ಟವಿಲ್ಲ. ನನಗೆ ಇದು ದೇವರು ಕೊಟ್ಟ ಅಧಿಕಾರ. ಆದರೆ, ಅಧಿಕಾರದಲ್ಲಿ […]

ಯಾರಿಗೇ ಆಗಲಿ ಒತ್ತಡ ಹೇರುವುದಕ್ಕೂ ಒಂದು ಲಿಮಿಟ್ ಇರುತ್ತದೆ: ಡಿ.ಕೆ.ಶಿವಕುಮಾರ್

Saturday, July 14th, 2018
d-k-shivkumar

ಬೆಂಗಳೂರು: ಸಿಎಂ ಕುಮಾರಸ್ವಾಮಿ ‌ಈಗಾಗಲೇ ಅಕ್ಕಿ ವಿತರಣೆಯ ವಿಚಾರ ಸ್ಪಷ್ಟಪಡಿಸಿದ್ದು,‌ 7 ಕೆಜಿ ಅಕ್ಕಿ ಕೊಡುವುದರಿಂದ 2,500 ಕೋಟಿ‌ ರೂ. ಹೊರೆಯಾಗುತ್ತದೆ. ಯಾರಿಗೇ ಆಗಲಿ ಒತ್ತಡ ಹೇರುವುದಕ್ಕೂ ಒಂದು ಲಿಮಿಟ್ ಇರುತ್ತದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸ ಸದಾಶಿವ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 2 ಕೆಜಿ‌ ಪಡಿತರ ಅಕ್ಕಿ ಖಡಿತ ಬಗ್ಗೆ ಸಿಎಂಗೆ ಸಿದ್ದರಾಮಯ್ಯ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ ಈ ಹೇಳಿಕೆ ನೀಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯಗೆ ಪರೋಕ್ಷವಾಗಿ […]

ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಮುಂದಾಗಿರುವ ಸರ್ಕಾರ..!

Saturday, July 14th, 2018
plastic-bottle

ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಮುಂದಾಗಿರುವ ಸರ್ಕಾರ, ತನ್ನಿಂದಲೇ ಮೊದಲ್ಗೊಂಡು ಪ್ಲಾಸ್ಟಿಕ್ ಬಳಸದಿರುವ ನಿರ್ಧಾರ ಕೈಗೊಂಡಿದೆ. ಹೌದು, ಈಗಾಗಲೇ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುತ್ತಲೇ ಬರುತ್ತಿದೆ. ಆದರೆ ಈ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳೇ ಪ್ಲಾಸ್ಟಿಕ್ ಬಳಕೆಯಲ್ಲಿ ಸ್ವನಿಯಂತ್ರಣ ತರುವಲ್ಲಿ ಹಿಂದೇಟು ಹಾಕುತ್ತಿವೆ. ಇದೀಗ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ, ಸರ್ಕಾರಿ ಕಚೇರಿಗಳಲ್ಲಿ ಇದರ ಅನುಷ್ಠಾನಕ್ಕೆ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಇಂದು 56 ನೇ ಹುಟ್ಟುಹಬ್ಬದ ಸಂಭ್ರಮ..!

Thursday, July 12th, 2018
shivrajkumar

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ತಮ್ಮ 56 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿ ಮಾನ್ಯತಾ ಟೆಕ್ ಪಾರ್ಕಿನಲ್ಲಿರುವ ಶಿವಣ್ಣ ನಿವಾಸದಲ್ಲಿ ಕುಟುಂಬದವರು ಹಾಗೂ ಆಪ್ತರು ಶಿವಣ್ಣನ ಬರ್ತಡೇ ಆಚರಿಸಿದರು. ನಿನ್ನೆ ರಾತ್ರಿಯಿಂದಲೇ ಶಿವಣ್ಣ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಪತ್ನಿ ಗೀತಾ, ಮಕ್ಕಳು, ಸ್ನೇಹಿತರೊಂದಿಗೆ ಶಿವಣ್ಣ ಅವರಿಗಾಗಿ ತರಿಸಿದ್ದ ವಿಶೇಷ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು. ರಾತ್ರಿಯೇ ಹುಟ್ಟುಹಬ್ಬದ ಶುಭಾಶಯ ಕೋರಲು ಬಹಳಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಶಿವಣ್ಣ ಮನೆ ಮುಂದೆ ಜಮಾಯಿಸಿದ್ದರು. ಜನರನ್ನು ನಿಯಂತ್ರಿಸಲು […]

ಸರ್ಕಾರಿ ಬಸ್‌ಗಳ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ: ತಮ್ಮಣ್ಣ

Wednesday, July 11th, 2018
d-c-thamanna

ಬೆಂಗಳೂರು: ಪ್ರಯಾಣಿಕರಿಗೆ ಹೊರೆಯಾಗಬಾರದೆಂಬ ದೃಷ್ಟಿಯಿಂದ ಬಿಎಂಟಿಸಿ ಬಸ್‌ ದರ ಏರಿಕೆ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ. ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೀಸೆಲ್‌ ದರ ಹೆಚ್ಚಳವಾದ್ದರಿಂದ ಬಿಎಂಟಿಸಿ ಮೇಲೆ ಕೆಲ ಮಟ್ಟಿಗೆ ಆರ್ಥಿಕ ಹೊರೆ ಉಂಟಾಗಿದೆ ಆದಾಗ್ಯೂ ಕೂಡ ಪ್ರಯಾಣಿಕರಿಗೆ ಭಾರವಾಗದಿರಲಿ ಎನ್ನುವ ಕಾರಣಕ್ಕಾಗಿ ಸಧ್ಯಕ್ಕೆ ಬಿಎಂಟಿಸಿ ದರವನ್ನು ಹೆಚ್ಚಿಸುವ ಯೋಚನೆ ಇಲ್ಲ ಎಂದು ಹೇಳಿದರು. ಸದ್ಯಕ್ಕೆ ಬೆಂಗಳೂರಲ್ಲಿ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವ ಸಿದ್ದರಾಮಯ್ಯ […]

ತಮಿಳುನಾಡಿಗೆ ಅಗತ್ಯವಾದಷ್ಟು ನೀರು ಬಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ

Tuesday, July 10th, 2018
kumarswamy-2

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ಪಾತ್ರದ ಜಲಾಶಯಗಳು ತುಂಬಿದ್ದು, ತಮಿಳುನಾಡಿಗೆ ಅಗತ್ಯವಾದಷ್ಟು ನೀರು ಬಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಮಂಡಳಿ ಸಭೆಯಲ್ಲಿ ತಮಿಳುನಾಡಿಗೆ ಜುಲೈ ತಿಂಗಳಲ್ಲಿ 34 ಟಿಎಂಸಿ ನೀರು ಹರಿಸುವಂತೆ ಸೂಚಿಸಲಾಗಿದೆ. ಇನ್ನು 50 ಟಿಎಂಸಿ ನೀರಿಗೆ ತಮಿಳುನಾಡಿನಿಂದ ಬೇಡಿಕೆ ಬರುವ ಸಾಧ್ಯತೆ ಇದ್ದು, ಒಟ್ಟು ಜುಲೈ ಮತ್ತು ಆಗಸ್ಟ್ತಿಂಗಳಲ್ಲಿ 84 ಟಿಎಂಸಿ ನೀರು ಪಡೆದುಕೊಳ್ಳಲು ತಮಿಳುನಾಡು ಸರ್ಕಾರ ಒತ್ತಡ ಹೇರುತ್ತಿದೆ. ಸುಪ್ರೀಂ […]