Blog Archive

ಬೆಳ್ತಂಗಡಿ : ದಂತಚೋರರ ಬಂಧನ; 30 ಲಕ್ಷ ರೂ. ಮೌಲ್ಯದ ಎರಡು ಆನೆದಂತ ವಶ

Wednesday, January 8th, 2020
beltangady

ಬೆಳ್ತಂಗಡಿ : ಆನೆ ದಂತ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ದಂತಚೋರರಿಂದ 30 ಲಕ್ಷ ರೂ. ಮೌಲ್ಯದ ಎರಡು ಆನೆದಂತಗಳನ್ನು ವಶಪಡಿಸಿಕೊಂಡಿದ್ದಾರೆ. ಮಡಿಕೇರಿಯ ಹೆರವನಾಡು ಗ್ರಾಮದ ಅಪ್ಪಂಗಳ ನಿವಾಸಿ ಪಿ.ಕೆ.ದಿನೇಶ (33), ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮ ಕುಂಬರಡಿ ನಿವಾಸಿ ವಿ.ಕುಮಾರ (37) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಪುತ್ತೂರು ಅರಣ್ಯ ಸಂಚಾರಿ ದಳದ ಸಿಬ್ಬಂಧಿಗಳು ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಎಂಬಲ್ಲಿ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಿ ಎರಡು ಆನೆ ದಂತ, ಓಮ್ನಿ […]

ಬೆಳ್ತಂಗಡಿ : ಬಸ್-ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸಾವು

Friday, December 27th, 2019
belthangady

ಬೆಳ್ತಂಗಡಿ : ಚರ್ಚ್ ರೋಡ್ ಬಳಿ ಬಸ್ ಹಾಗೂ ಬೈಕ್ ನಡುವೆ ಸಂಬಂಧಿಸಿದ ಅಪಘಾತದಲ್ಲಿ ಬೈಕ್ ಸವಾರ ಉಮೇಶ್ ದೇವಾಡಿಗ ಎಂಬವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೈಕ್ ಮತ್ತು ಬಸ್ ಮುಖಾಮುಖಿ ಢಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬೆಳ್ತಂಗಡಿ ಮೊದಲ ಬಾರಿಗೆ ಪೋಲಿಸ್ ಪೇದೆ ಲಿಖಿತ ಪರೀಕ್ಷೆ : 125 ಹುದ್ದೆಗೆ 3200 ಮಂದಿ ಹಾಜರು

Monday, November 18th, 2019
police-pede

ಬೆಳ್ತಂಗಡಿ : ಪೊಲೀಸ್ ಇಲಾಖೆಯಲ್ಲಿ ಪೋಲಿಸ್ ಪೇದೆಗಳ ನೇಮಕಾತಿಗಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಲಿಖಿತ ಪರೀಕ್ಷೆ ನಡೆಯಿತು. ದ.ಕ.ಜಿಲ್ಲೆಯ 125 ಪಿ.ಸಿಗಳ ಆಯ್ಕೆಗೆ ರಾಜ್ಯದ 4,100 ಮಂದಿ ಅರ್ಜಿ ಸಲ್ಲಿಸಿದ್ದರು.ಈ ಪೈಕಿ 3200 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. ಗ್ರಾಮೀಣ ಭಾಗದ ಮಂದಿಗೂ ಸೂಕ್ತ ಅವಕಾಶ ಕಲ್ಪಿಸಬೇಕು ಎಂಬ ದೃಷ್ಟಿಯಿಂದ ಮೊಟ್ಟ ಮೊದಲ ಬಾರಿಗೆ ತಾಲೂಕಿನಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಪೋಲೀಸ್ ಪೇದೆ ಆಯ್ಕೆ ಪ್ರಕ್ರಿಯೆಯನ್ನು ಸರಕಾರ ನಡೆಸಿದೆ. […]

ಕರ್ನಾಟಕದಲ್ಲಿ ಪುನಃ ಗೋಹತ್ಯೆ ನಿಷೇದ ಕಾನೂನು ಜಾರಿಗೊಳಿಸಿ ಮನವಿ

Tuesday, October 22nd, 2019
hindu-jana-jagrati

ಬೆಳ್ತಂಗಡಿ : 2010 ರಲ್ಲಿ ಆಗಿನ ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕಾನೂನು ಜಾರಿಗೊಳಿಸಿತ್ತು. 2014ರಲ್ಲಿ ಕಾಂಗ್ರೆಸ್ ಆಡಳಿತ ಸರಕಾರ ಅಧಿಕಾರಕ್ಕೆ ಬಂದ ಬಳಿಕ ತಕ್ಷಣವೇ ಆ ಕಾನೂನನ್ನು ರದ್ದುಗೊಳಿಸಿತ್ತು. ಈಗ ಪುನಃ ಸುದೈವದಿಂದ ಭಾರತೀಯ ಜನತಾಪಕ್ಷವು ಅಧಿಕಾರದಲ್ಲಿದೆ. ಆದುದರಿಂದ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪರವರು ರಾಜ್ಯದಲ್ಲಿ ಪುನಃ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಬೇಕು ಮತ್ತು ಗೋಮಾಂಸ ಮಾರಾಟ ಮತ್ತು ಸಾಗಾಣಿಕೆಯ ಮೇಲೆ ಕಠಿಣ ನಿರ್ಬಂಧವನ್ನು ವಿಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಶ್ರೀ […]

ಬೆಳ್ತಂಗಡಿ ಸಮೀಪ 51 ಕೆ.ಜಿ.ಯ 10 ಆನೆ ದಂತ ವಶ

Wednesday, September 18th, 2019
Danta

ಬೆಳ್ತಂಗಡಿ : ಪುತ್ತೂರು ಸಂಚಾರಿ ಅರಣ್ಯ ದಳ( ಎಫ್.ಎಂ.ಎಸ್.) ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ  ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ 51ಕೆ.ಜಿ. ಆನೆ ದಂತ ವಶಕ್ಕೆ ಪಡೆದ ಘಟನೆ ಬುಧವಾರ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಸುರ್ಯ ಸಮೀಪದ ಮನೆಯೊಂದಕ್ಕೆ ದಾಳಿ ನಡೆಸಿ 51 ಕೆ.ಜಿ.ಯ 10 ಆನೆ ದಂತ ವಶಕ್ಕೆ ಪಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಮೂರು ತಿಂಗಳಿಂದ ಆನೆ ದಂತ ದಾಸ್ತಾನು ಇರಿಸಿದ್ದು ಮಾತ್ರವಲ್ಲದೆ ಮಾರಾಟ ಜಾಲದ ಕುರಿತು ಇಲಾಖೆಗೆ ಮಾಹಿತಿ ಲಭಿಸಿತ್ತು. […]

ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ

Wednesday, September 4th, 2019
orenge-alert

ಮಂಗಳೂರು : ಕರಾವಳಿಯಲ್ಲಿ ಸೆ. 4 ರ ಬುಧವಾರ ಉತ್ತಮ ಮಳೆ ಸುರಿದಿದ್ದು, ಇನ್ನೆರಡು ದಿನ ಮಳೆ ತೀವ್ರವಾಗಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಸುರಿದ ಮಳೆ ಹಲವೆಡೆ ಹಾನಿ ಉಂಟು ಮಾಡಿದ್ದು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದ ಚಾರ್ಮಾಡಿ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಇನ್ನು ಇದರೊಂದಿಗೆ ಸಮುದ್ರದ ಅಬ್ಬರವೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಸೆ.2 ರಿಂದಲೇ ನಾಲ್ಕು ದಿನಗಳವರೆಗೆ ಅರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಅಲರ್ಟ್ ಗುರುವಾರದವರೆಗೆ ಘೋಷಿಸಲಾಗಿದ್ದರೂ, […]

ಕರಾವಳಿಯಲ್ಲಿ ಮತ್ತೆ ಮುಂದುವರಿದ ಮಳೆ

Wednesday, September 4th, 2019
ಕರಾವಳಿಯಲ್ಲಿ ಮತ್ತೆ ಮುಂದುವರಿದ ಮಳೆ

ಮಂಗಳೂರು : ಕರಾವಳಿ, ಮಲೆನಾಡಿ ನಾದ್ಯಂತ ಮಂಗಳವಾರ ಉತ್ತಮ ಮಳೆ ಸುರಿದಿದ್ದು, ಕೆಲವೆಡೆಗಳಲ್ಲಿ ಹಾನಿಯನ್ನೂ ಉಂಟು ಮಾಡಿದೆ. ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದ ಚಾರ್ಮಾಡಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕಡಲಬ್ಬರ ಕೂಡ ಅಧಿಕವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗಿ ನಿಂದಲೇ ದಿನವಿಡೀ ಆಗಾಗ ಮಳೆ ಸುರಿದಿದೆ. ಕರಾವಳಿಯಲ್ಲಿ ಸೋಮವಾರದಿಂದ ನಾಲ್ಕು ದಿನಗಳ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸ ಲಾಗಿತ್ತು. ಅಲರ್ಟ್‌ ಗುರುವಾರದ ತನಕ ಇರಲಿದ್ದು, ಕರಾವಳಿ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ ಎಂಬುದಾಗಿ ಹವಾಮಾನ […]

ಪ್ರಪಾತಕ್ಕೆ ಬಿದ್ದು ಬೆಳ್ತಂಗಡಿ ನಿವಾಸಿ ಅಮೆರಿಕಾದಲ್ಲಿ ಸಾವು

Tuesday, August 27th, 2019
Beltangady

ಬೆಳ್ತಂಗಡಿ : ತಾಲೂಕಿನ ನಿಟ್ಟಡೆ ಗ್ರಾಮದ ಫಂಡಿಜೆ ಮೂಲದ ಪ್ರಸ್ತುತ ಅಮೆರಿಕಾದಲ್ಲಿ ವಾಸ್ತವ್ಯವಿದ್ದ ಚೈತನ್ಯ ಸಾಠೆ (36) ಆ. 24 ರಂದು ಪರ್ವತಾ ಅವರೋಹಣ ಸಂದರ್ಭ ಪ್ರಪಾತಕ್ಕೆ ಬಿದ್ದು ದುರ್ಮರಣವನ್ನಪ್ಪಿದ ಘಟನೆ ನಡೆದಿದೆ. ಅಮೆರಿಕಾದ ಮೌಂಟ್ ಹುಡ್ ಲೋವರ್‌ ಜಾರ್ಜ್‌ನ ಟೆರ್ರಾಬಾನ್ ವ್ಯಾಪ್ತಿಯ ಸ್ಮಿತ್ ರಾಕ್‌ಸ್ಟೇಟ್ ಪಾರ್ಕ ಎಂಬಲ್ಲಿ 100 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಇವರು ಪೋರ್ಟ್‌ಲ್ಯಾಂಡ್ ಮೂಲದ ಮಾಝಾಮಾಸ್‌ ಎಂಬ ಪರ್ವತಾರೋಹಿ ಸಂಘಟನೆಯಲ್ಲಿದ್ದು ಅನೇಕ ಚಾರಣಗಳಲ್ಲಿ ಪಾಲ್ಗೊಂಡಿದ್ದ ಇವರು ಸ್ಮಿತ್‌ರಾಕ್ ಗಿರಿಶಿಖರವನ್ನು ಇಳಿಯುತ್ತಿರುವ ಸಂದರ್ಭ […]

ಪ್ರವಾಹ ಪೀಡಿತ ತಾಲ್ಲೂಕು ಎಂದು ಬೆಳ್ತಂಗಡಿಯನ್ನು ಘೋಷಿಸಲು ಯು.ಟಿ.ಖಾದರ್ ಮನವಿ

Tuesday, August 13th, 2019
UT-khader

ಮಂಗಳೂರು:  ಬೆಳ್ತಂಗಡಿಯನ್ನು ಪ್ರವಾಹ ಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಬೇಕು. ಅಲ್ಲದೆ, ಪರಿಹಾರ ರೂಪವಾಗಿ ಕೊಡಗು ಮಾದರಿ ಪ್ಯಾಕೇಜ್ ನೀಡಬೇಕು ಎಂದು ಶಾಸಕ ಯು.ಟಿ.ಖಾದರ್ ಹೇಳಿದರು‌. ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಪ್ರವಾಹಕ್ಕೆ ಸಿಲುಕಿದ್ದ ಕೊಡಗಿಗೆ ಸಮ್ಮಿಶ್ರ ಸರ್ಕಾರ ನೀಡಿದ ಯೋಜನೆಗೆ ಇನ್ನಷ್ಟು ಪರಿಹಾರ ಸೇರಿಸಿ ಕೊಡಲಿ. ಮನೆ ಕಳೆದುಕೊಂಡವರು ಈಗಲೂ ನಿರಾಶ್ರಿತರ ಕೇಂದ್ರದಲ್ಲಿದ್ದಾರೆ. ಕೊಡಗಿನಲ್ಲಿ ತಕ್ಷಣದ ಖರ್ಚು ವೆಚ್ಚಕ್ಕಾಗಿ ಸಂತ್ರಸ್ತರಿಗೆ ₹ 3-5 ಸಾವಿರ ನೀಡಿದ್ದೆವು. ವಾರದೊಳಗೆ ಲಕ್ಷ ರೂಪಾಯಿ ನೀಡಿದ್ದೆವು‌ ಎಂದು […]

ಬೆಳ್ತಂಗಡಿ : ನೆರೆ ಸಂತ್ರಸ್ತರಿಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ ಆಟೋ ಚಾಲಕ

Tuesday, August 13th, 2019
Auto driver

ಬೆಳ್ತಂಗಡಿ  : ಆಟೋ ಚಾಲಕರೊಬ್ಬರು ನೆರೆ ಸಂತ್ರಸ್ತರಿಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ. ಬೆಳ್ತಂಗಡಿಯ ಆಟೋ ಚಾಲಕ ನೆರೆ ಸಂತ್ರಸ್ತರಿಗೆ ಬರೋಬ್ಬರಿ 1 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹೊನ್ನಪ್ಪ ಗೌಡ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನೆರ ಸಂತ್ರಸ್ತರಿಗೆ ನೆರವಾಗಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಮನವಿಗೆ ಸ್ಪಂದಿಸಿದ ಆಟೋ ಚಾಲಕ ಹೊನಪ್ಪ ಗೌಡ ಅವರು […]